Tuesday, April 16, 2024
spot_img
HomeTumkurರಾಷ್ಟಿçÃಯ ಪಲ್ಸ್ ಪೋಲಿಯೋ: ಶೇ.100ರಷ್ಟು ಗುರಿ ಸಾಧನೆಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚನೆ

ರಾಷ್ಟಿçÃಯ ಪಲ್ಸ್ ಪೋಲಿಯೋ: ಶೇ.100ರಷ್ಟು ಗುರಿ ಸಾಧನೆಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚನೆ

ತುಮಕೂರು: ಜಿಲ್ಲಾದ್ಯಂತ ಫೆಬ್ರುವರಿ 27ರಿಂದ ಹಮ್ಮಿಕೊಂಡಿರುವ ರಾಷ್ಟಿçÃಯ ಪಲ್ಸ್ ಪೊಲಿಯೋ ಕಾರ್ಯಕ್ರಮದಡಿ ಶೇ.100ರಷ್ಟು ನಿಗಧಿತ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿAದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 0-5 ವರ್ಷದೊಳಗಿನ 2,18,023 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಇದರಲ್ಲಿ ಮೊದಲನೇ ದಿನವೇ 2,02,034 ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಶೇ.92ರಷ್ಟು ಗುರಿ ಸಾಧಿಸಲಾಗಿದೆ ಎಂದು ತಿಳಿಸಿದರು.

ವಿಶೇಷವಾಗಿ ವಲಸೆ ಬಂದಿರುವ ಸಮುದಾಯ, ಲಸಿಕಾ ವಂಚಿತ ಪ್ರದೇಶ, ಕೊಳಚೆ ಪ್ರದೇಶ ಹಾಗೂ ಅತಿ ಸೂಕ್ಷö್ಮ ಪ್ರದೇಶಗಳಲ್ಲಿ ಹೆಚ್ಚಿನ ಆದ್ಯತೆಯ ಮೇರೆಗೆ ಪಲ್ಸ್ ಪೋಲಿಯೋ ಹನಿ ನೀಡಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಕೋವಿಡ್_19ರ ಮೂರನೇ ಅಲೆಯು ನಿಯಂತ್ರಣದಲ್ಲಿದೆ. ಆದರೆ ಎರಡನೇ ಡೋಸ್ ಲಸಿಕಾಕರಣವು ಪೂರ್ಣಗೊಂಡಿರುವುದಿಲ್ಲ. ಆದ್ದರಿಂದ ಬರುವ ಬುಧವಾರದಂದು ಗ್ರಾಮೀಣ ಹಾಗೂ ಶುಕ್ರವಾರ ನಗರ ಪ್ರದೇಶಗಳಲ್ಲಿ ಲಸಿಕಾ ಮೇಳವನ್ನು ನಡೆಸಿ ಲಸಿಕಾಕರಣದ ನಿಗಧಿತ ಗುರಿಯನ್ನು ಪೂರ್ಣಗೊಳಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಕೋವಿಡ್ -19 ವೈರಸ್‌ನಿಂದ ಮೃತಪಟ್ಟವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ. ಜಿಲ್ಲೆಯಿಂದ 1047 ಅರ್ಜಿಗಳು ಸ್ವೀಕೃತಗೊಂಡಿದ್ದು, 857 ಮಂದಿ ಮೃತರ ವಾರಸುದಾರರಿಗೆ ಪರಿಹಾರ ಧನವನ್ನು ವಿತರಿಸಲಾಗಿದೆ. ಉಳಿದ 190 ಅರ್ಜಿಗಳಿಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣ ನಿಗಧಿತ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪೈಕಿ ಪಹಣಿ ಒಟ್ಟುಗೂಡಿಸುವಿಕೆ, ಪಹಣಿ ಕಾಲಂ,3/9 ಮಿಸ್‌ಮ್ಯಾಚ್, ಭೂಮಿ ಪೆಂಡೆನ್ಸಿ ಕುರಿತು ಯಾವುದೇ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರಲ್ಲದೆ, ಕಂದಾಯ ಗ್ರಾಮಗಳ ರಚನೆ ಸಂಬAಧ ಅಧಿಕಾರಿಗಳು ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಸ್ಮಶಾನ ಹಾಗೂ ವಿವಿಧ ಉದ್ದೇಶಗಳಿಗೆ ಭೂಮಿಯನ್ನು ಕಾಯ್ದಿರಿಸುವುದು, ಸಕಾಲ, ನಾಡಕಚೇರಿ ಪ್ರಗತಿ ಪರಿಶೀಲನೆ ಹೇಮಾವತಿ, ರೈಲ್ವೆ ಯೋಜನೆ, ರಾಷ್ಟಿçÃಯ ಹೆದ್ದಾರಿ, ಎತ್ತಿನಹೊಳೆ ಯೋಜನೆಗಳ ಭೂಸ್ವಾಧೀನ ಸೇರಿದಂತೆ ವಿವಿಧ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ, ಪಾಲಿಕೆ ಆಯುಕ್ತೆ ರೇಣುಕಾ, ಉಪವಿಭಾಗಾಧಿಕಾರಿ ವಿ.ಅಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಎಂ.ಬಿ. ನಾಗೇಂದ್ರಪ್ಪ, ಜಿಲ್ಲಾ ಶಸ್ತç ಚಿಕಿತ್ಸಕ ಡಾ: ಟಿ.ಎ ವೀರಭದ್ರಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಮೋಹನ್ ದಾಸ್, ತಹಶೀಲ್ದಾರ್ ಮೋಹನ್ ಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments