Saturday, May 11, 2024
spot_img
HomeBangaloreಜ. 17ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ

ಜ. 17ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಜ 17ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಕಲ್ಲುಕುಂಟೆ ಅಗ್ರಹಾರ ಗ್ರಾಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಪ್ರತಿ ತಿಂಗಳ ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಗದಿಯಾಗಿದ್ದು, ಅದರಂತೆ ಜನವರಿ 15ರಂದು ಮಕರ ಸಂಕ್ರಾAತಿ ಹಬ್ಬದ ಪ್ರಯುಕ್ತ ಸರ್ಕಾರಿ ರಜೆ ಹಾಗೂ ಜನವರಿ 16 ರಂದು ಭಾನುವಾರ ರಜಾ ದಿನ ಇರುವುದರಿಂದ ಜ.17 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜ. 17 ರಂದು ದೇವನಹಳ್ಳಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಅವರು ಕಸಬಾ ಹೋಬಳಿಯ ಆವತಿ ಗ್ರಾಮದಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮೋಹನ್ ಕುಮಾರಿ ಅವರು ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮಂಜುನಾಥ್ ಅವರು ತ್ಯಾಮಗೊಂಡ್ಲು ಹೋಬಳಿಯ ಕೊಡಿಗೆಹಳ್ಳಿ ಗ್ರಾಮದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments