Saturday, May 4, 2024
spot_img
HomeChikballapurಪ್ರಸಕ್ತ ವರ್ಷದಿಂದಲೇ ಮೆಡಿಕಲ್ ಕಾಲೇಜು ಕಾರ್ಯಾರಂಭ ಕೇಂದ್ರ ಸರ್ಕಾರದ ಎನ್.ಎಂ.ಸಿ ಅನುಮತಿ: ಕಾಲೇಜು ಮಂಜೂರು ಮಾಡಿಸುವಲ್ಲಿ...

ಪ್ರಸಕ್ತ ವರ್ಷದಿಂದಲೇ ಮೆಡಿಕಲ್ ಕಾಲೇಜು ಕಾರ್ಯಾರಂಭ ಕೇಂದ್ರ ಸರ್ಕಾರದ ಎನ್.ಎಂ.ಸಿ ಅನುಮತಿ: ಕಾಲೇಜು ಮಂಜೂರು ಮಾಡಿಸುವಲ್ಲಿ ಸುಧಾಕರ್ ಯಶಸ್ವಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಜನರ ಬಹು ವರ್ಷಗಳ ಕನಸನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಾಕಾರಗೊಳಿಸಿದ್ದಾರೆ. ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ಕಾರ್ಯಾರಂಭಗೊಳ್ಳಲಿದ್ದು, 100 ವಿದ್ಯಾರ್ಥಿಗಳು ಪ್ರಥಮ ವರ್ಷದ ಎಂಬಿಬಿಎಸ್‌ಗೆ ದಾಖಲಾಗಲಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಕಾಲೇಜು ಆರಂಭಕ್ಕೆ ಮುದೇನಹಳ್ಳಿ ಬಳಿ ಸಕಲ ಸಿದ್ದತೆಗಳು ನಡೆದಿದೆ. ಈ ಕುರಿತ ಒಂದು ವರದಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ 2019 ರ ನವೆಂಬರ್‌ನಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಸುಮಾರು 650 ಕೋಟಿರೂಗಳ ಯೋಜನೆಯನ್ನು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪ್ರಭಾವಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಚಿಕ್ಕಬಳ್ಳಾಪುರಕ್ಕೆ ರದ್ದುಪಡಿಸಿ ಕನಕಪುರಕ್ಕೆ ತೆಗೆದುಕೊಂಡು ಹೋದರು.

ಇದು ರಾಜಕೀಯವಾಗಿ ದೊಡ್ಡ ಬಿರುಗಾಳಿಯನ್ನು ಎಬ್ಬಿಸಿತ್ತಲ್ಲದೆ ಅಂದಿನ ಶಾಸಕ ಡಾ.ಸುಧಾಕರ್ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿಗೆ ಸೇರ್ಪಡೆಗೊಂಡು ಶತಾಯಗತಾಯ ವೈದ್ಯಕೀಯ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗುವ ಮೂಲಕ ಚಿಕ್ಕಬಳ್ಳಾಪುರಕ್ಕೆ ದೊಡ್ಡ ಕೊಡುಗೆಯನ್ನೆ ಕೊಡಿಸಿದರು.

ರಾಷ್ಟಿçÃಯ ಹೆದ್ದಾರಿ 7ಕ್ಕೆ ಹೊಂದಿಕೊAಡAತೆ ಅರೂರು ಬಳಿ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜು ಹಾಗು 750 ಹಾಸಿಗೆಗಳ ಆಸ್ಪತ್ರೆ ಭರದಿಂದ ನಿರ್ಮಾಣವಾಗುತ್ತಿದೆ.

ಮುಂದಿನ ವರ್ಷದ ವೇಳೆಗೆ ಹೊಸ ವೈದ್ಯಕೀಯ ಕ್ಯಾಂಪಸ್ ನಿರ್ಮಾಣವಾಗಲಿದ್ದು, ಈ ವರ್ಷದಿಂದಲೇ ಕಾಲೇಜಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಆರೋಗ್ಯ ಹಾಗು ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಾ.ಸುಧಾಕರ್ ಮುತುವರ್ಜಿ ವಹಿಸಿ ಕೇಂದ್ರ ಸರ್ಕಾರದ ನ್ಯಾಷನಲ್ ಮೆಡಿಕಲ್ ಕಮೀಷನ್‌ನಿಂದ ಅನುಮತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ತಿಂಗಳಿನಿAದ ತರಗತಿಗಳು ಆರಂಭವಾಗಲಿದ್ದು ಇದಕ್ಕಾಗಿ ಮುದ್ದೇನಹಳ್ಳಿ ಸಮೀಪದ ಸರ್ಕಾರಿ ಸ್ವಾಮ್ಯದ ಸರ್.ಎಂ.ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದ ಕಟ್ಟಡವನ್ನು ಬಳಕೆಮಾಡಿಕೊಳ್ಳುತ್ತಿದ್ದು, ವೈದ್ಯಕೀಯ ಶಿಕ್ಷಣ  ಉದ್ದೇಶಕ್ಕಾಗಿ 3 ಬ್ಲಾಕ್‌ಗಳನ್ನು ಸಿದ್ದಪಡಿಸಲಾಗಿದೆ. ಅಂತೂ ವೈದ್ಯಕೀಯ ಕಾಲೇಜನ್ನು ಜಿಲ್ಲೆಗೆ ತರುವಲ್ಲಿ ಸುಧಾಕರ್‌ರವರ ಪ್ರಯತ್ನ ಸಫಲ ಕಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments