ಮಂಡ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಯುವಜನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದರು ಹಾಗೂ ಅಮೃತ ಕ್ರೀಡಾ ದತ್ತು ಯೋಜನೆ ಮತ್ತು ಅಮೃತ ಸಮುದಾಯ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಸುರೇಶಗೌಡ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.