Saturday, April 27, 2024
spot_img
HomeTumkurನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಸರಳ ಆಚರಣೆ

ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಸರಳ ಆಚರಣೆ

ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ತುಮಕೂರು ಜಿಲ್ಲಾ ಗಂಗಾ ಮತಸ್ಥರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಮಟ್ಟದ ಗಂಗಾಮತಸ್ಥರ ಸಂಘದ ಉಪಾಧ್ಯಕ್ಷö ಹೆಚ್.ಎನ್. ಚಂದ್ರಯ್ಯ ಮಾತನಾಡಿ, 12ನೇ ಶತಮಾನದ ಅಂಬಿಗರ ಚೌಡಯ್ಯ ಅವರು ಬಸವಣ್ಣನವರ ಅನುಯಾಯಿಗಳಾಗಿದ್ದರು. ಇವರು  ರಚಿಸಿರುವ 877 ವಚನಗಳಲ್ಲಿ ಸಾಮಾಜಿಕ ಸಮಾನತೆಯ ಸಂದೇಶಗಳನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್ ಸಿದ್ಧಲಿಂಗಪ್ಪ ಮಾತನಾಡಿ ಇಂದು ಅಂಬಿಗರ ಚೌಡಯ್ಯ ಅವರ ಜಯಂತಿಯೊAದಿಗೆ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ  ಪುಣ್ಯ ಸ್ಮರಣೆಯನ್ನು ಆಚರಿಸಲಾಗುತ್ತಿದ್ದು,  ಈ ಮಹಾನುಭಾವರ ಆದರ್ಶಗಳನ್ನು ಪಾಲಿಸುವ ಮೂಲಕ ಸಾರ್ಥಕ ಜೀವನ ನಡೆಸಬೇಕು ಎಂದರು.

ಜಿಲ್ಲಾ ಗಂಗಾಮತಸ್ಥರ ಸಂಘದ ಉಪಾಧ್ಯಕ್ಷ ಕೆ.ಎಸ್. ದಿವಾಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗಂಗಾಮತಸ್ಥರ ಸಂಘದ ಕಾರ್ಯದರ್ಶಿ ಡಿ.ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ ಎಂ.ಪಿ.ಸಿ, ಸಹ ಕಾರ್ಯದರ್ಶಿ ಪುಟ್ಟಶಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಕಂದಾಯ ಅಧಿಕಾರಿ ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೇಲ್ವಿಚಾರಕ ಡಿ.ವಿ. ಸುರೇಶ್ ಕುಮಾರ್, ಪದಾಧಿಕಾರಿಗಳಾದ ಗರುಡಯ್ಯ, ಪಾಲಾಕ್ಷ ಬೆಸ್ತಾರ್, ರೇಣುಕಾ, ತನುಷ್ ಮತ್ತಿತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments