Thursday, April 18, 2024
spot_img
HomeChamarajanagarಬೂಸ್ಟರ್ ಡೋಸ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚಾಲನೆ

ಬೂಸ್ಟರ್ ಡೋಸ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚಾಲನೆ

ಚಾಮರಾಜನಗರ: ಕೋವಿಡ್-19ರ ಒಮಿಕ್ರಾನ್ 3ನೇ ಅಲೆ ತಡೆಗಾಗಿ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಬೂಸ್ಟರ್ (ಮುನ್ನೆಚ್ಚರಿಕಾ) ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಗರದಲ್ಲಿಂದು ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಒಳಾಂಗಣದಲ್ಲಿAದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೂಸ್ಟರ್ (ಮುನ್ನೆಚ್ಚರಿಕಾ) ಕೋವಿಡ್ ಲಸಿಕಾ ಅಭಿಯಾನ ಆಯೋಜಿಸಲಾಗಿತ್ತು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 3ನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಮುಂಚೂಣಿ ಕಾರ್ಯಕರ್ತರಾದ ಆರೋಗ್ಯ, ಪೊಲೀಸ್, ರೆವಿನ್ಯೂ ಸೇರಿದಂತೆ ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಇಂದಿನಿAದ ಬೂಸ್ಟರ್ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿವೆ. ಈ ಪ್ರಯುಕ್ತ ಜಿಲ್ಲೆಯಲ್ಲಿಯೂ ಸಹ ಬೂಸ್ಟರ್ ಲಸಿಕಾ ಅಭಿಯಾನ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದ್ದು, ಈ ಪೈಕಿ 8,23,474 ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿದ್ದು, 3ನೇ ಅಲೆ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಇನ್ನೂ ಪಡೆಯದಿರುವವರು ನಿಗದಿತ ಅವಧಿಯಲ್ಲಿ ಲಸಿಕೆ ಪಡೆಯುವ ಮೂಲಕ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಯವರು ಮನವಿ ಮಾಡಿದರು.

ಲಸಿಕಾಕರಣ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ರಾಜ್ಯ ಶೇ. 96ರಷ್ಟು ಗುರಿ ನಿಗದಿಪಡಿಸಿತ್ತು. ಪ್ರಸ್ತುತ ಜಿಲ್ಲೆಯು ಲಸಿಕೆ ನೀಡಿಕೆಯಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದೆ. ಲಸಿಕಾಕರಣದ ನೋಡಲ್ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕುಮಟ್ಟದ ಎಲ್ಲಾ ಅಧಿಕಾರಿಗಳಿಂದ ಈ ಯಶಸ್ಸು ಸಾಧ್ಯವಾಗಿದೆ. ಒಮಿಕ್ರಾನ್ ವೈರಾಣು ವೇಗವಾಗಿ ಹರಡುತ್ತಿದ್ದು, ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಟೆಸ್ಟಿಂಗ್, ಟ್ರಾö್ಯಕಿಂಗ್, ಟ್ರೀಟ್‌ಮೆಂಟ್ ಹಾಗೂ ಲಸಿಕಾಕರಣ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ರಾಜ್ಯವು ಪ್ರತಿದಿನ 2200 ಟೆಸ್ಟಿಂಗ್ ನಿಗದಿ ಮಾಡಿದ್ದು, ಜಿಲ್ಲೆಯಲ್ಲಿ ಪ್ರಸ್ತುತ 1500-1600 ಟೆಸ್ಟಿಂಗ್ ನಡೆಯುತ್ತಿದೆ ಮುಂದಿನ ದಿನಗಳಲ್ಲಿ ತ್ವರಿತವಾಗಿ ನಿಗದಿತ ಗುರಿ ಸಾಧಿಸಲಾಗುವುದು. ಸರ್ಕಾರದ ನಿರ್ದೇಶನಗಳು ಹಾಗೂ ಮಾರ್ಗಸೂಚಿಗಳನ್ನು ಅನುಸರಿಸಿ ಅಧಿಕಾರಿಗಳಿಗೆ ಕಾಲಕಾಲಕ್ಕೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಮಾತನಾಡಿ ಕೋವಿಡ್-19ರ 3ನೇ ಅಲೆ ತಡೆಗೆ ಮುನ್ನೆಚ್ಚರಿಕೆಯಾಗಿ ಹಮ್ಮಿಕೊಳ್ಳಲಾಗಿರುವ ಬೂಸ್ಟರ್ ಡೋಸ್ ಲಸಿಕೆ ಅಭಿಯಾನದಲ್ಲಿ ಮೊದಲ ದಿನ ಚಾಮರಾಜನಗರ ತಾಲೂಕಿನ 2379, ಗುಂಡ್ಲುಪೇಟೆ 1135, ಹನೂರು 812, ಕೊಳ್ಳೇಗಾಲ 1031 ಹಾಗೂ ಯಳಂದೂರು ತಾಲೂಕಿನ 428 ಮಂದಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 5785 ಮಂದಿಗೆ ಬೂಸ್ಟರ್ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಮೊದಲ ಹಾಗೂ ಎರಡನೇ ಡೋಸ್ ಪಡೆದ 60 ವರ್ಷ ಮೇಲ್ಪಟ್ಟವರು ಆರೋಗ್ಯದಲ್ಲಿ ಏರುಪೇರು ಕಂಡುಬAದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಸಿಕೆ ಪಡೆಯಬಹುದು ಎಂದರು.

ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಇದ್ದರು.  

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments