Thursday, March 28, 2024
spot_img
HomeChikballapurಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಾಂದ್ ಗೆಹ್ಲೋಟ್ ಅವರಿಂದ ಶಿವೋತ್ಸವ ಕಾರ್ಯಕ್ರಮಕ್ಕೆ ಚಾಲನೆ: ಜಿಲ್ಲಾಧಿಕಾರಿ ಆರ್.ಲತಾ

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಾಂದ್ ಗೆಹ್ಲೋಟ್ ಅವರಿಂದ ಶಿವೋತ್ಸವ ಕಾರ್ಯಕ್ರಮಕ್ಕೆ ಚಾಲನೆ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗ್ರಾಮದಲ್ಲಿ ಶ್ರೀ ಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ನಂದಿ ‘ಶಿವೋತ್ಸವ’ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಕುರಿತು ಸೋಮವಾರ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರು ಸ್ಥಳಕ್ಕೆ ಭೇಟಿ ನೀಡಿ ಹಾಗೂ ಪ್ರಗತಿ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ಹಾಗೂ ಸಮಿತಿಯ ಸದಸ್ಯರಿಗೆ ಶಿವೋತ್ಸವ ಕಾರ್ಯಗಳು ಸುಗಮವಾಗಿ ನೆರವೇರಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ ಅವರು, ಮಾರ್ಚ್ 1 ರಂದು ಮಧ್ಯಾಹ್ನದಿಂದ ಶಿವೋತ್ಸವ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಆರಂಭವಾಗುತ್ತವೆ. ಸಂಜೆ 6 ಗಂಟೆಗೆ ಚೊಚ್ಚಲ ಶಿವೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀಥಾವರ್ ಚಾಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮವು ಮಾರ್ಚ್ 1  ಸಂಜೆ 6 ರಿಂದ ಮಾರ್ಚ್ 2 ರ ಸಂಜೆಯವರೆಗೆ ಜಾತ್ರೆ ನಡೆಯಲಿದೆ. ಇದೇ ಮೊದಲ ಬಾರಿಗೆ ನಂದಿ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ತುಂಬಾ ಸಂತೋಷವಾಗಿದೆ ಎಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಶಿವೋತ್ಸವ ವೇದಿಕೆಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ. ಜಾತ್ರೆಗೆ ಬರುವವರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಭಕ್ತಾಧಿಗಳು ಭಾಗವಹಿಸಿ ಶಿವೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಇದೇ ವೇಳೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡುತ್ತಾ, ಜಾತ್ರೆಯನ್ನು ಸುಗಮವಾಗಿ ನಡೆಯಲು ಬರುವ ಭಕ್ತಾಧಿಗಳಿಗೆ ಸುಭದ್ರತೆಗಾಗಿ ಸುಮಾರು 900 ಪೋಲಿಸ್ ಅಧಿಕಾರಿಗಳು, ಕೆ.ಎಸ್.ಆರ್.ಪಿ ಪಡೆಯನ್ನು ನಿಯೋಜಿಸಲಾಗಿದೆ. ಜೊತೆಗೆ ಎಲ್ಲಾ ರೀತಿಯ ವಾಹನ ನಿಲುಗಡೆಗೆ ಸಂಪೂರ್ಣ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ ದೇವರ  ದರ್ಶನಕ್ಕಾಗಿ ಆಗಮಿಸುವ ವೃದ್ಧರು ಹಾಗೂ ಅಂಗವಿಕಲರಿಗೆ ವ್ಹೀಲ್ ಚೇರ್ ಅನ್ನು ಕಲ್ಪಿಸಲಾಗಿದೆ ಎಂದರು .

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ತಾಲ್ಲೂಕಿನ ತಹಸೀಲ್ದಾರ್ ಗಣಪತಿ ಶಾಸ್ತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments