Saturday, April 27, 2024
spot_img
HomeTumkurಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ರಹಿತ ವಾತಾವರಣ ನಿರ್ಮಿಸಿ: ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ

ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ರಹಿತ ವಾತಾವರಣ ನಿರ್ಮಿಸಿ: ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ

ತುಮಕೂರು: ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಅನುವಾಗುವಂತೆ ಶಾಲಾ-ಕಾಲೇಜುಗಳ ಸುತ್ತಮುತ್ತಲಿನ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳನ್ನು ಮಾರಲು ಅವಕಾಶ ನೀಡದೆ ತಂಬಾಕು ರಹಿತ ವಾತಾವರಣವನ್ನು ನಿರ್ಮಿಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಮೂರನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಶಾಲಾ-ಕಾಲೇಜುಗಳ ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಿದ್ದಲ್ಲಿ ಸಂಬAಧಿಸಿದ ಶಾಲೆಯ ಮುಖ್ಯ ಶಿಕ್ಷಕರು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅವುಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.    

ಅಲ್ಲದೆ, ಜಿಲ್ಲೆಯ ಎಲ್ಲ ಸರ್ಕಾರಿ ಕಛೇರಿಗಳು ತಂಬಾಕು ಸೇವನೆ ಮುಕ್ತವಾಗಿರಬೇಕು. ಅದಾಗ್ಯೂ ತಂಬಾಕು ಬಳಸುವುದು ಕಂಡುಬAದಲ್ಲಿ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

        ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ತಂಬಾಕು ಮುಕ್ತ ಮಾಡಿರುವ ಸಾಧಕ-ಬಾದಕಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ಅವರು ಶಾಲೆಗಳಲ್ಲಿ ತಂಬಾಕು ಮುಕ್ತವಾಗಿರುವ ಬಗ್ಗೆ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ತಂಬಾಕು ದುಷ್ಪರಿಣಾಮಗಳ ಕುರಿತು ತರಬೇತಿ ಆಯೋಜಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರಲ್ಲದೆ, ತಾಲ್ಲೂಕುವಾರು ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ತಂಬಾಕು ನಿಯಂತ್ರಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ತಂಬಾಕಿನಿAದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕೆಂದರು. 

        ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಸಭೆಗೆ ಮಾಹಿತಿ ನೀಡುತ್ತಾ 2021-22ನೇ ಸಾಲಿನ ರಾಷ್ಟಿçಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಶೇ.100ರಷ್ಟು ಗುರಿ ಸಾಧಿಸಲಾಗಿದೆ ಎಂದರಲ್ಲದೆ, ಶಾಲಾ-ಕಾಲೇಜು ಆರೋಗ್ಯ ಜಾಗೃತಿ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ತಲಾ 10 ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸಲಾಗಿದೆ ಎಂದರು.

ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಮೂರನೇ ತ್ರೆöÊಮಾಸಿಕದಲ್ಲಿ ಸಾಧಿಸಲಾದ ಪ್ರಗತಿಯಲ್ಲಿ ಜಿಲ್ಲಾದ್ಯಂತ ಒಟ್ಟು 55 ದಾಳಿಗಳನ್ನು ನಡೆಸಲಾಗಿದ್ದು, ಸೆಕ್ಷನ್ 4, 6(ಎ), 6(ಬಿ)ಯಡಿ 1971 ಪ್ರಕರಣಗಳನ್ನು ದಾಖಲಿಸಿ  173030 ರೂ.ಗಳ ದಂಡವನ್ನು ವಸೂಲಿ ಮಾಡಲಾಗಿದೆ ಹಾಗೂ ತಂಬಾಕು ವ್ಯಸನಗಳಿಗೆ ಆಪ್ತ ಸಮಲೋಚನೆ ಮತ್ತು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದರು.  

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಮೋಹನ್‌ದಾಸ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.  ಈ ಸಂದರ್ಭದಲ್ಲಿ ರಾಜ್ಯ ತಂಬಾಕು ನಿಯಂತ್ರಣ ಕೋಶದಿಂದ ಹೊರತಂದಿರುವ ‘ಗೈಡ್‌ಲೈನ್ಸ್ ಫಾರ್ ಲಾ ಎನ್‌ಫೋಸರ್ಸ್ ಫಾರ್ ಎಫೆಕ್ಟೀವ್ ಇಂಪ್ಲಿಮೆAಟೇಷನ್ ಆಫ್ ಟೊಬ್ಯಾಕೋ ಕಂಟ್ರೋಲ್ ಲಾಸ್-2003 ಪುಸ್ತಕವನ್ನು ಅಧಿಕಾರಿಗಳಿಗೆ ವಿತರಣೆ ಮಾಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments