Monday, April 29, 2024
spot_img
HomeMandyaಈ ಬಾರಿಯ ವೈರಮುಡಿ ಬ್ರಹ್ಮೋತ್ಸವ ಆಚರಣೆಗೆ ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿ: ಎಸ್. ಅಶ್ವತಿ

ಈ ಬಾರಿಯ ವೈರಮುಡಿ ಬ್ರಹ್ಮೋತ್ಸವ ಆಚರಣೆಗೆ ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿ: ಎಸ್. ಅಶ್ವತಿ

ಮಂಡ್ಯ: ಈ ಬಾರಿ ವೈರಮುಡಿ ಬ್ರಹ್ಮೋತ್ಸವ ಆಚರಣೆಗೆ ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈರಮುಡಿ ಬ್ರಹ್ಮೋತ್ಸವ ಧಾರ್ಮಿಕ ಕಾರ್ಯಕ್ರಮದ ಸಂಬAಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶ್ರೀಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು, ಶಾಂತಿ ಸುವ್ಯವಸ್ಥೆ ಪಾಲನೆ, ಭದ್ರತಾ ವ್ಯವಸ್ಥೆ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳೊAದಿಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಬರುವ ಭಕ್ತಾದಿಗಳಿಗೆ ತೊಂದರೆಯಾಗದAತೆ ಮುಂಜಾಗೃತೆ ವಹಿಸುವಂತೆ ತಿಳಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಕಳೆದಬಾರಿಯಂತೆ ಈ ಬಾರಿಯೂ ಕೋವಿಡ್ ನಿಯಾಮವಳಿಗಳ ಪ್ರಕಾರ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಕುರಿತು ಚರ್ಚಿಸಿದರು.

ಶ್ರೀಕ್ಷೇತ್ರ ಸಂಪರ್ಕಿಸುವ ಮುಖ್ಯ ರಸ್ತೆಗಳ ದುರಸ್ತಿ ಕಾರ್ಯಗಳ ಶೀಘ್ರ ಪ್ರಗತಿಯೊಂದಿಗೆ ಭಕ್ತಾಧಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಶ್ರೀವೈರಮುಡಿ ಬ್ರಹೋತ್ಸವ ಮುಗಿಯುವವರೆಗೆ ನಿರಂತರ ವಿದ್ಯುತ್ ಸರಬರಾಜು ಹಾಗೂ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಮಾಡುವುದು ಬಹಳ ಮುಖ್ಯ ಎಂದರು.

ಕಾರ್ಯಕ್ರಮದ ಆಹ್ವಾನ ಪತ್ರ ಕರಪತ್ರ, ಬ್ಯಾನರ್‌ಗಳು, ಉತ್ಸವಕ್ಕೆ ಪಾಸ್‌ಗಳು, ಅಗತ್ಯ ಇರುವ ಕಡೆಗಳಲ್ಲಿ ತಾತ್ಕಾಲಿಕ ಬ್ಯಾರಿಕೇಡ್ ನಿರ್ಮಾಣ ಮಾಡುವ ಕುರಿತು ಸಲಹೆಗಳನ್ನು ನೀಡಿದರು.

ಬ್ರಹ್ಮೋತ್ಸವದಲ್ಲಿ ದೀಪಾಲಂಕಾರ, ಪುಷ್ಪಾಲಂಕಾರ, ತೆಪ್ಪ ನಿರ್ಮಾಣ ಹಾಗೂ ಸಾರ್ವಜನಿಕ ದಟ್ಟಣೆಯನ್ನು ನಿಯಂತ್ರಿಸುವ ಕುರಿತು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಡಿ ಪ್ರಕಾಶ್, ಚೆಲುವನಾರಾಯಣಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಮಂಗಳಮ್ಮ, ಮೇಲುಕೋಟೆಯ ಪ್ರಧಾನ ಅರ್ಚಕರಾದ ಕರಗಂ ನಾರಾಯಣ ಅಯ್ಯಂಗಾರ್, ಆನಂದ್ ಆಳ್ವಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments