Thursday, March 28, 2024
spot_img
HomeMandyaವೈರಮುಡಿ ಉತ್ಸವ: ಅಗತ್ಯ ಸೌಲಭ್ಯ ಕಲ್ಪಿಸಲು ಸೂಚನೆ

ವೈರಮುಡಿ ಉತ್ಸವ: ಅಗತ್ಯ ಸೌಲಭ್ಯ ಕಲ್ಪಿಸಲು ಸೂಚನೆ

ಮಂಡ್ಯ: ಮಾ.9 ರಿಂದ  21 ರವರೆಗೆ ನಡೆಯುವ ವೈರಮುಡಿ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ, ಸಾರಿಗೆ ಸೌಲಭ್ಯ ಹಾಗೂ ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.
ಇಂದು ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಜಾತ್ರಾ ಅವಧಿಯಲ್ಲಿ ಸ್ವಚ್ಛತೆ ಕಾಪಾಡಲು ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಗತ್ಯಕ್ರಮ ಕೈಗೊಳ್ಳಬೇಕು ಹಾಗೂ ಜಾತ್ರಾ ಮಹೋತ್ಸವ ಮುಗಿಯುವ ಹೆಚ್ಚುವರಿ ಸಿಬ್ಬಂದಿ ಮತ್ತು ಪೌರಕಾರ್ಮಿಕರನ್ನು ನೇಮಿಸಿ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು
ದೇವಾಲಯದ ಸಮೀಪ ಆಂಬುಲೆನ್ಸ್ ಮತ್ತು ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ವಿವಿಧ ಇಲಾಖೆ ಅಧಿಕಾರಿಗಳಿಂದ ವಾಹನ ಪಾಕಿರ್ಂಗ್, ಬ್ಯಾರಿಕೇಡ್, ರಸ್ತೆ ದುರಸ್ತಿ, ಉತ್ಸವಗಳ ನಿರ್ವಹಣೆ, ದೀಪಾಲಂಕಾರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವ್ಯ ಪ್ರಭು, ಪಾಂಡವಪುರ ಉಪ ವಿಭಾಗಾಧಿಕಾರಿ ಶಿವನಂದ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments