Friday, April 19, 2024
spot_img
HomeRamnagarವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ: ಗಂಗಾಧರ್

ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ: ಗಂಗಾಧರ್

ರಾಮನಗರ: ರಾಷ್ಟಿçÃಯ ಆರೋಗ್ಯ ಅಭಿಯಾನದಡಿಯಲ್ಲಿ ಇಲಾಖೆಯ ವತಿಯಿಂದ ದೊರೆಯುವ ಸೇವಾ ಸೌಲಭ್ಯಗಳ ಮಾಹಿತಿ ಕುರಿತಂತೆ ಬ್ಯಾನರ್ ಮತ್ತು ಬಿತ್ತಿಪತ್ರಗಳ ಮೂಲಕ ವಸ್ತು ಪ್ರದರ್ಶನ ಏರ್ಪಡಿಸಿದ್ದು ಜೊತೆಗೆÀ ಆರೋಗ್ಯ ಕಾರ್ಯಕ್ರಮಗಳ ಮಾಹಿತಿಯನ್ನೊಳಗೊಂಡ ಕರ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್ ಅವರು ತಿಳಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ರಾಮನಗರ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಟೌನ್, ಅರ್ಚಕರಹಳ್ಳಿ ಗ್ರಾಮದೇವರ ಹಬ್ಬದ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ವಸ್ತು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  
ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ನಂತರ ಮಾತನಾಡುತ್ತಾ. ಈ ಯೋಜನೆಯ ಪ್ರಯೋಜನ ಪಡೆಯುವಂತೆ ಸಲಹೆ ನೀಡಿದರು. ಜೊತೆಗೆ ಇಲಾಖೆ ವತಿಯಿಂದ ಉಚಿತವಾಗಿ ದೊರೆಯುವ ಸೇವೆಗಳು ಮತ್ತು ಯೋಜನೆಗಳಾದ ಗರ್ಭಿಣಿ, ಬಾಣಂತಿ ಆರೈಕೆ, ಸಾರ್ವತ್ರಿಕ ಲಸಿಕೆ, ಕುಟುಂಬ ಕಲ್ಯಾಣ ಯೋಜನೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಎ.ಬಿ-ಎ.ಆರ್.ಕೆ ಯೋಜನೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.  
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಂಭುಲಿAಗಯ್ಯ ಅವರು ಮಾತನಾಡುತ್ತಾ ಕೋವಿಡ್ ಸೋಂಕು ನಿಯಂತ್ರಿಸಬೇಕಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರು. ಹಾಗೂ ೧೫ ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕ ಸುರೇಶ್‌ಬಾಬು, ಐ.ಇ.ಸಿ ವಿಭಾಗದ ಮಧು.ಎ.ಎಂ, ಆಶಾ ಕಾರ್ಯಕರ್ತೆ ಪ್ರೇಮ, ಮೀನಾಕ್ಷಿ, ಭಾಗ್ಯಮ್ಮ, ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments