Wednesday, April 24, 2024
spot_img
HomeBangalore Ruralಬಾಲ್ಯ ವಿವಾಹ ನಿಷೇಧ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಪಂ ಸಿಇಓ ಕೆ.ರೇವಣ್ಣಪ್ಪ

ಬಾಲ್ಯ ವಿವಾಹ ನಿಷೇಧ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಪಂ ಸಿಇಓ ಕೆ.ರೇವಣ್ಣಪ್ಪ

ದೇವನಹಳ್ಳಿ: ರಾಜ್ಯಾದ್ಯಂತ ಮಾರ್ಚ್ 06 ರಿಂದ ಮಾರ್ಚ್ 17ರವರೆಗೆ ಬಾಲ್ಯ ವಿವಾಹ ನಿಷೇಧ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಬಾಲ್ಯ ವಿವಾಹ ನಿಷೇಧ ಅಭಿಯಾನ ಕಾರ್ಯಕ್ರಮದ ಯಶಸ್ವಿಗಾಗಿ ಸಂಬAಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣ್ಣಪ್ಪ ಸೂಚನೆ ನೀಡಿದರು.

ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿಂದು ನಡೆದ ಬಾಲ್ಯ ವಿವಾಹವನ್ನು ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕಾಗಿ ಸಂಬAಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಬಾಲ್ಯ ವಿವಾಹ ನಿಷೇಧ ಅಭಿಯಾನದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಾರ್ಚ್ 06 ರಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ. ಅದರಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೇವನಹಳ್ಳಿಯಲ್ಲಿ ಆಯೋಜಿಸಲಾಗುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪೌರಾಡಳಿತ, ಸಣ್ಣ ಕೈಗಾರಿಕೆಗಳ ಸಚಿವರಿಂದ ಕಾರ್ಯಕ್ರಮಕ್ಕೆ ವೀಡಿಯೋ ಆನ್ ವೀಲ್ಸ್ ವಾಹನದ ಮೂಲಕ ಚಾಲನೆ ನೀಡಲಿದ್ದಾರೆ ಎಂದರಲ್ಲದೆ, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಯುವಕರು, ಯುವತಿಯರು, ಸಾರ್ವಜನಿಕರು, ಸ್ತಿçÃಶಕ್ತಿ ಸಂಘದ ಪ್ರತಿನಿಧಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಅಭಿಯಾನದ ಅಂಗವಾಗಿ ಜಿಲ್ಲೆಯ ಹೋಬಳಿ ಹಂತದಲ್ಲಿ ಆನ್‌ವೀಲ್ಸ್ ವಾಹನದೊಂದಿಗೆ ಅಭಿಯಾನದ ಜ್ಯೋತಿ ಸಂಚರಿಸಲಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ-2016ರ ಕುರಿತಂತೆ ಅರಿವು, ಶಾಲಾ ಕಾಲೇಜು, ಹಾಸ್ಟೆಲ್‌ಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕ್ಯಾನ್ವಸ್ ಬಟ್ಟೆಯಲ್ಲಿ ಸಹಿ ಅಭಿಯಾನ(ಸಿಗ್ನೇಚರ್ ಕ್ಯಾಂಪೇನ್) ಮಾನವ ಸರಪಳಿ ಹಾಗೂ ಪ್ರತಿಜ್ಞಾ ಸ್ವೀಕಾರ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿಜ್ಞಾ ವಿಧಿಯನ್ನು ಗ್ರಾಮ ಮಟ್ಟ ತಾಲ್ಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ವೀಕರಿಸಲು ಸೂಚಿಸಿದರಲ್ಲದೆ, ಕರ್ನಾಟಕ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತಂತೆ ಪ್ರಚಾರ, ಹದಿಹರೆಯದ ಬಾಲಕಿಯರಿಂದ ಧನಾತ್ಮಕ ಸಂದೇಶಗಳಿರುವ ವಿಡಿಯೋಗಳನ್ನು ಹೋಬಳಿ ಮಟ್ಟದಲ್ಲಿ ಪ್ರಚಾರ, ಅಭಿಯಾನ ಜ್ಯೋತಿಯ ಸಂಚಾರವನ್ನು ಆಯೋಜಿಸಬೇಕೆಂದರಲ್ಲದೆ, ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ 60 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದ್ದು, ಪ್ರತಿ ತಾಲ್ಲೂಕಿಗೆ 15 ಕಾರ್ಯಕ್ರಮಗಳಂತೆ ಹಮ್ಮಿಕೊಳ್ಳಲು ತಿಳಿಸಿದರು.

ಬಾಲ್ಯ ವಿವಾಹ ನಿಷೇಧ ಅಭಿಯಾನದ ಮಾಹಿತಿ ಕುರಿತ ಪ್ರಚಾರ ವಾಹನವು ಮಾರ್ಚ್ 06 ರಿಂದ 08 ರವರೆಗೆ ದೇವನಹಳ್ಳಿ ತಾಲ್ಲೂಕು, ಮಾರ್ಚ್ 09 ರಿಂದ 11 ರವರೆಗೆ ದೊಡ್ಡಬಳ್ಳಾಪುರ ತಾಲ್ಲೂಕು, ಮಾರ್ಚ್ 12 ರಿಂದ 14 ರವರೆಗೆ ನೆಲಮಂಗಲ ತಾಲ್ಲೂಕು ಹಾಗೂ ಮಾರ್ಚ್ 15 ರಿಂದ 17 ರಂದು ಹೊಸಕೋಟೆ ತಾಲ್ಲೂಕಿನಲ್ಲಿ ಸಂಚರಿಸಲಿದೆ.

ವಿಡಿಯೋ ಆನ್‌ವೀಲ್ಸ್ ವಾಹನವು ಪ್ರತಿ ಹೋಬಳಿಗೆ ಹೋದಾಗ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜನ ಪ್ರತಿನಿಧಿಗಳು, ಗಣ್ಯರು ಜ್ಯೋತಿಯನ್ನು ಸ್ವೀಕರಿಸುವುದು ಹಾಗೂ ವಾಹನದೊಂದಿಗೆ ಸಂಚರಿಸುವ ಜವಬ್ದಾರಿಯುತ ಸಿಬ್ಬಂದಿಯೊAದಿಗೆ ನಂತರದ ಹೋಬಳಿಗೆ ಕಳುಹಿಸಿ ಕೊಡುವುದು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು. ವೀಡಿಯೋ ಆನ್ ವೀಲ್ಸ್ ವಾಹನವು ನಿಗದಿತ ದಿನಾಂಕಗಳAದು ನಿಗದಿತ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳು ಸ್ತಿçÃಶಕ್ತಿ ಮಹಿಳೆಯರು ವಿವಿಧ ಇಲಾಖಾ ಫಲಾನುಭವಿಗಳು, ಜನಪ್ರತಿನಿಧಿಗಳು ಸೇರುವಂತೆ ಸಂಬAಧಿಸಿದ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕೆಂದು ತಿಳಿಸಿದರು.

ಹೋಬಳಿ ಮಟ್ಟದ ಅಭಿಯಾನ ಕಾರ್ಯಕ್ರಮದಲ್ಲಿ ಆಯ್ದ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಂದ ಬಾಲ್ಯ ವಿವಾಹ ನಿಷೇಧ ವಿಷಯಕ್ಕೆ ಸಂಬAಧಿಸಿದAತೆ ಕಿರು ಭಾಷಣಗಳನ್ನು ಹಾಗೂ ಬಾಲ್ಯ ವಿವಾಹವಾಗಿ ಅದರಿಂದ ಹೊರಬಂದು ಶಿಕ್ಷಣ, ಉದ್ಯೋಗ ಮುಂದುವರೆಸಿದ ಯುವತಿಯರ ಯಶೋಗಾಥೆಗಳನ್ನು ಅವರಿಂದಲೇ ತಿಳಿಪಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಬಾಲ್ಯ ವಿವಾಹಗಳು ನಡೆಯದಂತೆ ಮತ್ತು ಬಾಲ್ಯ ವಿವಾಹ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸುವ ಕುರಿತಂತೆ ಠರಾವು ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರಲ್ಲದೆ, ಭಿತ್ತಿಪತ್ರ ಹಾಗೂ ಕರಪತ್ರ ಸೇರಿದಂತೆ ಇನ್ನಿತರೆ ಪ್ರಚಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಲೀಸ್, ಶಿಕ್ಷಣ, ಕಂದಾಯ, ಕಾರ್ಮಿಕ, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಬುಡಕಟ್ಟು ಕಲ್ಯಾಣ ಇಲಾಖೆಗಳಡಿ(10 ಇಲಾಖೆಗಳು) ಅಧಿಕಾರಿಗಳನ್ನು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಾಗಿ ಗುರುತಿಸಲಾಗಿದ್ದು, ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಟರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಡಿವೈಎಸ್ಪಿ ದೀಪಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬರಾವ್.ಎಸ್ ಸೇರಿದಂತೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments