Sunday, April 28, 2024
spot_img
HomeBangaloreಕೋವಿಡ್ ಬೂಸ್ಟರ್ ಡೋಸ್ ಲಸಿಕೆಗೆ ಸಚಿವ ಎಂಟಿಬಿ ನಾಗರಾಜ್ ಚಾಲನೆ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಕಾರ್ಯಕ್ರಮದಲ್ಲಿ...

ಕೋವಿಡ್ ಬೂಸ್ಟರ್ ಡೋಸ್ ಲಸಿಕೆಗೆ ಸಚಿವ ಎಂಟಿಬಿ ನಾಗರಾಜ್ ಚಾಲನೆ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿ

ದೇವನಹಳ್ಳಿ: ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆರಂಭವಾಗಿರುವ ಹಿನ್ನಲೆಯಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಬೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಚಾಲನೆ ನೀಡಿದರು.

ಪಟ್ಟಣದ ಲಯನ್ಸ್ ಕ್ಲಬ್ ಕೋವಿಡ್-19 ಲಸಿಕಾ ಕೇಂದ್ರದ ಆವರಣದಲ್ಲಿ ಕೋವಿಡ್ ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಡೀ ರಾಜ್ಯದ ಎಲ್ಲಾ ಕೇಂದ್ರ ಸ್ಥಾನಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್19 ಬೂಸ್ಟರ್ ಡೋಸ್ ಲಸಿಕೆಯನ್ನು ನೀಡುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಕೋವಿಡ್-19 ಎರಡನೇ ಡೋಸ್ ಲಸಿಕೆ ಪಡೆದ 9 ತಿಂಗಳಿನ ನಂತರ ಈ ಡೋಸ್‌ಅನ್ನು ಹಾಕಿಸಿಕೊಳ್ಳಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇದು ಸಹಕಾರಿಯಾಗಲಿದೆ. 3ನೇ ಅಲೆ ಕೋವಿಡ್ ಈಗಾಗಲೇ ಪ್ರಾರಂಭವಾಗಿದೆ. ರಾಜ್ಯದಲ್ಲಿ ಬಹಳ ವೇಗವಾಗಿ ವಿಸ್ತರಿಸುತ್ತಿದೆ. ಜಿಲ್ಲೆಯಲ್ಲಿ 300ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ ತಾಲೂಕುವಾರು ಸರ್ವೆ ಮಾಡುವುದರ ಮೂಲಕ ಶ್ರಮಿಸುತ್ತಿದ್ದಾರೆ. ಸರಕಾರ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ  ಒಟ್ಟಾಗಿ ಕ್ರಮಗಳನ್ನು ತೆಗೆದುಕೊಂಡು ಹೋಗುತ್ತಿದೆ ಎಂದು ಹೇಳಿದರು.

ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗ ಬಹಳ ವೇಗವಾಗಿ ಹರಡುತ್ತಿದೆ. 3ನೇ ಅಲೆಯಿಂದ ತಪ್ಪಿಸಿಕೊಳ್ಳಲು ಮೊದಲನೇಯದಾಗಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ನೀಡುವ ಕಾರ್ಯವಾಗುತ್ತಿದೆ. ತದನಂತರ 60ವರ್ಷ ಮೇಲ್ಪಟ್ಟ ಹಿರಿಯರಿಗೆ ಈ ಲಸಿಕೆಯನ್ನು ಹಾಕಲಾಗುತ್ತದೆ. ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಮೊದಲನೇ ಮತ್ತು ಎರಡನೇ ಕೋವಿಡ್ ಲಸಿಕೆ ಪಡೆದ 9 ತಿಂಗಳ ನಂತರ ಬೂಸ್ಟರ್ ಡೋಸ್ ಪಡೆಯಬೇಕಾಗುತ್ತದೆ. ತಾಲೂಕಿನಲ್ಲಿ 3400ಜನಕ್ಕೆ ಬೂಸ್ಟರ್ ಡೋಸ್ ನೀಡಬೇಕಾಗುತ್ತದೆ. ಎಲ್ಲರೂ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಮಾಸ್ಕ್ ಮತ್ತು ಸ್ಯಾನಿಟೈಸರ್ ಹಾಕುವುದನ್ನು ಮರೆಯಬಾರದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಡಿಹೆಚ್‌ಒ ತಿಪ್ಪೇಸ್ವಾಮಿ, ತಹಶೀಲ್ದಾರ್ ಅನಿಲ್‌ಕುಮಾರ್, ಪುರಸಭಾ ಸಿಒ ಎ.ಎಚ್.ನಾಗರಾಜ್, ಮಾಜಿ ಶಾಸಕ ಜಿ.ಚಂದ್ರಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ.ರವಿಕುಮಾರ್, ತಾಲೂಕು ಅಧ್ಯಕ್ಷ ಸುಂದರೇಶ್, ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ರವೀಂದ್ರ, ಪುರಸಭಾ ಸದಸ್ಯ ಎಸ್.ನಾಗೇಶ್, ಮುಖಂಡ ಲಕ್ಷಿö್ಮÃನಾರಾಯಣ್, ಬಿಜೆಪಿ ಮಹಿಳಾ ಘಟಕದ ಪುನಿತಾ, ಲಕ್ಷಿö್ಮÃ, ಬಿಜೆಪಿ ಮುಖಂಡರಾದ ಓಬದೇನಹಳ್ಳಿ ಮುನಿಯಪ್ಪ, ಅಮರನಾಥ್, ಮಧುಸುದನ್, ಸಾಗರ್, ಆರೋಗ್ಯ ಸಹಾಯಕಿಯರು, ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments