Friday, April 19, 2024
spot_img
HomeChamarajanagarಎಸ್,ಸಿ.ಪಿ, ಟಿ.ಎಸ್.ಪಿ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಎಸ್,ಸಿ.ಪಿ, ಟಿ.ಎಸ್.ಪಿ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೌಲಭ್ಯ, ಸವಲತ್ತುಗಳನ್ನು ವಿತರಿಸಲು ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ನಡೆದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳಡಿ 2021ರ ಡಿಸೆಂಬರ್ ಅಂತ್ಯದವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವರ್ಷಾಂತ್ಯ ಸಮೀಪಿಸುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೌಲಭ್ಯ, ಸವಲತ್ತುಗಳನ್ನು ನಿಗದಿತ ಕಾಲಮಿತಿಯಲ್ಲಿ ತಲುಪಿಸುವ ಕಾರ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಕಾಲಾವಕಾಶ ಕಡಿಮೆ ಇರುವುದರಿಂದ ಯಾವುದೇ ಫಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬAಧಪಟ್ಟ ಅಧಿಕಾರಿಗಳು  ಗಮನ ಹರಿಸಬೇಕು ಎಂದರು.

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳಡಿ ಕಾರ್ಯಕ್ರಮಗಳ ಅನುಷ್ಟಾನಕ್ಕೆ ಅನುದಾನ ಕೊರತೆ ಕಂಡುಬAದರೆ ಇಲಾಖೆಗಳು ಹೆಚ್ಚುವರಿ ಅನುದಾನಕ್ಕಾಗಿ ಸಂಬAಧಪಟ್ಟ ಕೇಂದ್ರಕಚೇರಿಯೊAದಿಗೆ ಪತ್ರವ್ಯವಹಾರ ನಿರ್ವಹಿಸಬೇಕು. ಇಲಾಖೆಗಳಿಗೆ ಈಗಾಗಲೇ ಬಿಡುಗಡೆ ಮಾಡಿರುವ ಅನುದಾನ ಯಾವುದೇ# ಕಾರಣಕ್ಕೂ ವಾಪಸ್ಸಾಗದಮತೆ ಎಚ್ಚರವಹಿಸಿ ಯೋಜನೆ, ಕಾರ್ಯಕ್ರಮಗಳನ್ನು ಆಯಾ ಮಾಹೆಯಲ್ಲಿಯೇ ಸಮರ್ಪಕವಾಗಿ ಅನುಷ್ಟಾನ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.

ಗಿರಿಜನ ಉಪಯೋಜನೆಯಡಿ ಫಲಾನುಭವಿಗಳ ಆಯ್ಕೆಯು ಪಾರದರ್ಶಕತೆಯಿಂದ ಕೂಡಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವ ಪ್ರಮುಖ ಇಲಾಖೆಗಳಾದ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ ಇಲಾಖೆಗಳು ಫಲಾನುಭವಿಗಳ ಆಯ್ಕೆಯ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸವಲತ್ತುಗಳನ್ನು ತಲುಪಿಸುವಲ್ಲಿ ಪ್ರಗತಿ ಕಡಿಮೆಯಾಗಿರುವ ಇಲಾಖೆಯ ಅಧಿಕಾರಿಗಳಿಗೆ ಶೀಘ್ರವಾಗಿ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮೇಲುಸ್ತುವಾರಿ ವಹಿಸುವಂತೆ ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಭಾಗೀರಥಿ, ಕೃಷಿ ಇಲಾಖೆಯ ಜಂಟಿನಿರ್ದೇಶಕರಾದ ಚಂದ್ರಕಲಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶಿವಪ್ರಸಾದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments