Sunday, May 5, 2024
spot_img
HomeChikballapurಶಿಡ್ಲಘಟ್ಟ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಶಿಡ್ಲಘಟ್ಟ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಶಿಡ್ಲಘಟ್ಟ: ಕೊರೋನಾದ 3ನೇ ಅಲೆ ಪ್ರಾರಂಭವಾಗಿದ್ದು, ಅದರಿಂದಾಗುವ ಅನಾಹುತಗಳನ್ನು ತಪ್ಪಿಸಲು 15-18 ವರ್ಷದ ಮಕ್ಕಳಿಗೆ ಲಸಿಕೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಈಗಾಗಲೇ ಕೊರೋನಾದ 3ನೇ ಅಲೆ ಪ್ರಾರಂಭವಾಗಿದ್ದು, ಅದರಿಂದಾಗುವ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕಾ ಅಬಿಯಾವನ್ನು ಹಮ್ಮಿಕೊಂಡಿದ್ದು, ಮುಖ್ಯವಾಗಿ ಮಕ್ಕಳಿಗೆ ಅದರಿಂದಾಗುವ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿ 15-18 ವರ್ಷದ ಒಳಗಿರುವ ಶಾಲೆ, ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಿ ಲಸಿಕೆ ಹಾಕುತ್ತಿದೆ ಎಂದು, ಹಾಗೂ ವಯಸ್ಸಾಗಿರುವ 60 ವರ್ಷದ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ 3ನೇ ಬಾರಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲರೂ ಲಸಿಕೆ ಪಡೆದು ಅನಾಹುತಗಳನ್ನು ತಪ್ಪಿಸಿ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾದಿಕಾರಿ ವೆಂಕಟೇಶ್ ಮಾತನಾಡಿ ಪ್ರಂಟ್ ಲೈನ್ ವರ್ಕಸ್, ಆರೋಗ್ಯ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ರೆವಿನ್ಯೂ ಡಿರ್ಪಾಟ್‍ಮೆಂಟ್, ಪೋಲಿಸ್ ಸಿಬ್ಬಂದಿ, ಪಿ.ಡಿ.ಒ, ತಾಲ್ಲೂಕು ಪಂಚಾಯ್ತಿ ಅದಿಕಾರಿಗಳು, ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಬೂಸ್ಟರ್ ಡೋಸನ್ನು ನೀಡುತ್ತಿದ್ದು, 2ನೇ ಡೋಸ್ ಪಡೆದ 9 ತಿಂಗಳ ನಂತರ ನೀಡುತ್ತಿರುವುದಾಗಿ, ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಸಹ 9 ತಿಂಗಳು ಪೂರ್ಣಗೊಂಡ ನಂತರ ಬೂಸ್ಟರ್ ಡೋಸ್ ನೀಡುತ್ತಿರುವುದಾಗಿ ತಿಳಿಸಿದರು.

ತಾಲ್ಲೂಕಿನಲ್ಲಿ ಈಗಾಗಲೇ ಶೇ 86% 2ನೇ ಡೋಸ್ ಲಸಿಕೆ ನೀಡಿದ್ದು, ಶಾಲಾ ಕಾಲೇಜಿನ 15-18 ವರ್ಷ ಒಳಗಿರುವವರಿಗೆ ಶೇ 90% ಲಸಿಕೆ ನೀಡಿರುವುದಾಗಿ, ಇನ್ನು 10 ಸಾವಿರ ಸೆಕೆಂಡ್ ಡೋಸ್ ನೀಡಿದರೆ 100% ಡೋಸ್ ಪೂರ್ಣಗೊಳ್ಳುವುದಾಗಿ ತಿಳಿಸಿದ ಅವರು ಈ ನಿಟ್ಟಿನಲ್ಲಿ ಆರೋಗ್ಯ ಸಿಬ್ಬಂದಿ ಶ್ರಮಿಸುತ್ತಿರುವುದಾಗಿ ತಿಳಿಸಿದರು. 

ತಹಸಿಲ್ದಾರ್ ರಾಜೀವ್ ಮಾತನಾಡಿ, ಕೋವಿಡ್‍ನ ಓಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟನಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು, ಸರ್ಕಾರದ ಸೂಚನೆಯಂತೆ ಎಲ್ಲರೂ ತಪ್ಪದೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಸ್ಯಾನಿಟೈಸರ್ ಬಳಸಿ ಕೋವಿಡ್ ನಿಯಮಗಳನ್ನು ಪಾಲಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಗಾಟನೆ ಮಾಡಿದರು, ಹಾಗೂ 60 ವರ್ಷ ಮೇಲ್ಟಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಯಿತು.

ಕಾರ್ಯಕ್ರಮದಲ್ಲಿ ನಗರ ಪೌರಾಯುಕ್ತ ಶ್ರೀಕಾಂತ್, ನಗರಸಭಾ ಸದಸ್ಯರು, ನಗರಸಭಾ ಅದಿಕಾರಿಗಳು, ಆಶಾ ಕಾರ್ಯಕರ್ತೆರು, ಸಾರ್ವಜನಿಕರ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತಿತತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments