Thursday, April 25, 2024
spot_img
HomeChamarajanagarಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿ: ಶಾಸಕರಾದ ಎನ್. ಮಹೇಶ್

ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿ: ಶಾಸಕರಾದ ಎನ್. ಮಹೇಶ್

ಚಾಮರಾಜನಗರ: ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳ ವಿಶ್ವಾಸ ಸಹಕಾರ ಪಡೆದು ಮಹತ್ವಾಕಾಂಕ್ಷಿಯ ಜಲ ಜೀವನ್ ಮಿಷನ್ ಯೋಜನೆಯನ್ನು ಸಂಪೂರ್ಣ ಯಶಸ್ವಿಗೆ ಅನುಷ್ಠಾನಕ್ಕೆ ಮುಂದಾಗುವAತೆ ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು.

ಕೊಳ್ಳೇಗಾಲದ ತಾಲೂಕು ಪಂಚಾಯತಿ ಸಭಾಂಗಣದಲ್ಲಿAದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಜಲ ಜೀವನ್ ಮಿಷನ್ ಯೋಜನೆ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಬಾವಿಗಳು ಇನ್ನಿತರ ನೀರಿನ ಸಂಗ್ರಹದ ಸುಸ್ಥಿರ ಮೂಲಗಳಿಂದ ನೀರಿನ ಹಾಹಾಕಾರ ಉಲ್ಬಣಿಸದಂತೆ ಗ್ರಾಮಸ್ಥರು ನೋಡಿಕೊಳ್ಳುತ್ತಿದ್ದರು. ಇಂದು ಜಲ ಜೀವನ್ ಮಿಷನ್ ಯೋಜನೆಯು ನೀರಿನ ಬವಣೆ ನೀಗಿಸಲು ಅನುಕೂಲವಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೇ. 85ರಷ್ಟು ಹಾಗೂ 15 ನೇ ಹಣಕಾಸು ಯೋಜನೆಯಿಂದ ಶೇ. 5ರಷ್ಟು ಯೋಜನೆಯ ಒಟ್ಟು ಶೇ. 90 ರಷ್ಟು ಅನುಧಾನವನ್ನು ಸರ್ಕಾರವೇ ಭರಿಸಲಿದೆ ಎಂದರು.

ಯೋಜನೆಯ ಅನುಷ್ಠಾನದಲ್ಲಿ ಕನಿಷ್ಠ ಮೂರು ಅಡಿ ಆಳದಲ್ಲಿ ಪೈಪ್‌ಲೈನ್ ಅಳವಡಿಸಬೇಕು. ಜಲ ಜೀವನ್ ಮಿಷನ್ ಯೋಜನೆಯು ಸಮುದಾಯ ಆಧಾರಿತವಾಗಿದ್ದು, ಯೋಜನೆಯನ್ನು ತಾಂತ್ರಿಕ ಸಲಹೆಗಾರರ ಸಮಕ್ಷಮದಲ್ಲಿ ಸುಧೀರ್ಘವಾಗಿ ಚರ್ಚಿಸಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ. ಗಾಯತ್ರಿ ರವರು ಮಾತನಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರ ಸಮ್ಮುಖದಲ್ಲಿ ಯೋಜನೆಯ ಕಾಮಗಾರಿಯ ಗುಣಮಟ್ಟವನ್ನು ಖುÄದ್ದು ತಪಾಸಣೆ ಮಾಡಬೇಕು. ಯೋಜನೆಗೆ ಸಮುದಾಯದ ಸಹಭಾಗಿತ್ವ ಅಗತ್ಯ ಎಂದರು.

ಜಲ ಜೀವನ್ ಮಿಷನ್ ಯೋಜನೆಯ ತಾಂತ್ರಿಕ ವಿಷಯದ ಕುರಿತು ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಶಿವಶಂಕರಯ್ಯ ಅವರು ಮಾತನಾಡಿದರು. ಸರ್ಕಾರೇತರ ಸಂಸ್ಥೆಗಳ ಸಲಹೆಗಾರರು ಹಾಗೂ ಸಂಪನ್ಮೂಲ ಅಧಿಕಾರಿಗಳಾದ ಡಾ. ಶೀಲಾಖರೆ ಹಾಗೂ ಡಾ. ಅಚ್ಯುತರಾವ್ ಅವರು ಉಪನ್ಯಾಸ ನೀಡಿದರು.

ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಗಂಗಾಧರಯ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಆನಂದಮೂರ್ತಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments