Sunday, April 28, 2024
spot_img
HomeTumkurಮಕರ ಸಂಕ್ರಾಂತಿ ಪ್ರಯುಕ್ತ ಸೂರ್ಯ ನಮಸ್ಕಾರ ಪ್ರದರ್ಶನ

ಮಕರ ಸಂಕ್ರಾಂತಿ ಪ್ರಯುಕ್ತ ಸೂರ್ಯ ನಮಸ್ಕಾರ ಪ್ರದರ್ಶನ

ತುಮಕೂರು: ಮಕರ ಸಂಕ್ರಾAತಿಯ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಬೆಳಿಗ್ಗೆ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 12 ಆಸನಗಳ ಸೂರ್ಯ ನಮಸ್ಕಾರ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ, ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ/ ಸಿಬ್ಬಂದಿಗಳು ಹಾಗೂ ರಂಗಭೂಮಿ ಕಲಾವಿದರು ಪಾಲ್ಗೊಂಡು 12 ಆಸನಗಳ ಸೂರ್ಯ ನಮಸ್ಕಾರವನ್ನು ಅಭ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಸಿದ್ದರಬೆಟ್ಟ ಪ್ರಕೃತಿ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ|| ಹೆಚ್.ಎಸ್. ಭವ್ಯ ಭೂನಮನ, ಶಶಂಕಾಸನ, ಅಷ್ಠಾಂಗಾಸನ, ಭುಜಂಗಾಸನ, ಪರ್ವತಾಸನ, ಏಕಪಾದ ಸಂಚಲನ, ದಂಡಾಸನ ಸೇರಿದಂತೆ ಒಟ್ಟು 12 ಆಸನಗಳ ಸೂರ್ಯ ನಮಸ್ಕಾರವನ್ನು ಅಭ್ಯಾಸ ಮಾಡುವ ತರಬೇತಿ ನೀಡಿ, ಸ್ಥಿರಂ ಸುಖಂ ಆಸನಂ ಎಂಬAತೆ ಸ್ಥಿರವಾಗಿ ಸುಖವಾಗಿ ಆಸನಗಳನ್ನು ಅಭ್ಯಾಸ ಮಾಡಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರಿಕಥಾ ವಿದ್ವಾನ್ ಡಾ|| ಲಕ್ಷö್ಮಣ ದಾಸ್ ಮಾತನಾಡಿ, ಯೋಗಾಭ್ಯಾಸ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕು. ಪ್ರತಿನಿತ್ಯ ಸೂರ್ಯನಿಗೆ ನಮಸ್ಕರಿಸಬೇಕು. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು.  ಪ್ರತಿನಿತ್ಯ ಅಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಂಜೀವಮೂರ್ತಿ ಮಾತನಾಡಿ, ಯೋಗಾಭ್ಯಾಸ ಮಾಡುವುದರಿಂದ ಮನಸ್ಸು ಹಾಗೂ ದೇಹದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.

ರಂಗಭೂಮಿಯ ಕಲಾವಿದರು, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಮ್.ರವಿಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ್,  ನಾಟಕ ಮನೆಯ ಮಹಾಲಿಂಗ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ, ಕೌಶಾಲ್ಯಾಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ವಿಶ್ವೇಶ್ವರ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೇಲ್ವಿಚಾರಕ ಸುರೇಶ್ ಕುಮಾರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ದೇಶಾದ್ಯಂತ ಇಂದು ಏಕಕಾಲದಲ್ಲಿ 75 ಲಕ್ಷ ಜನರಿಂದ “12 ಆಸನಗಳ ಸೂರ್ಯ ನಮಸ್ಕಾರ” ಕಾರ್ಯಕ್ರಮ ಪ್ರದರ್ಶನಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments