Friday, May 3, 2024
spot_img
HomeTumkurಹಸಿ/ಒಣ/ಪ್ಲಾಸ್ಟಿಕ್ ತ್ಯಾಜ್ಯವನ್ನು ಬೇರ್ಪಡಿಸಿ ಪರಿಸರ ಸಂರಕ್ಷಿಸಿ- ಸಿಇಓ

ಹಸಿ/ಒಣ/ಪ್ಲಾಸ್ಟಿಕ್ ತ್ಯಾಜ್ಯವನ್ನು ಬೇರ್ಪಡಿಸಿ ಪರಿಸರ ಸಂರಕ್ಷಿಸಿ- ಸಿಇಓ

ತುಮಕೂರು: ಹಸಿ ಕಸ, ಒಣ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಪರಿಸರವನ್ನು ನಾವೇ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ವಿದ್ಯಾಕುಮಾರಿ ಕರೆ ನೀಡಿದರು.

ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಜಿಲ್ಲಾ ಪಂಚಾಯತ್ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಮತ್ತು ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿಂದು ಎನ್.ಆರ್.ಎಲ್.ಎಂ. ಒಕ್ಕೂಟದ ಮಹಿಳಾ ಸದಸ್ಯರಿಗೆ ಘನತ್ಯಾಜ್ಯ ವಿಲೇವಾರಿ ಘಟಕ ವಾಹನ ಚಾಲನಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಸ್ವಾವಲಂಬಿಗಳಾಗಿ ಸ್ವ-ಉದ್ಯೋಗ ಮಾಡುವ ಮೂಲಕ ಮಾದರಿಯಾಗಬೇಕು ಎಂದರು.

ಸರ್ಕಾರವು ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಜೊತೆಗೆ ಗ್ರಾಮಗಳನ್ನು ಅಭಿವೃದ್ಧಿಯ ಪಥದತ್ತ ಸಾಗಿಸಿ ಜಿಲ್ಲೆಯನ್ನು ಗುರುತಿಸುವಂತಾಗಬೇಕು ಎಂದರು.  

ಡಿಸ್ಟಿçಕ್ ಪ್ರೋಗ್ರಾಮ್ ಮ್ಯಾನೇಜರ್ ಅಶೋಕ್  ಮಾತನಾಡಿ ಇಂದಿನಿAದ ಫೆಬ್ರವರಿ ೩ರವರೆಗೆ ಹಿರೇಹಳ್ಳಿಯ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಎನ್.ಆರ್.ಎಲ್.ಎಂ. ಒಕ್ಕೂಟದ ಮಹಿಳಾ ಸದಸ್ಯರಿಗೆ ಘನತ್ಯಾಜ್ಯ ವಿಲೇವಾರಿ ಘಟಕ ವಾಹನ ಚಾಲನಾ ತರಬೇತಿ ನೀಡಲಾಗುವುದು. ಜಿಲ್ಲೆಯಲ್ಲಿರುವ ೩೩೦ ಗ್ರಾಮ ಪಂಚಾಯ್ತಿಗಳಲ್ಲಿ ಪ್ರತಿ ಗ್ರಾಮ ಪಂಚಾಯತಿಯಿAದ ಒಬ್ಬರಂತೆ ವಾಹನ ಚಾಲಕಿಯರ ಜೊತೆಗೆ ಇಬ್ಬರು ಸಹಾಯಕಿರನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಸ್ತಿçà ಶಕ್ತಿ ಸಂಘದಲ್ಲಿರುವ ಮಹಿಳೆಯರನ್ನೂ ಸಹ ಆಯ್ಕೆ ಮಾಡಿಕೊಂಡು ಅವರಿಗೂ ತರಬೇತಿ ನೀಡಲಾಗುವುದು. ಮೊದಲ ಹಂತದಲ್ಲಿ ೭೫ ಗ್ರಾಮ ಪಂಚಾಯ್ತಿಗಳ ಮಟ್ಟದಲ್ಲಿ ಎನ್.ಆರ್.ಎಲ್.ಎಂ. ಒಕ್ಕೂಟದ ಸದಸ್ಯರನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ನರಸಿಂಹಮೂರ್ತಿ, ಮಹಿಳಾ ಸಂಘದ ಅಧ್ಯಕ್ಷೆ ಚಂದ್ರಕಲಾ ಹಾಗೂ ವಿವಿಧ ಗ್ರಾಮ ಪಂಚಾಯ್ತಿಗಳ ಅಧಿಕಾರಿಗಳು ಮತ್ತು ತರಬೇತಿದಾರರು ಹಾಜರಿದ್ದರು. ಇದಕ್ಕೂ ಮುನ್ನ ಘನತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ಚಾಲನೆ ನೀಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments