Thursday, May 2, 2024
spot_img
HomeChikballapurಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಂಘದ ಸದಸ್ಯರಿಗೆ ಸ್ವ ಉದ್ಯೋಗದ ಬಗ್ಗೆ ತರಬೇತಿ ಕಾರ್ಯಾಗಾರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಂಘದ ಸದಸ್ಯರಿಗೆ ಸ್ವ ಉದ್ಯೋಗದ ಬಗ್ಗೆ ತರಬೇತಿ ಕಾರ್ಯಾಗಾರ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದನ್ವಯ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಬಟ್ಟೆ ಚೀಲ ತಯಾರಿ ತರಬೇತಿಯನ್ನು ಮಳ್ಳೂರುನಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ಸಿ ಎಸ್ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅರ್ಥಿಕ ಸ್ವಾವಲಂಬನೆಯ ಜೊತೆಗೆ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ನಡೆಸುತ್ತಿದ್ದು ಸಾವಿರಾರು ಮಹಿಳೆಯರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿದ್ದಾರೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆರೋಗ್ಯ ಇಲಾಖೆಯ ಸಣ್ಣಮ್ಮ ರವರು ಮಾತನಾಡುತ್ತಾ ಎಲ್ಲರ ಮನೆಯಲ್ಲೂ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದ್ದು ಇದರಿಂದ ಹಲವಾರು ರೋಗಗಳಿಗೆ ಮನುಷ್ಯ ಬಲಿಯಾಗುತ್ತಿದ್ದು ಇದಕ್ಕೆ ಪರ್ಯಾಯವಾಗಿ ಬಟ್ಟೆ ಚೀಲವನ್ನು ಬಳಸಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಸದ್ರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೂರ್ಯನಾರಾಯಣ್, ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಅರ್ಥಿಕ ಸಾಕ್ಷರತಾ ಕೇಂದ್ರದ ಸಮನ್ವಯಾಧಿಕಾರಿ ಕೃಷ್ಣಪ್ಪ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ವಲಯ ಮೇಲ್ವಿಚಾರಕಿ ಶ್ರೀಮತಿ ಅನಿತಾ,  ಅಂಗನವಾಡಿ ಶಿಕ್ಷಕಿ ಶ್ರೀಮತಿ ರೂಪ, ಸಮನ್ವಯಾಧಿಕಾರಿ ಸುಮಂಗಲ, ಸೇವಾ ಪ್ರತಿನಿಧಿ ಮುನಿರಾಜು,ಉಪಸ್ಥಿತರಿದ್ದರು…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments