Friday, April 19, 2024
spot_img
HomeChamarajanagarಫೆ. 27ರಂದು ಪಲ್ಸ್ ಪೋಲಿಯೋ: ಯಶಸ್ವಿ ನಿರ್ವಹಣೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಫೆ. 27ರಂದು ಪಲ್ಸ್ ಪೋಲಿಯೋ: ಯಶಸ್ವಿ ನಿರ್ವಹಣೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಮಕ್ಕಳಲ್ಲಿ ಅಂಗವೈಕಲ್ಯತೆ ತಪ್ಪಿಸುವ ಸಲುವಾಗಿ ಜಿಲ್ಲೆಯಲ್ಲಿ ಇದೇ ಫೆಬ್ರವರಿ 27ರಂದು ಹಮ್ಮಿಕೊಂಡಿರುವ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಎಲ್ಲಾ ಇಲಾಖೆಗಳು ಸಹಕಾರ ಸಮನ್ವಯದಿಂದ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುತ್ತದೆ. ಫೆಬ್ರವರಿ 27ರಂದು ಬೆಳಿಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಹನಿ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಎರಡನೇ ಮತ್ತು ಮೂರನೇ ದಿನ ಮತ್ತು ಪಟ್ಟಣ ಪ್ರದೇಶದಲ್ಲಿ ಎರಡನೇ, ಮೂರನೇ ಮತ್ತು ನಾಲ್ಕನೇ ದಿನವೂ ಸಹ ಮನೆಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ಪೋಷಕರು ಈ ಸಂದರ್ಭದಲ್ಲಿ ಸಹಕರಿಸಬೇಕು. ನರ್ಸಿಂಗ್ ಶಾಲೆಗಳು ಸ್ವಯಂ ಸೇವಾ ಸಂಸ್ಥೆಗಳು, ಪೌರಾಡಳಿತ ಇಲಾಖೆ ಸೇರಿದಂತೆ ಎಲ್ಲರ ನೆರವು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಶಾಲೆ, ಅಂಗನವಾಡಿಗಳಲ್ಲಿ ಪಲ್ಸ್ ಪೋಲಿಯೊ ಬೂತ್‌ಗಳು ನಿರ್ವಹಿಸಲು ಸ್ಥಳವಕಾಶ ಸೇರಿದಂತೆ ಅಗತ್ಯ ನೆರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ನೀಡಬೇಕು. ಶಾಲಾ ಪ್ರಾರ್ಥನಾ ಸಮಯದಲ್ಲಿಯೂ ಪಲ್ಸ್ ಪೋಲಿಯೊ ಕುರಿತು ಶಿಕ್ಷಕರು ವಿದ್ಯಾರ್ಥಿಗಳ ಮೂಲಕ ಮಾಹಿತಿ ನೀಡಬೇಕು. ಖಾಸಗಿ, ಸರ್ಕಾರಿ, ಬಸ್ ನಿಲ್ದಾಣ, ರೈಲು ನಿಲ್ದಾಣ ಇತರೆ ಜನನಿಬಿಡ ಪ್ರದೇಶಗಳಲ್ಲಿ ಪೋಲಿಯೊ ಹನಿ ನೀಡಲು ಬೂತ್‌ಗಳನ್ನು ತೆರೆಯಲಾಗುತ್ತಿದೆ. ಪೊಲೀಸ್, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ಸಂಬAಧಪಟ್ಟ ಇಲಾಖೆಗಳು ಬಸ್‌ಗಳನ್ನು ನಿಲ್ಲಿಸಿ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.

ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ವಿದ್ಯುತ್ ಅವಶ್ಯಕತೆ ಅತ್ಯಂತ ಪ್ರಮುಖವಾಗಿರುವುದರಿಂದ ಫೆಬ್ರವರಿ 24ರಿಂದ ಮಾರ್ಚ್ 2ರವರೆಗೆ ನಿರಂತರವಾಗಿ 24 ಗಂಟೆಗಳ ಕಾಲವು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಸಬೇಕು. ಸಾರಿಗೆ ಇಲಾಖೆಯು ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕಾಗಿ ಅಗತ್ಯವಿರುವ ವಾಹನಗಳನ್ನು ನಿಯೋಜನೆ ಮಾಡಬೇಕು. ಕಾಡಂಚಿನ ಗ್ರಾಮಗಳು ಹಾಗೂ ದುರ್ಗಮ ಪ್ರದೇಶಗಳಲ್ಲಿ ವಾಹನಗಳ ಸಂಚಾರಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಪಟ್ಟಣ, ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ವ್ಯಾಪಕವಾಗಿ ಲಸಿಕಾ ಕೇಂದ್ರ ಕಾರ್ಯ ನಿರ್ವಹಿಸಬೇಕಾಗುತ್ತದೆ. ಲಸಿಕಾ ಕೇಂದ್ರಗಳಿಗೆ ನಿಯೋಜಿತರಾಗುವ ಅಧಿಕಾರಿ ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಆಯಾ ಸಂಬAಧಪಟ್ಟ ಇಲಾಖೆಗಳು ಕಲ್ಪಿಸಬೇಕು. ಫೆಬ್ರವರಿ 27ರಿಂದ ಮಾರ್ಚ್ 2ರವರೆಗೆ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು ಪ್ರತಿದಿನದ ಪ್ರಗತಿ ವರದಿಯನ್ನು ಆರೋಗ್ಯ ಇಲಾಖೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಿಗಳು ತೊಡಗಿಕೊಳ್ಳಬೇಕು ಎಂದು ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು.

ಇದೇ ವೇಳೆ ರಾಷ್ಟಿçÃಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಕುರಿತ ಮಾಹಿತಿ ನೀಡುವ ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಅವರು ಬಿಡುಗಡೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ವಿಶ್ವ ಆರೋಗ್ಯ ಸಂಸ್ಥೆಯ ಜಿಲಾ ಪ್ರತಿನಿಧಿ ಡಾ. ಸುಧೀರ್‌ನಾಯಕ್, ಆರ್.ಸಿ.ಎಚ್. ಅಧಿಕಾರಿ ಡಾ. ಅಂಕಪ್ಪ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಕೃಷ್ಣಪ್ರಸಾದ್, ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್, ತಾಲೂಕು ಆರೋಗ್ಯ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಜಿಲ್ಲೆಯಲ್ಲಿ 68380 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಗುರಿ

ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಒಟ್ಟು 68380 ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ.

ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯ ಹಮ್ಮಿಕೊಳ್ಳಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ 23456, ಗುಂಡ್ಲುಪೇಟೆ 13656, ಕೊಳ್ಳೇಗಾಲ 11472, ಹನೂರು 13792 ಹಾಗೂ ಯಳಂದೂರು ತಾಲೂಕಿನಲ್ಲಿ 6004 ಸೇರಿದಂತೆ ಒಟ್ಟು 68380 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಪ್ರತಿ ತಾಲೂಕಿನಲ್ಲಿಯೂ ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ.ಪಲ್ಸ್ ಪೋಲಿಯೋ ನೀಡುವ ಸಲುವಾಗಿ ಜಿಲ್ಲೆಯಲ್ಲಿ ಒಟ್ಟು 624 ಬೂತ್‌ಗಳನ್ನು ತೆರೆಯಲಾಗುತ್ತಿದೆ. ನಗರ ಪ್ರದೇಶಗಳಲ್ಲಿ 96 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 528 ಬೂತ್‌ಗಳು ಕಾರ್ಯನಿರ್ವಹಿಸಲಿವೆ. ಚಾಮರಾಜನಗರ ತಾಲೂಕಿನಲ್ಲಿ 194, ಗುಂಡ್ಲುಪೇಟೆ ತಾಲೂಕಿನಲ್ಲಿ 158, ಕೊಳ್ಳೇಗಾಲ ತಾಲೂಕಿನಲ್ಲಿ 90, ಹನೂರು ತಾಲೂಕಿನಲ್ಲಿ 138 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 44 ಬೂತ್‌ಗಳನ್ನು ತೆರೆಯಲಾಗುತ್ತಿದೆ.

 ಮೇಲ್ವಿಚಾರಣೆಗಾಗಿ ಜಿಲ್ಲೆಯಾದ್ಯಂತ 124 ಮೇಲ್ವಿಚಾರಕರು ಹಾಗೂ 2582 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. 22 ಟ್ರಾö್ಯನ್ಸಿಟ್ ಬೂತ್‌ಗಳು ಹಾಗೂ 7 ಮೊಬೈಲ್ ಬೂತ್‌ಗಳನ್ನು ಸಹ ಕಾರ್ಯನಿರ್ವಹಿಸಲಿವೆ.

ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಫೆಬ್ರವರಿ 27 ರಂದು ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಲಸಿಕೆ ನೀಡಲಾಗುವುದು. ಗ್ರಾಮಾಂತರ ಪ್ರದೇಶಗಳಲ್ಲಿ ಎರಡನೇ ಮತ್ತು ಮೂರನೇ ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ ಎರಡನೇ, ಮೂರನೇ ಹಾಗೂ ನಾಲ್ಕನೇ ದಿನವು ಸಹ ಮನೆ ಮನೆ ಭೇಟಿ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ ಒಟ್ಟು 41593 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 198079 ಮನೆಗಳಿಗೆ ಭೇಟಿ ನೀಡಲಿದ್ದು ಒಟ್ಟು 239672 ಮನೆಗಳಿಗೆ ಭೇಟಿ ನೀಡಲಾಗುತ್ತದೆ.

ಜಿಲ್ಲೆಗೆ 86843 ಡೋಸ್ ಗಳಷ್ಟು ಪೋಲಿಯೊ ಲಸಿಕೆ ಅಗತ್ಯವಿರುವುದನ್ನು ಗುರುತಿಸಲಾಗಿದ್ದು, ಇದನ್ನು ರಾಜ್ಯ ಲಸಿಕಾ ಉಗ್ರಾಣದಿಂದ ಪಡೆದು ತಾಲೂಕುವಾರು ಲಸಿಕಾ ಕೇಂದ್ರಗಳಿಗೆ ಪೂರೈಸುವ ವ್ಯವಸ್ಥೆ ಕೈಗೊಳ್ಳಲಾಗಿದೆ.

ಈ ಹಿಂದೆ ಎಷ್ಟೇ ಬಾರಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ ಫೆಬ್ರವರಿ 27 ರಂದು ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಎಲ್ಲಾ ಮಕ್ಕಳಿಗೂ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು. ಎಲ್ಲಾ ಪೋಷಕರು, ಚುನಾಯಿತ ಪ್ರತಿನಿಧಿಗಳು, ಧಾರ್ಮಿಕ ಮತ್ತು ಸಮುದಾಯದ ಮುಖಂಡರು, ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘ ಸಂಸ್ಧೆಯ ಪದಾಧಿಕಾರಿಗಳು ಸಹಕಾರ ನೀಡಿ ಆಯಾ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments