Tuesday, April 30, 2024
spot_img
HomeRamnagarಶಿಕ್ಷಣದಿಂದ ಹೊರಗುಳಿದಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಮಕ್ಕಳನ್ನು ಗುರುತಿಸಿ: ಜವರೇಗೌಡ ಟಿ

ಶಿಕ್ಷಣದಿಂದ ಹೊರಗುಳಿದಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಮಕ್ಕಳನ್ನು ಗುರುತಿಸಿ: ಜವರೇಗೌಡ ಟಿ

ರಾಮನಗರ: ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಕ್ಕೆ ಸೇರಿರುವವರು ತಮ್ಮ ಪೂರ್ವಜರು ತೊಡಗಿದ್ದ ವೃತ್ತಿಯಲ್ಲೇ ತೊಡಗಿಕೊಂಡು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಮೊದಲು ಜಿಲ್ಲೆಯಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಾಸಿಸುವ ಸ್ಥಳಗಳಿಗೆ ಭೇಟಿ ಶಿಕ್ಷಣದಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಶಿಕ್ಷಣ ನೀಡುವ ಕೆಲಸವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಲೆಮಾರಿ/ ಅರೆಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದರಿ ಜನಾಂಗದಲ್ಲಿ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳುವಂತೆ ತರಬೇತಿಗಳನ್ನು ನೀಡಬೇಕು ಇದರಿಂದ ಅವರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವಲಸೆ ಹೋಗುವುದು ತಪ್ಪುತ್ತದೆ ಎಂದರು.
ಅಲೆಮಾರಿ/ ಅರೆಅಲೆಮಾರಿ ಜನಾಂಗದ ಬಹಳಷ್ಟು ಜನರು ಮೂಡನಂಬಿಕೆಯನ್ನು ಅನುಸರಿಸುತ್ತಾರೆ. ಇದರಿಂದ ಅವರು ಸಮಾಜದ ಮುಖ್ಯವಾಹಿನಿಗೆ ಬರುತ್ತಿಲ್ಲ. ಮೂಡನಂಬಿಕೆಗಳನ್ನು ಒಂದೇ ದಿನದಲ್ಲಿ ಹೋಗಲಾಡಿಸುವುದು ಕಷ್ಟ. ಸದರಿ ಸಮುದಾಯದ ಮುಖ್ಯಸ್ಥರನ್ನು ಸಹಯೋಗದೊಂದಿಗೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದರು.
ಅಲೆಮಾರಿ/ ಅರೆಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ನಾಮನಿರ್ದೇಶಿತ ಸದಸ್ಯ ಬಿ. ರಂಗನಾಥಪ್ಪ ಅವರು ಮಾತನಾಡಿ ಕುದೂರಿನ ನವಗ್ರಾಮದಲ್ಲಿ ಕೆಲವು ಅಲೆಮಾರಿ ಜನಾಂಗದವರು ನಿವೇಶನ ಹಾಗೂ ವಸತಿ ರಹಿತರಾಗಿ ಕೆರೆಯ ಸುತ್ತಮುತ್ತ ವಾಸಿಸುತ್ತಿದ್ದಾರೆ. ಇವರಿಗೆ ಮೂಲಭೂತ ವ್ಯವಸ್ಥೆಗಳನ್ನು ಒದಗಿಸಬೇಕಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದಿಂದ ವಸತಿ ಯೋಜನೆಗಳಿದ್ದು, ನಿಖರ ಮಾಹಿತಿ ನೀಡಿದ್ದಲ್ಲಿ ಅರ್ಹರಿಗೆ ವಸತಿ ಒದಗಿಸಲಾಗುವುದು. ಈ ಜನಾಂಗದವರಿಗೆ ಸರ್ಕಾರದ ಯೋಜನೆಗಳನ್ನು ಒದಗಿಸಲು ಮತದಾರರ ಗುರುತಿನ ಚೀಟಿ ಹಾಗೂ ಅಧಾರ್ ಗುರುತಿನ ಚೀಟಿಯ ಅವಶ್ಯಕವಾಗಿದ್ದು, ಅವುಗಳನ್ನು ಪಡೆದುಕೊಳ್ಳಬೇಕು ಎಂದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿವಪ್ರಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ  ರಾಮನ್ ಸಿ.ವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಎಚ್, ಅಲೆಮಾರಿ/ ಅರೆಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ನಾಮನಿರ್ದೇಶಿತ ಸದಸ್ಯ ಮಾರಯ್ಯ ಹಾಗೂ ಇನ್ನಿತರ ಅಧಿಕಾರಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments