Friday, March 29, 2024
spot_img
HomeChikballapurಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಡಿಜಿಟಲ್ ಲೈಬ್ರರಿ ನಿರ್ಮಾಣ: ಓದುಗರಿಗೆ ಎಲ್ಲ ಅನುಕೂಲ...

ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಡಿಜಿಟಲ್ ಲೈಬ್ರರಿ ನಿರ್ಮಾಣ: ಓದುಗರಿಗೆ ಎಲ್ಲ ಅನುಕೂಲ ಕಲ್ಪಿಸಲು ಚಿಂತನೆ

ಶಿಡ್ಲಘಟ್ಟ: ಓದುವ ಶಾಲಾ ಕಾಲೇಜು ಮಕ್ಕಳಿಂದ ಹಿರಿಯವರೆಗೂ ಮಹಿಳೆಯರು ಸೇರಿ ಎಲ್ಲ ವರ್ಗದವರಿಗೂ ಇಷ್ಟವಾಗುವ ಆಸಕ್ತಿ ಇರುವ ಎಲ್ಲ ರೀತಿಯ ಸಾಹಿತ್ಯವನ್ನು ಒದಗಿಸಲಾಗುವುದು, ಅದಕ್ಕೆ ಪೂರಕವಾದ ಎಲ್ಲ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಎಇಇ ರಮೇಶ್ ತಿಳಿಸಿದರು.
ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿ ಕೇಂದ್ರಸ್ಥಾನದಲ್ಲಿ ಡಿಜಿಟಲ್ ಲೈಬ್ರರಿಯನ್ನು ನಿರ್ಮಾಣ ಮಾಡುತ್ತಿದ್ದು ಜಿಲ್ಲಾ ಪಂಚಾಯಿತಿ ಎಇಇ ರಮೇಶ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ತಂಡವು  ಪರಿಶೀಲನೆ ನಡೆಸಿದರು.
ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ನಿಧಿಯಲ್ಲಿ 2.5 ಲಕ್ಷ ರೂ.ವೆಚ್ಚದಲ್ಲಿ ಡಿಜಿಟಲ್ ಲೈಬ್ರರಿ ನಿರ್ಮಾಣವಾಗುತ್ತಿದೆ. 
ಇಲ್ಲಿ ಟಿವಿ, ಕಂಪ್ಯೂಟರ್, ಇಂಟರ್‌ನೆಟ್, ವಿದ್ಯುತ್, ಕುಡಿಯುವ ನೀರು ಜತೆಗೆ ಓದಿಕೊಳ್ಳಲು ಪೂರಕವಾದ ವಾತಾವರಣವನ್ನು ಕಲ್ಪಿಸಲಾಗುತ್ತಿದೆ.
ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಟಿವಿಯನ್ನು ಬಳಸಿಕೊಳ್ಳಲಾಗುತ್ತದೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹಿಡಿದು ಐಎಎಸ್ ಕೆಎಎಸ್‌ನಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಪೂರಕವಾದ ಡಿಜಿಟಲ್ ಮಾದರಿ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ. 
ಗೋಡೆಗಳ ಮೇಲೆ ಚಿತ್ರಗಳು ಓದುಗ ಮಕ್ಕಳನ್ನು ಆಕರ್ಷಿಸುವಂತಿವೆ. 
ಮುಂದಿನ ತಿಂಗಳಲ್ಲಿ ಡಿಜಿಟಲ್ ಲೈಬ್ರರಿ ಲೋಕಾರ್ಪಣೆಗೊಳ್ಳಲಿದ್ದು ಸಾರ್ವಜನಿಕರು ಸದುಪಯೋಗಪಡಿಸಿ ಕೊಳ್ಳಲು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಎಇಇ ರಮೇಶ್,  ಎಂಜಿನಿಯರ್ ರವಿ, ಗ್ರಾಮಪಂಚಾಯಿತಿ ಸದಸ್ಯ ವೀರಾಪುರ ವೆಂಕಟೇಶ್, N, ವೆಂಕಟೇಶ್,ದ್ಯಾವಪ್ಪ, ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments