Thursday, May 2, 2024
spot_img
HomeChikballapurಸಕಾಲ ಯೋಜನೆ ಅನುಷ್ಠಾನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ 47 ಬಾರಿ ಪ್ರಥಮ: ಜಿಲ್ಲಾಧಿಕಾರಿ...

ಸಕಾಲ ಯೋಜನೆ ಅನುಷ್ಠಾನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ 47 ಬಾರಿ ಪ್ರಥಮ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆಯ 2022ರ ಜನವರಿ ತಿಂಗಳ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಕಳೆದ ಜನವರಿ ತಿಂಗಳಲ್ಲಿಯೂ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿ ಉತ್ತಮ  ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಈ ಕುರಿತು ಅವರು ಬುಧವಾರ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿ ಮಾತನಾಡುತ್ತಾ, ಜಿಲ್ಲೆಯಲ್ಲಿ ಜನವರಿ  ಮಾಹೆಯಲ್ಲಿ ಒಟ್ಟು 68,667 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ, ಈ ಪೈಕಿ 67,722 ಅರ್ಜಿಗಳನ್ನು ಸಕಾಲ ನಿಯಮಗಳನ್ವಯ ನಿಗದಿತ ಕಾಲ‌ಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ.4,071 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತಗೊಂಡಿವೆ. 2,217 ಅರ್ಜಿಗಳು ವಿಲೇವಾರಿಯಾಗುವುದು ಬಾಕಿಯಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವುದು ತಪ್ಪುತ್ತದೆ. ಜೊತೆಗೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ. ಸಕಾಲ ಯೋಜನೆ ಅನುಷ್ಠಾನದಲ್ಲಿ  ಜನವರಿ  ಮಾಹೆಯಲ್ಲೂ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿರುವುದು ಸಂತಸ ತಂದಿದೆ ಎಂದರು.

ಗಮನಾರ್ಹ ಸಾಧನೆ

ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಯಾವಾಗಲೂ ಮುಂಚೂಣಿಯಲ್ಲಿದ್ದು, ಸದರಿ ಯೋಜನೆ  ಆರಂಭವಾದಾಗಿನಿಂದ (2012 ರಿಂದ) ಈ  ವರೆಗೆ  ಸರ್ಕಾರ ಈ ಯೋಜನೆಯ  ಪ್ರಗತಿಯ  ಅಂಕಿ  ಅಂಶಗಳನ್ನು ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ 47 ಬಾರಿ (ತಿಂಗಳು) ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲಾಡಳಿತದ ಪಾರದರ್ಶಕ, ಯುಕ್ತ, ತ್ವರಿತ ಆಡಳಿತಕ್ಕೆ ಹಾಗೂ ಸರ್ಕಾರದ ಎಲ್ಲಾ ಯೋಜನೆಗಳ ದಕ್ಷ ಅನುಷ್ಠಾನಕ್ಕೆ ಕೈಗನ್ನಡಿಯಾಗಿದೆ. ಇದು ರಾಜ್ಯ ಮಟ್ಟಕ್ಕೆ ಜಿಲ್ಲೆಯ ಕೀರ್ತಿ ಪತಾಕೆಯನ್ನ ಎತ್ತರಿಸಿದ ಗಮನಾರ್ಹ ಸಾಧನೆ ಎಂದು ಹರ್ಷ  ವ್ಯಕ್ತಪಡಿಸಿದರು.

ಏನಿದು ರ‍್ಯಾಂಕ್?:

ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು gÁåAQAUï ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ. ಕಾಲ ಮಿತಿಯಲ್ಲಿ ಕಡತ ವಿಲೇವಾರಿಯಾಗಬೇಕು ಹಾಗೂ ನಾಗರೀಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಸಾರ್ವಜನಿಕರಿಗೆ ನಿಗಧಿತ ಅವಧಿಯೊಳಗೆ ಸರ್ಕಾರದ ಸೇವೆಗಳು ಲಭ್ಯವಾಗಲಿವೆ ಎಂದರು.

ಸಕಾಲ ಸಚಿವರಿಂದ  ಪ್ರಶಂಸೆ

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ಸಕಾಲ ಯೋಜನೆ ಆರಂಭದಿಂದ ಈ ವರೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಒಟ್ಟು 20,98,381 ಅರ್ಜಿಗಳನ್ನು ಸ್ವೀಕರಿಸಿ 20,76,286 ಅರ್ಜಿಗಳನ್ನು 98.94 ಸರಾಸರಿಯಲ್ಲಿ ವಿಲೇವಾರಿ ಮಾಡಿದೆ. ಈ  ಪೈಕಿ 47  ಬಾರಿ  ಪ್ರಥಮ, 14 ಬಾರಿ  ದ್ವಿತೀಯ  ಹಾಗೂ 10ಬಾರಿ  ತೃತೀಯ  ಸ್ಥಾನ  ಗಳಿಸಿದೆ. ಒಟ್ಟಾರೆ  47 ಬಾರಿ (ಮಾಹೆ) ರಾಜ್ಯ ದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಡಳಿತ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಮಾನ್ಯ ಸಕಾಲ ಸಚಿವರಿಂದ ಪ್ರಶಂಸೆ ಪಡೆದಿರುವ ಕೀರ್ತಿಯು ಜಿಲ್ಲೆಗೆ ಸಲ್ಲುತ್ತದೆ. ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ಸೇವೆ ನೀಡುವಲ್ಲಿ ಸಹಕಾರಿಯಾಗಿ ನಿಂತಿದೆ. ಈ ಅಭೂತಪೂರ್ವ ಸಾಧನೆಗೆ ಸಹಕಾರ ನೀಡಿದ ಹಾಗೂ ಅಹರ್ನಿಶಿ ಶ್ರಮಿಸಿದ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿಯೂ ತಾವೆಲ್ಲರೂ ತಮ್ಮ ಕಾರ್ಯ ವೈಖರಿಯನ್ನು ಹೀಗೆಯೇ ಯಶಸ್ವಿಯಾಗಿ ನಿರ್ವಹಿಸಿ ಪ್ರಥಮ ಸ್ಥಾನವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಇದೇ ವೇಳೆ ಈ ಸಾಧನೆಗೆ ಕೈಜೋಡಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಸಮಸ್ತ ಜನತೆಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆಯನ್ನು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments