Friday, April 19, 2024
spot_img
HomeChamarajanagarನಗರದಲ್ಲಿ ನಡೆದ ಮಕ್ಕಳ ಹಕ್ಕುಗಳ, ಕಾಯ್ದೆ ಜಾಗೃತಿ ಕಾರ್ಯಕ್ರಮ

ನಗರದಲ್ಲಿ ನಡೆದ ಮಕ್ಕಳ ಹಕ್ಕುಗಳ, ಕಾಯ್ದೆ ಜಾಗೃತಿ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಇಂದು ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಸಂವಾದ ಕಾರ್ಯಕ್ರಮ ನಡೆಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆಡಿಪಿ ಸಭಾಂಗಣದಲ್ಲಿAದು ನಡೆದ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿ ದೇವಿ ಅವರು ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಕೋವಿಡ್ ಮೂರನೇ ಅಲೆಯ ಬಗ್ಗೆ ಪೋಷಕರಲ್ಲಿ ಉಂಟಾಗಿದ್ದ ಆತಂಕವನ್ನು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ದೂರ ಮಾಡಿತು ತಿಳಿಸಿದರು.

ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಬಸವರಾಜು ಅವರು ಮಾತನಾಡಿ ಕೋವಿಡ್‌ನಿಂದ ತಂದೆ-ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳ ಹಿತರಕ್ಷಣೆಗೆ ಆಯೋಗವು ಮುಂದೆ ಬಂದಿದೆ. ಮಕ್ಕಳು ಈ ದೇಶದ ಸಂಪತ್ತು, ಮಕ್ಕಳ ವಿಷಯಗಳಿಗೆ ಆಯೋಜಿಸಲಾಗುವ ಸಂವಾದ ಕಾರ್ಯಕ್ರಮಗಳು ಮಕ್ಕಳ ಮನಸ್ಸಿನಲ್ಲಿರುವ ದುಃಖ ನೋವು ಹೋಗಲಾಡಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‌ರಾಜ್ ಅವರು ಮಾತನಾಡಿ ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹ, ಮಕ್ಕಳ ಕಳ್ಳತನಂತಹ ಪ್ರಕರಣಗಳನ್ನು ತಡೆಯಲು ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು ಮಕ್ಕಳ ರಕ್ಷಣೆಗಾಗಿ ಕೆಲಸ ನಿರ್ವಹಿಸುತ್ತವೆ. ಪ್ರಕರಣಗಳನ್ನು ತಡೆಯಲು ಹಲವು ಕಾಯ್ದೆಗಳು ಜಾರಿಗೆ ಬಂದಿದ್ದು ಪೋಷಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಪ್ರಕರಣಗಳನ್ನು ತಡೆಯಬೇಕಿದೆ ಎಂದು ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಎಚ್.ಆರ್. ಸುರೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಚಂದ್ರಕಲಾ, ಮೈಸೂರು ಒಡನಾಡಿ ಸಂಸ್ಥೆಯ ಸ್ಟಾö್ಯನ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments