Saturday, April 27, 2024
spot_img
HomeBangaloreಕಾಂಗ್ರೆಸ್ ಪಕ್ಷಕ್ಕೆ ಯುವಕರ ಪಾತ್ರ ಬಹಳ ಮುಖ್ಯ: ರಕ್ಷಾರಾಮಯ್ಯ ಹೇಳಿಕೆ

ಕಾಂಗ್ರೆಸ್ ಪಕ್ಷಕ್ಕೆ ಯುವಕರ ಪಾತ್ರ ಬಹಳ ಮುಖ್ಯ: ರಕ್ಷಾರಾಮಯ್ಯ ಹೇಳಿಕೆ

ದೇವನಹಳ್ಳಿ: ಬ್ರಿಟಿಷರ ವಿರುದ್ಧ ಸ್ವಾತಂತ್ರ‍್ಯಕ್ಕಾಗಿ ತ್ಯಾಗ ಬಲಿದಾನಗಳ ಮೂಲಕ ಹೋರಾಡಿ ಸ್ವಾತಂತ್ರ‍್ಯ ಗಳಿಸಿದ ಹಾಗೆ ಇಂದಿನ ಸರ್ಕಾರ ಕಣ್ಣು ಕಿವಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಪಾದಯಾತ್ರೆ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಮೇಕೆದಾಟು ನಮ್ಮ ನೀರು ನಮ್ಮ ಹಕ್ಕು ಎನ್ನುವ ಉದ್ದೇಶದಿಂದ ಸರ್ಕಾರದ ಕಣ್ಣು ತೆರೆಸಿ ಕಿವಿ ಹಿಂಡಿ ಬುದ್ಧಿ ಹೇಳಲು ಕಾಂಗ್ರೆಸ್ ಪಕ್ಷ ಹೊರಟಿದ್ದು ಜನವರಿ 9 ರಂದು ಸಂಗಮದಿAದ ಪ್ರಾರಂಭವಾಗಿ ಹತ್ತು ದಿನಗಳ ಕಾಲ ಪಾದಯಾತ್ರೆಗೆ ಯುವಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಯುವ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಮೇಕೆದಾಟು ಪಾದಯಾತ್ರೆ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಪಾದಯಾತ್ರೆ ಯಾವ ಪಕ್ಷದ ಪರವಾಗಿ ಮಾಡುತ್ತಿಲ್ಲ್ಲ ಬಯಲು ಸೀಮೆ ಜನತೆ ನೀರಿಗಾಗಿ ಪಡುತ್ತಿರುವ ಬವಣೆ ನೀಗಿಸಲು ಸಮುದ್ರ ಪಾಲಾಗುತ್ತಿರುವ ನೀರನ್ನು ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಭಾಗಗಳಿಗೆ ನೀರು ಹರಿಸಿದರೆ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎನ್ನುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದು ಯಾವುದೇ ಅಡ್ಡಿ ಆತಂಕ ಬಂದರೂ ಈ ಪಾದಯಾತ್ರೆ ನಿಲ್ಲುವುದಿಲ್ಲ್ಲ ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ ನಡೆಯುತ್ತದೆ. ಬಿಜೆಪಿ ಪಕ್ಷ ಬಾಯಿ ಬಿಟ್ಟರೆ ಸುಳ್ಳು ಹೇಳಿಕೊಂಡು ಯುವಕರಿಗೆ ನಿರುದ್ಯೋಗ ಸಮಸ್ಯೆ ಎದುರಾಗಿದೆ 52 ಲಕ್ಷ ಪಧÀವಿದರರು ನಿರುದ್ಯೋಗಿಗಳಾಗಿದ್ದಾರೆ , ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲಾ, ಎತ್ತಿನ ಹೊಳೆ ಯೋಜನೆಗಾಗಲಿ ಮೇಕೆದಾಟು ಯೋಜನೆಗಾಗಲಿ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪೂರ್ಣಗೊಳ್ಳುವ ವಾತಾವರಣ ಇದೆ ಎಂದು ತಿಳಿಸಿದರು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾರುತಿ ಮಾತನಾಡಿ ಯುವಕರು ರಾಜ್ಯದ ಆಗು ಹೋಗುಗಳ ಬಗ್ಗೆ ವಿಚಾರಗಳನ್ನು ಮಾತನಾಡದೇ ನಮ್ಮ ತಾಲ್ಲೂಕು, ಹೋಬಳಿ, ವಾರ್ಡ್ ಗಳಲ್ಲಿನ ಸಮಸ್ಯೆಗಳ ಬಗ್ಗೆ ಧ್ವನಿಎತ್ತಿ ತಾಲ್ಲೂಕು ಕಚೇರಿಗಳಲ್ಲಾಗಲಿ, ಆಸ್ಪತ್ರೆಗಳಲ್ಲಾಗಲಿ ಇನ್ನಿತರೆ ಸರ್ಕಾರಿ ಕಚೇರಿಗಳಲ್ಲಿ ಸಮಸ್ಯೆಯನ್ನು ಗುರುತಿಸಿ ನೊಂದವರ ನೆರವಿಗೆ ನಿಂತಾಗ ಯುವ ಪೀಳಿಗೆ ತಾನಾಗಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬಹುದು. ಇದಕ್ಕೆ ಬೆನ್ನೆಲುಬಾಗಿ ಹಿರಿಯ ಕಾಂಗ್ರೆಸ್ ಮುಖಂಡರು ನಿಲ್ಲುತ್ತಾರೆ ಮಾರ್ಗದರ್ಶನ ನೀಡುತ್ತಾರೆ ಆದ್ದರಿಂದ ಮೇಕೆದಾಟು ಯೋಜನೆ ಫಲಶೃತಿಯಾಗಬೇಕಾದರೆ ಯುವಕರ ಪಾತ್ರ ಅತ್ಯಗತ್ಯ ಎಂದು ತಿಳಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್ ಮಾತನಾಡಿ ನಾಯಕರನ್ನು ಹುಟ್ಟು ಹಾಕುವ ಕಾರ್ಖಾನೆ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಯುವ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ ಅನುಭವದಿಂದ ಎಷ್ಟೋ ನಾಯಕರು ಶಾಸಕರಾಗಿದ್ದಾರೆ, ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದಾರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದಾರೆ ಯುವಕರು ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆ ಯಾವ ರೀತಿ ಮಾಡುತ್ತಾರೆ ಅದರಂತೆ ತಮ್ಮ ಏಳ್ಗೆಗೆ ಮೆಟ್ಟಿಲಾಗುತ್ತದೆ ಯುವಕರಿಗೆ ನಾಯಕನಾಗಲು ಅವಕಾಶ ನೀಡುತ್ತಿರುವುದು ಹಾಗೂ ಹೆಚ್ಚು ಯುವ ಪಡೆಯಿರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಎಂದರು

ಇದೆ ವೇಳೆ ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಅನಿಲ್ ಯಾದವ್, ರಾಜ್ಯ ಉಸ್ತುವಾರಿ ಸುರಭಿ, ರಾಜ್ಯ ಉಪಾಧ್ಯಕ್ಷ ಭವ್ಯ,  ತಾಲ್ಲೂಕು ಅಧ್ಯಕ್ಷ ಸುಮಂತ್, ಟೌನ್ ಅಧ್ಯಕ್ಷ ಸಾಗರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಸದಸ್ಯ ಚಿನ್ನಪ್ಪ, ಮಾಜಿ ಶಾಸಕ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್ ಗೌಡ, ಇನ್ನು ಹಲವು ಮುಖಂಡರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments