Friday, March 29, 2024
spot_img
HomeChamarajanagarಕೇಂದ್ರ ಪುರಸ್ಕೃತ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಸೂಚನೆ

ಕೇಂದ್ರ ಪುರಸ್ಕೃತ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಸೂಚನೆ

ಚಾಮರಾಜನಗರ: ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅತ್ಯಂತ ಹೊಣೆಗಾರಿಕೆಯಿಂದ ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಹಲವಾರು ಮಹತ್ವದ ಕಾರ್ಯಕ್ರಮಗಳು ಯೋಜನೆಗಳನ್ನು ಅನುಷ್ಠಾನ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಯಾವುದೇ ನಿರ್ಲಕ್ಷö್ಯ ವಹಿಸದೇ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಅನುಷ್ಠಾನ ಮಾಡಿ ಅನುಕೂಲ ಕಲ್ಪಿಸಬೇಕೆಂದು ಲೋಕಸಭಾ ಸದಸ್ಯರು ತಿಳಿಸಿದರು.

ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟಿçÃಯ ಹೆದ್ದಾರಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಸಂಸದರು ತಮಿಳುನಾಡಿನಿಂದ ರಾಜ್ಯಕ್ಕೆ ಬರುವ ಜಿಲ್ಲೆಯ ಗಡಿ ಭಾಗದಲ್ಲಿನ ಹೆದ್ದಾರಿ ಕಾಮಗಾರಿ ಸಂಬAಧ ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಲಾಗಿತ್ತು. ಜಿಲ್ಲೆಯಲ್ಲಿ ಇತರೆಡೆ ಬಾಕಿ ಉಳಿದಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಅನಾನುಕೂಲಕ್ಕೆ ಅವಕಾಶವಾಗಬಾರದು ಎಂದು ನಿರ್ದೇಶನ ನೀಡಿದರು.

ಇದೇ ವೇಳೆ ಶಾಸಕರಾದ ಎನ್ ಮಹೇಶ್ ಅವರು ಮಾತನಾಡಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಆದರೆ ಮಾರ್ಗ ಮಧ್ಯೆ ಇರುವ ಗುಂಡಿಗಳನ್ನು ಮುಚ್ಚುವ ಕೆಲಸವೂ ಪರಿಪೂರ್ಣಗೊಳಿಸಬೇಕು. ಕಂದಹಳ್ಳಿ ಬಳಿ ರಸ್ತೆ ಬದಿಯ ಚರಂಡಿ ಕಾಮಗಾರಿ ಕೆಲಸ ನಿಂತು ಹೋಗಿದೆ. ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ವೇಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ವಿವರ ಪಡೆದುಕೊಂಡ

ಲೋಕಸಭಾ ಸದಸ್ಯರು ಅರ್ಹ ರೈತರೆಲ್ಲರಿಗೂ ಸೌಲಭ್ಯ ಲಭಿಸಬೇಕು. ಪೌತಿ ಖಾತೆ ಇಲ್ಲದೆ ಯೋಜನೆಯ ಪ್ರಯೋಜನದಿಂದ ದೂರವಿರುವ ರೈತರ ತೊಂದರೆಯನ್ನು ಬಗೆಹರಿಸಬೇಕು. ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಕಂದಾಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದರು.

ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಪೌತಿಖಾತೆಗಾಗಿ ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ, ಅದಾಲತ್ ಕೈಗೊಂಡು ಕಾಲಮಿತಿÀಯೊಳಗೆ ರೈತರಿಗೆ ನೆರವಾಗಬೇಕು. ಶೇ. 100ರಷ್ಟು ಫಲಾನುಭವಿಗಳಿಗೆ ಕಿಸಾನ್ ಸಮ್ಮಾನ್ ಯೋಜನೆ ತಲುಪಿಸಬೇಕು ಎಂದು ತಿಳಿಸಿದರು.

ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನ ಕುರಿತು ಪರಾಮರ್ಶಿಸಿದ ಲೋಕಸಭಾ ಸದಸ್ಯರು ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಸಕಾಲಕ್ಕೆ ಸಿಗುತ್ತಿದೆಯೇ? ಪಿಂಚಣಿ ನೀಡವಲ್ಲಿ ಏನಾದರೂ ತೊಂದರೆಗಳು ಕಂಡು ಬಂದಿವೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಯಾವುದೇ ದೂರುಗಳಿಗೆ ಅವಕಾಶವಾಗಬಾರದು. ಸಮಸ್ಯೆಗಳಿದ್ದಲ್ಲಿ ಕೂಡಲೇ ಸರಿಪಡಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಧಾನ ಮಂತ್ರಿ ಆದರ್ಶ ಗ್ರಾಮಗಳು, ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಮೂಲ ಸೌಕರ್ಯ ಒದಗಿಸಿ ಗ್ರಾಮಗಳಲ್ಲಿ ಆಗಿರುವ ಅಭಿವೃದ್ದಿಯ ಬದಲಾವಣೆಗಳು ಗೋಚರವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ನೀಡಿ ಕಾರ್ಯೋನ್ಮುಖರಾಗಬೇಕು ಎಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.

ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ ನೀಡಲಾಗುತ್ತಿರುವ ಪÀರಿಹಾರ, ಕೈಗಾರಿಕಾ ಪ್ರದೇಶ ಅಭಿವೃದ್ಧಿ, ಜಿಲ್ಲೆಗೆ ಪ್ರತ್ಯೇಕ ವಿಶ್ವ ವಿದ್ಯಾನಿಲಯ, ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ, ಸಮಾಜ ಕಲ್ಯಾಣ, ಹುಲಿ ಸಂರಕ್ಷಿತ ಪ್ರದೇಶಗಳು ಮತ್ತು ಅರಣ್ಯ ಇಲಾಖೆಯ ನಿರ್ವಹಣೆ, ಕುಡಿಯುವ ನೀರು, ಆಹಾರ ನಾಗರಿಕ ಸರಬರಾಜು, ಮೀನುಗಾರಿಕೆ, ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಇತರೆ ಯೋಜನೆ ಕಾರ್ಯಗಳ ಅನುಷ್ಠಾನ ಕುರಿತು ಲೋಕಸಭಾ ಸದಸ್ಯರು ಪ್ರಗತಿ ಪರಿಶೀಲಿಸಿದರು.

ಶಾಸಕರಾದ ಸಿ.ಎಸ್. ನಿರಂಜನ್‌ಕುಮಾರ್, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ನಟರಾಜು, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‌ರಾಜ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ಡಾ. ಸಂತೋಷ್ ಕುಮಾರ್, ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ಜಿ. ಮಲ್ಲೇಶಪ್ಪ, ಲೋಕೇಶ್, ಸರಸ್ವತಿ, ನಾಗೇಶ್, ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಗೂ ಮೊದಲು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಕೊಡುಗೆಯಾಗಿ ನೀಡಿರುವ ಆಂಬ್ಯುಲೆನ್ಸ್ಗಳನ್ನು ಸೇವೆಗೆ ಲೋಕಾರ್ಪಣೆ ಮಾಡಿದರು. ಇದೇ ವೇಳೆ ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments