Wednesday, May 15, 2024
spot_img
HomeChikballapurಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಾಡಿನ ಜಲಮೂಲಗಳಾದ ಕೆರೆಗಳ ರಕ್ಷಣೆ ಹಾಗೂ ಪುನಶ್ಚೇತನ ಕಾರ್ಯಕ್ರಮ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಾಡಿನ ಜಲಮೂಲಗಳಾದ ಕೆರೆಗಳ ರಕ್ಷಣೆ ಹಾಗೂ ಪುನಶ್ಚೇತನ ಕಾರ್ಯಕ್ರಮ.

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಥಿ ಸಂಸ್ಥೆಯಿಂದ ನಾಡಿನ ಜಲ ಮೂಲಗಳಾದ ಕೆರೆಗಳ ರಕ್ಷಣೆ ಹಾಗೂ ಪುನಶ್ಚೇತನ ಕಾರ್ಯಕ್ರಮಗಳು ನಡೆಯುತ್ತಿದ್ದು ಇದರಿಂದ ರೈತರಿಗೆ ತುಂಬಾ ಅನುಕೂಲವಾಗಿದೆ ಎಂದು ಮಾನ್ಯ ಶಾಸಕರಾದ ವಿ ಮುನಿಯಪ್ಪರವರು ತಿಳಿಸಿದರು.
ಇವರು ತಾಲ್ಲೂಕಿನ ನಡಿಪಿನಾಯಕನಹಳ್ಳಿ ಯಲ್ಲಿ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ  ಹಮ್ಮಿಕೊಂಡಿರುವ ಕೆರೆಯ ಪುನಶ್ಟೇತನ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ  ಧರ್ಮಸ್ಥಳದ ಧರ್ಮಾಧಿಕಾರಿಗಳ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯವಾದದ್ದು ಎಂದರು.
ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ಸಿ ಎಸ್ ರವರು ಮಾತನಾಡುತ್ತಾ ರಾಜ್ಯದಲ್ಲಿ ಇದುವರೆಗೆ 429 ಕೆರೆಗಳನ್ನು 51 ಕೋಟಿ ವೆಚ್ಚದಲ್ಲಿ ಪುನಶ್ಚೇತನಗೊಳಿಸಿ ಗ್ರಾಮಸ್ಥರಿಗೆ ಹಸ್ತಾಂತರ ಮಾಡಿದ್ದು ಈ ವರ್ಷ ಎಲ್ಲಾ ಕೆರೆಗಳಲ್ಲೂ ನೀರು ತುಂಬಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಪೂಜ್ಯರ ಈ ಕಾರ್ಯಕ್ರಮ ಸಾರ್ಥಕತೆಯನ್ನು ಪಡೆದುಕೊಂಡಿದೆ ಎಂದರು. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಈಗಾಗಲೇ ಕೊತ್ತನೂರು ಬಶೆಟ್ಟಿಹಳ್ಳಿ ಹಾಗೂ ಬೋದಗೂರು ಒಟ್ಟು 3 ಕೆರೆಗಳನ್ನು 54 ಲಕ್ಷ ವೆಚ್ಚದಲ್ಲಿ ಪುನಶ್ಚೇತನಗೊಳಿಸಿದ್ದು ಈ 3 ಕೆರೆಗಳು ತುಂಬಿರುವುದು ಸಂತೋಷ ತಂದಿದೆ ಎಂದರು.
ತಾಲ್ಲೂಕು ದಂಡಾಧಿಕಾರಿ ರಾಜೀವ್ ರವರು ಮಾತನಾಡುತ್ತಾ ಈಗಾಗಲೇ ತಾಲ್ಲೂಕಿನಲ್ಲಿ ಧರ್ಮಸ್ಥಳ ಸಂಸ್ಥೆಯೂ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು  ಮಾಡುತ್ತಾ ಜನರ ಮೆಚ್ಚುಗೆಯನ್ನು ಪಡೆದಿದ್ದು ಪರ್ಯಾಯ ಸರ್ಕಾರದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥೆಯ ಪಾರದರ್ಶಕ ಕರ್ತವ್ಯನಿಷ್ಠೆ ಇತರರಿಗೆ ಮಾದರಿ ಎಂದರು.
ಕಾರ್ಯಕ್ರಮದಲ್ಲಿ  ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಕೆರೆ ಇಂಜಿನಿಯರ್ ಅರುಣ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ್, PDO ಗೋಪಿನಾಥ್, ಕೆರೆ ಸಮಿತಿ ಅಧ್ಯಕ್ಷರಾದ ಗಂಗಾರೆಡ್ಡಿ, ಸೋಮನಾಥ್, ರೆಡ್ಡಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಕೃಷ್ಣ ,ಶ್ವೇತಾ, ಆಂಜನೇಯ ರೆಡ್ಡಿ, ವೆಂಕಟಲಕ್ಷ್ಮಮ್ಮ, ಚೆನ್ನೆಗೌಡ, ಕೃಷಿ ಮೇಲ್ವಿಚಾರಕ ಹರೀಶ್, ಮೇಲ್ವಿಚಾರಕ ಚೇತನ್,  ಸೇವಾಪ್ರತಿನಿಧಿ ಸಾವಿತ್ರಮ್ಮ ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments