Friday, April 19, 2024
spot_img
HomeMandyaಎರಡನೇ ಡೋಸ್ ಪಡೆದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಬಹುದು: ಡಾ. ಧನಂಜಯ

ಎರಡನೇ ಡೋಸ್ ಪಡೆದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಬಹುದು: ಡಾ. ಧನಂಜಯ

ಮಂಡ್ಯ: ಜಿಲ್ಲೆಯಾದ್ಯಂತ ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ನೀಡಲಾಗಿದ್ದು, ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಬೂಸ್ಟರ್ ಲಸಿಕೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧನಂಜಯ ಹೇಳಿದರು.
ಇಂದು ಕ್ಯಾತುಂಗೆರೆ ಆರೋಗ್ಯ ಕೇಂದ್ರದಲ್ಲಿ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು, ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರುಗಳಿಗೆ ಬೂಸ್ಟರ್ ಡೋಸ್‍ಗಳನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2.5 ಲಕ್ಷ ಹಿರಿಯ ನಾಗರೀಕರು, 15,000 ಆರೋಗ್ಯ ಕಾರ್ಯಕರ್ತರು ಹಾಗೂ ಸುಮಾರು 14,000 ಫ್ರಂಟ್‍ಲೈನ್ ವರ್ಕರ್ಸ್‍ಗಳಿದ್ದು, ಎರಡನೇ ಡೋಸ್ ಪಡೆದು 9 ತಿಂಗಳ ಅವಧಿಯಾಗಿರುವವರಿಗೆ ಬೂಸ್ಟರ್ ಡೋಸ್‍ಗಳನ್ನು ನೀಡಲಾಗುತ್ತಿದೆ ಎಂದರು.
ಮೊದಲು ಪಡೆದ ಲಸಿಕೆಯನ್ನೇ ಬೂಸ್ಟರ್ ಡೋಸ್‍ಗಳಲ್ಲಿಯೂ ನೀಡಲಾಗುವುದು ಹಾಗೂ ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಮೊಬೈಲ್ ನಂಬರಿಗೆ ಮೆಸೇಜ್ ಬರುತ್ತದೆ ತದನಂತರ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬೂಸ್ಟರ್ ಲಸಿಕೆ ಪಡೆಯಬಹುದು, ಇದರಿಂದ ಯಾವುದೇ ಅಡ್ಡಪರಿಣಾಮ ಇಲ್ಲ ಎಂದರು.
ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿಯೂ ಕೋವಿಡ್ ಲಸಿಕೆ ಲಭ್ಯವಿದ್ದು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಲಸಿಕೆಯನ್ನು ಪಡೆಯದೆ ಇರುವ ಫಲಾನುಭವಿಗಳು ಕೂಡಲೇ ಸ್ವಯಂಪ್ರೇರಿತವಾಗಿ ಲಸಿಕೆ ಪಡೆಯಬಹುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸೋಮಶೇಖರ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಜವರೇಗೌಡ, ಡಾ. ಶಶಿಕಲಾ ಮತ್ತಿರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments