Monday, April 29, 2024
spot_img
HomeMandyaರಾಷ್ಟೀಯ ಲೋಕ್ ಅದಾಲತ್; ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ: ವಸ್ತ್ರಮಠ

ರಾಷ್ಟೀಯ ಲೋಕ್ ಅದಾಲತ್; ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ: ವಸ್ತ್ರಮಠ

ಮಂಡ್ಯ: ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟವರಿಗೆ ತಿಳಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಸ್ತ್ರಮಠ ಹೇಳಿದರು.
ನಗರದ ಎ.ಡಿ.ಆರ್ ಕಟ್ಟಡದಲ್ಲಿ ಲೋಕ್ ಅದಾಲತ್ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ನ್ಯಾಯಾಲಯದಲ್ಲಿ ಇರುವಂತ ಪ್ರಕರಣಗಳು ರಾಜಿಯಾಗುವಂತ ವ್ಯಾಜ್ಯಗಳನ್ನು ರಾಜಿ ಮಾಡಿಕೊಂಡು ಮುಕ್ತಾಯಗೊಳಿಸಿಕೊಳ್ಳಲು ರಾಷ್ಟೀಯ ಲೋಕ್ ಅದಾಲತ್ ಸಹಾಯಕಾರಿಯಾಗಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು.
2022ನೇ ಮಾರ್ಚ್ 12 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಜಿಲ್ಲೆಯಲ್ಲಿ ಕೂಡ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ/ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್-ಲೈನ್, ವೀಡಿಯೋ ಕಾನ್ಫರೆನ್ಸ್, ಇ-ಮೇಲ್  dlsa.mandya@gmail.com  ಎಸ್.ಎಂ.ಎಸ್, ವಾಟ್ಸ್‍ಆ್ಯಪ್ ಸಂಖ್ಯೆ: 9482971495ಗೆ ಸಂದೇಶದ ಮುಖಾಂತರ ಅಥವಾ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್, ಪೀಠಗಳು ನಡೆಯುತ್ತಲಿವೆ ಎಂದರು.
ಫೆ.14 ರಿಂದ ಮಾರ್ಚ್ 12 ರವರೆಗೆ ಟೆಲಿಪೆÇೀನ್ ಬಿಲ್, ವಿದ್ಯುತ್ ಬಿಲ್ಲು, ಸಣ್ಣ ಪುಟ್ಟ ಬ್ಯಾಂಕ್ ಸಾಲ ವಸೂಲಾತಿಗಾಗಿ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ವ್ಯಾಜ್ಯ ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿ ಮುಖಾಂತರ ವಿಶೇಷ ಪೀಠ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ ಸುಮಾರು 76,546 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ ಸುಮಾರು 19,548 ಪ್ರಕರಣಗಳು ರಾಜಿ ಆಗಬಹುದಾದಂತಹ ಪ್ರಕರಣಗಳಾಗಿವೆ. ಅವುಗಳಲ್ಲಿ ಸುಮಾರು 6,757 ಪ್ರಕರಣಗಳು ಈಗಾಗಲೇ ರಾಜಿಗಾಗಿ ಪರಿಗಣಿಸಲಾಗಿದೆ ಎಂದು ಸೂಚಿಸಿದರು.
ಕಳೆದ ಬಾರಿ ಲೋಕ್ ಅದಾಲತ್ ನಲ್ಲಿ 11,086ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿದ್ದು, ವಕೀಲರ, ಪಕ್ಷಗಾರರ ಹಾಗೂ ಎಲ್ಲಾ ನ್ಯಾಯಲಯದ ಗೌರವಾನ್ವಿತ ನ್ಯಾಯಾಧೀಶರುಗಳ ಸಹಯೋಗದೊಂದಿಗೆ ಇತ್ಯರ್ಥ ಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.
ಈ ಬಾರಿಯ ಲೋಕ್-ಅದಾಲತ್ ನಲ್ಲಿಯೂ ಸಹ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಜನ ಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯಧಾನ ಮಾಡಬೇಕೆಂಬ ಇಚ್ಛೆಯಿಂದ ಪ್ರಕರಣಗಳನ್ನು ತೆಗೆದುಕೊಂಡಿದ್ದು, ಜನ ಸಾಮಾನ್ಯರು ಇದರ ಸದುಪಯೋಗ ಪಡೆದುಕೊಂಡು ಲೋಕ್ ಅದಾಲತ್ ಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಎ.ಎಂ ನಳಿನಿಕುಮಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments