ಪಾಲಾರ್ ಪತ್ರಿಕೆ | Palar Patrike ಆಲಂಬಗಿರಿ : ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಮಾರ್ಘಶಿರ ಮಾಸದ ಹುಣ್ಣಿಮೆಯಂದು ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಬೆಳಗಲಾಯಿತು. ರಥೋತ್ಸವವನ್ನು ನಡೆಸಲಾಯಿತು. ಭಕ್ತಾಧಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಹುಣ್ಣಿಮೆ ¥