Saturday, April 27, 2024
spot_img
HomeTumkurಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರದಿಂದ ಹೊಸ ಮಾರ್ಗಸೂಚಿ

ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರದಿಂದ ಹೊಸ ಮಾರ್ಗಸೂಚಿ

ತುಮಕೂರು: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ ಎಂದು ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಹೊಸ ಮಾರ್ಗಸೂಚಿಯು ಇಂದು(ಜನವರಿ 5) ರಾತ್ರಿ 10 ಗಂಟೆಯಿAದ ಜನವರಿ 19ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದ್ದು, ಸಾರ್ವಜನಿಕರು ಸೇರಿದಂತೆ ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಗಳು ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಹೊಸ ಮಾರ್ಗಸೂಚಿಗಳನ್ವಯ ಪ್ರತಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸರ್ಕಾರದ ಎಲ್ಲಾ ಇಲಾಖೆಗಳು ವಾರದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ. ಆದರೆ ಅಗತ್ಯ ಸೇವೆ ಒದಗಿಸುವ ಇಲಾಖೆಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ. ಅದೇ ರೀತಿ ಶುಕ್ರವಾರದ ರಾತ್ರಿ 10 ಗಂಟೆಯಿAದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ ಪಬ್/ಬಾರ್/ರೆಸ್ಟೋರೆಂಟ್/ಹೋಟೆಲ್/ ಸಿನಿಮಾ ಮಂದಿರಗಳ ಸಾಮರ್ಥ್ಯದ ಶೇ.50ರಷ್ಟು ಆಸನಗಳಿಗೆ ಅನ್ವಯಿಸುವಂತೆ ಮಾತ್ರ ಕೋವಿಡ್ ನಿಯಮ ಪಾಲನೆಯೊಂದಿಗೆ ಸೇವೆ ಒದಗಿಸಬೇಕು. ಮದುವೆ ಮತ್ತಿತರ ಶುಭ ಸಮಾರಂಭಗಳನ್ನು ನಡೆಸಲು ಹೊರಾಂಗಣ ಪ್ರದೇಶಗಳಲ್ಲಿ 200 ಹಾಗೂ ಒಳಾಂಗಣದಲ್ಲಿ 100 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ತಿಳಿಸಿದರು.

ದೇವಸ್ಥಾನ ಸೇರಿದಂತೆ ಮತ್ತಿತರ ಧಾರ್ಮಿಕ ಸ್ಥಳಗಳಲ್ಲಿ ಪೂಜಾ ಕೈಂಕರ್ಯ ಮತ್ತು ದೇವರ ದರ್ಶನಕ್ಕೆ ಮಾತ್ರ ಅನುಮತಿಸಲಾಗಿದೆ. ಕೋವಿಡ್ 2ನೇ ಡೋಸ್ ಲಸಿಕೆ ಪಡೆದವರ ಪ್ರಮಾಣ ಪತ್ರ ಖಚಿತಪಡಿಸಿಕೊಂಡ ನಂತರವಷ್ಟೇ ಧಾರ್ಮಿಕ ಸ್ಥಳಗಳ ಪ್ರವೇಶಕ್ಕೆ ಅನುಮತಿಸಬೇಕು. ವಿಶೇಷ ಪೂಜಾ ಸೇವೆಗೆ ಅವಕಾಶವಿರುವುದಿಲ್ಲ. ಧಾರ್ಮಿಕ ಸ್ಥಳಗಳಿಗೆ 50 ಮಂದಿ(ಎರಡು ಡೋಸ್ ಲಸಿಕೆ ಪಡೆದ)ಗೆ ಮಾತ್ರ ಪ್ರವೇಶ ಕಲ್ಪಿಸಬೇಕು ಎಂದು ಸಂಬAಧಿಸಿದವರಿಗೆ ನಿರ್ದೇಶಿಸಲಾಗಿದೆ ಎಂದರು.

ದಿನಸಿ ಅಂಗಡಿ/ ಮಾಲ್/ ಶಾಪಿಂಗ್ ಕಾಂಪ್ಲೆಕ್ಸ್ಗಳು ಮಾಮೂಲಿಯಂತೆ ಸೇವೆ ಒದಗಿಸಲು ಅನುಮತಿಸಲಾಗಿದೆ. ಕ್ರೀಡಾ ಕಾಂಪ್ಲೆಕ್ಸ್/ಈಜು ಕೊಳ/ಜಿಮ್‌ಗಳಿಗೆ ಅವುಗಳ ಸಾಮರ್ಥ್ಯದ ಶೇ. 50ರಷ್ಟು ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ ನೀಡಬೇಕು ಎಂದರಲ್ಲದೆ, ಎಲ್ಲಾ ರೀತಿಯ ರ‍್ಯಾಲಿ, ಪ್ರತಿಭಟನೆ, ಧರಣಿಗಳನ್ನು ನಿಷೇಧಿಸಲಾಗಿದೆ ಎಂದರು.  

ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಜನಸಂದಣಿಯಾಗದAತೆ ಪ್ರತಿಬಂಧಿಸಲು ಜಾತ್ರೆ/ಉತ್ಸವ/ ಮೆರವಣಿಗೆಯನ್ನು ನಿಷೇಧಿಸಲಾಗಿದೆ ಎಂದರು.

ಕೈಗಾರಿಕೆಗಳು ಮಾಮೂಲಿಯಂತೆ ಕಾರ್ಯನಿರ್ವಹಿಸಲು ಅವಕಾಶವಿದ್ದು, 2ನೇ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕು. ಗುರುತಿನ ಚೀಟಿ, ವ್ಯಾಕ್ಸಿನೇಷನ್ ಪ್ರಮಾಣ ಪತ್ರ ಹಾಜರುಪಡಿಸದೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ 3500 ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಕೋವಿಡ್ ಪಾಸಿಟೀವ್ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಪರೀಕ್ಷೆಯನ್ನು ದ್ವಿಗುಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೋವಿಡ್ ಸೋಂಕು ಇಳಿಮುಖವಾಗಿದ್ದರಿಂದ 3500 ಕೋವಿಡ್ ಪರೀಕ್ಷೆ ಮಾಡಲಾಗುತ್ತಿತ್ತು. ಕೋವಿಡ್ ಪಾಸಿಟೀವ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಪ್ರತಿದಿನ 6000 ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ದಿನನಿತ್ಯದ ಜನಜೀವನಕ್ಕೆ ತೊಂದರೆಯಾಗಬಾರದೆAಬ ದೃಷ್ಟಿಯಿಂದ ಅಂಗಡಿ/ಮುAಗಟ್ಟು, ತರಕಾರಿ ಖರೀದಿಗೆ ಅವಕಾಶ ನೀಡಿದ್ದರೂ ಅಂಗಡಿ ಮಾಲೀಕರು ಜನಸಂದಣಿಯಾಗದAತೆ ವ್ಯಾಪಾರ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಜನಸಂದಣಿ ಹೆಚ್ಚಾಗದಂತೆ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಆಟೋ/ಬಸ್/ ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿದೆ. ಅವುಗಳ ಸಾಮರ್ಥ್ಯದ ಶೇ. 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಬೇಕೆಂದು ಮಾಲೀಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜನವರಿ 14ರ ಸಿದ್ಧರಾಮೇಶ್ವರ ಜಯಂತಿ ರದ್ದು:-

ತಿಪಟೂರು ತಾಲ್ಲೂಕಿನ ಪ್ರಸಿದ್ಧ ಕೆರೆಗೋಡಿ ರಂಗಾಪುರ ಭೂ ಸುಕ್ಷೇತ್ರದ ಶ್ರೀಶ್ರೀಶ್ರೀ ಗುರು ಪರದೇಶಿ ಕೇಂದ್ರ ಮಹಾಸ್ವಾಮಿ ಸಿದ್ಧರಾಮೇಶ್ವರ ಜಯಂತಿಯನ್ನು ರದ್ದುಪಡಿಸಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ 76 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೂ ಯಾವುದೇ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಹಾಸಿಗೆಗಳನ್ನು ಕಾಯ್ದಿರಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ಅಳವಡಿಸಲಾಗಿರುವ 13 ಆಕ್ಸಿಜನ್ ಪ್ಲಾಂಟ್‌ಗಳ ಪೈಕಿ 9 ಆಕ್ಸಿಜನ್ ಪ್ಲಾಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಉಳಿದ 4 ಪ್ಲಾಂಟ್‌ಗಳನ್ನು ಪ್ರಾರಂಭಿಸಲು ಇರುವ ತಾಂತ್ರಿಕ ಸಮಸ್ಯೆಗಳನ್ನು 1 ವಾರದೊಳಗೆ ಪರಿಹರಿಸಲು ತುರ್ತಾಗಿ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಸ್ತುತ 600 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳು ಲಭ್ಯವಿರುವುದರಿಂದ ಹಳ್ಳಿಗಳಲ್ಲಿರುವ ಆಸ್ಪತ್ರೆಗಳಲ್ಲಿಯೂ ಆಕ್ಸಿನೇಟೆಡ್ ಬೆಡ್ ವ್ಯವಸ್ಥೆಗೊಳಿಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶಿಸಲಾಗಿದೆ. ಕೋವಿಡ್ 3ನೇ ಅಲೆಯಲ್ಲಿ ಸಾಮಾನ್ಯವಾಗಿ ಉಸಿರಾಟದ ಸಮಸ್ಯೆ ಸಂಭವಿಸಬಹುದೆAದು ತಜ್ಞರ ಅಭಿಪ್ರಾಯವಿರುವುದರಿಂದ ತುರ್ತು ಸಂದರ್ಭಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೂ ಆಯಾ ಶಾಲಾ-ಕಾಲೇಜುಗಳಲ್ಲಿ 15-18ವರ್ಷದ 50,000 ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಪ್ರತಿದಿನ 20,000 ಮಕ್ಕಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಅತಿಥಿ ಉಪನ್ಯಾಸಕರ ನಿರಂತರ ಧರಣಿ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕಾನೂನು ನಿಯಮದಡಿ ಅತಿಥಿ ಉಪನ್ಯಾಸಕರ ನೇಮಕ/ಖಾಯಂ ಮಾಡಲು ಅವಕಾಶವಿಲ್ಲ. ಅವರ ಗರಿಷ್ಟ ವಯೋಮಿತಿ ಮೀರಿರುವುದರಿಂದ ಖಾಯಂಗೊಳಿಸಲು ಸಾಧ್ಯವಿಲ್ಲ. ಧರಣಿಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದರಿAದ ಎಂದಿನAತೆ ಕಾರ್ಯನಿರ್ವಹಿಸಲು ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ಕೆಲವು ಬೇಡಿಕೆಗಳನ್ನು ಈಡೇರಿಸಲು ನಿಯಮಗಳಡಿ ಸಾಧ್ಯವಿಲ್ಲದಿರುವುದರಿಂದ ದೇಶಸೇವೆಯೆಂದು ಮನಗಂಡು ಕರ್ತವ್ಯಕ್ಕೆ ಹಾಜರಾಗಬೇಕು. ಅವರ ವೇತನಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿ.ಪಂ. ಸಿಇಓ ಡಾ: ಕೆ. ವಿದ್ಯಾಕುಮಾರಿ ಮತ್ತಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments