Friday, March 29, 2024
spot_img
HomeChikballapurಸರ್ಕಾರಿ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯಿಂದ ಸ್ವಚ್ಛಾತಾ ಕಾರ್ಯಕ್ರಮ

ಸರ್ಕಾರಿ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯಿಂದ ಸ್ವಚ್ಛಾತಾ ಕಾರ್ಯಕ್ರಮ

ಚಿಂತಾಮಣಿ: ಧಾರ್ಮಿಕ ಕೇಂದ್ರಗಳು ಮನುಕುಲಕ್ಕೆ ಬದುಕುವ ರೀತಿಯನ್ನು ತಿಳಿಸುವ ಕೇಂದ್ರಗಳು. ಸ್ವಚ್ಛತೆ ಪರಿಕಲ್ಪನೆ ಇಲ್ಲಿಂದ ಆರಂಭಗೊAಡರೆ ರಾಜ್ಯದ ಪ್ರತಿ ಮನೆಯಲ್ಲಿಯೂ ಜಾಗೃತಿ ಮೂಡಿಸಬಹುದು ಎಂದು ಧರ್ಮಸ್ಥಳದ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕರೆ ನೀಡಿದ್ದು ಈ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿಯು ಪೂಜ್ಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕೇಂದ್ರಗಳು, ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳ ಸ್ವಚ್ಛಾತಾ ಕಾರ್ಯಕ್ಕೆ ಮುಂದಾಗಿದೆ ಎಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿಯ ಜಿಲ್ಲಾ ಯೋಜನಾ ನಿರ್ದೇಶಕ ಪ್ರಶಾಂತ್ ನುಡಿದರು.

ಅವರು ಇಂದು ನಗರದ ಕೆನರಾ ಬ್ಯಾಂಕ್ ಪಕ್ಕದಲ್ಲಿರುವ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೬ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛಾತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ಶ್ರದ್ಧಾ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಪೋಷಕರು ಸೇರಿದಂತೆ ಸ್ವಚ್ಛಾತಾ ಉತ್ಸಾಹವನ್ನು ಜನಸಾಮಾನ್ಯರಲ್ಲಿ ಮೂಡಿಸಬೇಕಾಗಿದೆ ಎಂದರು.  ಶ್ರದ್ಧಾ ಕೇಂದ್ರಗಳ ಪರಿಸರಿದಲ್ಲಿ ಎಲೆ ಅಡಿಕೆ ತಿಂದು ಉಗುಳಬಾರದು, ನೆಗಡಿ ಸೀನುವುದನ್ನು ಮಾಡಬೇಡಿ, ಜಾತ್ರೆಯ ಸಂದರ್ಭಗಳಲ್ಲಿ ಐಸ್‌ಕ್ರೀಮ್ ಕಪ್, ಕಡ್ಡಿಗಳನ್ನು ಎಲ್ಲೆಂದರಲ್ಲಿ ಬಿಸಾಡಬೇಡಿ, ಪ್ಲಾಸ್ಟಿಕ್ ಕವರ್, ಪಾನೀಯ ಬಾಟಲ್, ಬಾಳೆಹಣ್ಣು, ಹಣ್ಣು ಹಂಪಲುಗಳ ಸಿಪ್ಪೆಗಳನ್ನು ಎಲ್ಲೆಂದರಲ್ಲಿ ಎಸೆಯೆದೆ ಸೀದಾ ಕಸದ ಬುಟ್ಟಿಗೆ ಹಾಕಿ, ಎಲ್ಲೆಂದರಲ್ಲಿ ಮಲ-ಮೂತ್ರ ವಿಸರ್ಜನೆ ಮಾಡದಂತೆ ಮಕ್ಕಳಿಗೆ ಮಾರ್ಗದರ್ಶನ ನೀಡಲು ತಿಳಿಸಿದರು.

ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿಯ ಸುಜ್ಞಾನ ನಿಧಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮಂಜೂರಾತಿ ಪತ್ರವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿಯ ತಾಲ್ಲೂಕು ಯೋಜನಾಧಿಕಾರಿ ಶಾರಿಕಾ, ಮೇಲ್ವಿಚಾರಕಿ ಲತಾ, ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮರೆಡ್ಡಿ, ಎಸ್.ಡಿ.ಎಂ.ಸಿ.ಅಧ್ಯಕ್ಷ ಆರ್. ಸುರೇಶ್, ಉಪಾಧ್ಯಕ್ಷೆ  ಶೋಭಾ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments