Tuesday, April 16, 2024
spot_img
HomeChamarajanagarಬಂಡೀಪುರ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಬಂಡೀಪುರ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಪರಿಸರ (ಸಂರಕ್ಷಣೆ) ಕಾಯ್ದೆ 1986ರ ಸೆಕ್ಷನ್ 18 ಮತ್ತು 19ರನ್ವಯ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಹಲವು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶಿಸಿದ್ದಾರೆ.

ಬಂಡೀಪುರ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿನ ಆವರಣದಲ್ಲಿ ಹಾಗೂ ಹೊರಗಡೆ ನಿಷೇಧಿತ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಕ್ಯಾರಿಬ್ಯಾಗ್, ತಟ್ಟೆ, ಲೋಟ, ಬಟ್ಟಲು, ಬ್ಯಾನರ್, ಬಂಟಿAಗ್ಸ್ ಮುಂತಾದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ರೀತಿಯಲ್ಲಿ ಬಳಕೆ ಮಾಡಬಾರದು. ಬಂಡೀಪುರ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿನ ಪ್ರಾಂಗಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ ಎಂಬ ಫಲಕವನ್ನು ಅಳವಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

ಊಟ ತಿಂಡಿಗಾಗಿ ಯಾವುದೇ ರೀತಿಯ, ಪ್ಲಾಸ್ಟಿಕ್ ತಟ್ಟೆ, ಕಪ್ ಅಥವಾ ಬಟ್ಟಲನ್ನು ಉಪಯೋಗಿಸಬಾರದು. ವಿಶೇಷ ಸಂದರ್ಭಗಳಲ್ಲಿ ಜಾಹಿರಾತು ನೀಡಲು ಯಾವುದೇ ಪ್ಲಾಸ್ಟಿಕ್‌ನಿಂದ ತಯಾರಿಸಿದ ಬ್ಯಾನರ್ ಮತ್ತು ಬಂಟಿAಗ್ಸ್ ಬಳಸದಂತೆ ಕ್ರಮ ವಹಿಸಬೇಕು. ಯಾವುದೇ ರೀತಿಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಅಲಂಕಾರಿಕ ಹೂವು, ತೋರಣ ಮುಂತಾದವುಗಳನ್ನು ಬಳಸದಂತೆ ಜಾಗ್ರತೆ ವಹಿಸಬೇಕು. ಈ ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments