Thursday, May 2, 2024
spot_img
HomeTumkurಜಿಲ್ಲೆಯ ಎಲ್ಲಾ ಪಂಚಾಯತಿಗಳಲ್ಲಿ ಶೀಘ್ರವಾಗಿ “ಗ್ರಾಮ ಒನ್ ಕೇಂದ್ರ”ಗಳ ಸ್ಥಾಪನೆ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

ಜಿಲ್ಲೆಯ ಎಲ್ಲಾ ಪಂಚಾಯತಿಗಳಲ್ಲಿ ಶೀಘ್ರವಾಗಿ “ಗ್ರಾಮ ಒನ್ ಕೇಂದ್ರ”ಗಳ ಸ್ಥಾಪನೆ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

ತುಮಕೂರು: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರವಾಗಿ ‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಿ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರನ್ಸ್ ನಡೆಸಿ ಮಾತನಾಡಿದ ಅವರು ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಗ್ರಾಮ ಒನ್’ ಕಾರ್ಯಕ್ರಮದಡಿ ಹಲವಾರು ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ತೆರೆದಿರುವ ಗ್ರಾಮ ಒನ್ ಕೇಂದ್ರಗಳಲ್ಲಿ 100ಕ್ಕೂ ಹೆಚ್ಚು ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿದ್ದು, ಗ್ರಾಮ ಒನ್ ಕೇಂದ್ರಗಳನ್ನು ತೆರೆಯದಿರುವ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಕೇಂದ್ರವನ್ನು ಪ್ರಾರಂಭಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಒಂದಕ್ಕಿAತ ಹೆಚ್ಚು ಅರ್ಜಿದಾರರಿದ್ದಲ್ಲಿ ಸರ್ಕಾರಿ ನಿಯಮದನ್ವಯ ಅರ್ಹತೆ ಹೊಂದಿರುವವರಿಗೆ ಕೇಂದ್ರ ಪ್ರಾರಂಭಿಸಲು ಅನುಮತಿಸಲಾಗುವುದೆಂದರು.

ಗ್ರಾಮ ಒನ್ ಕೇಂದ್ರಗಳನ್ನು ತೆರೆಯದ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿಗಳು ಹೆಚ್ಚು ಆಸಕ್ತಿಯನ್ನು ವಹಿಸಿ ಕೇಂದ್ರಗಳನ್ನು ತೆರೆಯಲು ಗಮನ ನೀಡುವಂತೆ ಸಂಬAಧಿಸಿದ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಕಾಧಿಕಾರಿಗಳಿಗೆ ಸೂಚಿಸಿದರು.

 ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿದ್ದು, ಲಭ್ಯವಿರುವ ಮೊದಲ ಡೋಸ್ ಮತ್ತು ಎರಡನೇ ಡೋಸ್ ಲಸಿಕಾಕರಣವನ್ನು ಪೂರ್ಣಗೊಳಿಸಬೇಕು. ಈಗಾಗಲೇ ಎರಡು ಲಸಿಕೆಗಳನ್ನು ಪಡೆದು ಬೂಸ್ಟರ್ ಡೋಸ್‌ಗೆ ಅರ್ಹರಿರುವ ಫಲಾನುಭವಿಗಳಿಗೆ ಶೀಘ್ರವೇ ಲಸಿಕೆಯನ್ನು ನೀಡಿ ಆರೋಗ್ಯ ಸ್ಥಿತಿಯನ್ನು ಕಾಪಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ತಾಲ್ಲೂಕುಗಳಿಗೆ ನಿಗಧಿಪಡಿಸಿರುವ ಲಸಿಕೆಗಳು ಹೆಚ್ಚಾಗಿದ್ದಲ್ಲಿ ಕೊರತೆ ಇರುವ ತಾಲ್ಲೂಕುಗಳಿಗೆ ನೀಡಿ ಲಸಿಕಾಕರಣ ಸರಿದೂಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಗಂಟಲು ದ್ರವ ಮಾದರಿ ಸಂಗ್ರಹಿಸಲು ತುಮಕೂರಿಗೆ 700 ಹಾಗೂ ತಾಲ್ಲೂಕು ಕೇಂದ್ರಗಳಿಗೆ 350 ಟೆಸ್ಟ್ಗಳನ್ನು ನಡೆಸಲು ನಿಗಧಿಪಡಿಸಲಾಗಿದೆ ಎಂದರಲ್ಲದೆ, ಪೈಕಿ-ಪಹಣಿ ಒಟ್ಟುಗೂಡಿಸುವಿಕೆ, ಪಹಣಿ ಕಾಲಂ 3/9 ಮಿಸ್ ಮ್ಯಾಚ್, ಭೂಮಿ ಪೆಂಡೆನ್ಸಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಂದಾಯ ಗ್ರಾಮಗಳ ರಚನೆ ಸಂಬAಧ ಅಧಿಕಾರಿಗಳು ಹೆಚ್ಚು ಕಾರ್ಯ ಪ್ರವೃತ್ತರಾಗಬೇಕೆಂದು ತಿಳಿಸಿದರು.

ಸಭೆಯಲ್ಲಿ ಸ್ಮಶಾನ ಹಾಗೂ ವಿವಿಧ ಉದ್ದೇಶಗಳಿಗೆ ಸರ್ಕಾರಿ ಜಮೀನು ಕಾಯ್ದಿರಿಸುವ, ಎತ್ತಿನಹೊಳೆ, ಸಾಮಾಜಿಕ ಭದ್ರತಾ ಯೋಜನೆ, ಸಕಾಲ, ನಾಡ ಕಚೇರಿ ಪ್ರಗತಿ ಪರಿಶೀಲನೆ ಕುರಿತಂತೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಮೋಹನ್ ದಾಸ್, ತಹಶೀಲ್ದಾರ್ ಮೋಹನ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments