Friday, April 19, 2024
spot_img
HomeChikballapurBagepalliಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಯುವ ಪೀಳಿಗೆ ಅಳವಡಿಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು

ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಯುವ ಪೀಳಿಗೆ ಅಳವಡಿಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು

ಪಾಲಾರ್ ಪತ್ರಿಕೆ | Palar Pathrike

ಬಾಗೇಪಲ್ಲಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಯುವ ಪೀಳಿಗೆ ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಯುವ ಮುಖಂಡ ಸಿಕೆವಿ ವಿನೋದ್ ತಿಳಿಸಿದರು.ಡಾ.ಬಿ.ಆರ್. ಅಂಬೇಡ್ಕರ್ ರವರ 132ನೇ ಜಯಂತಿಯ ಅಂಗವಾಗಿ ಪಟ್ಟಣದ ಸ್ನೇಹಿತರ ಬಳಗದ ವತಿಯಿಂದ  ಪಟ್ಟಣದ ಉರ್ದು ಶಾಲೆಯ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ಪಾನಕ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಆಧುನಿಕ ಭಾರತದ ನಿರ್ಮಾಣದ ಶ್ರೇಣಿಯಲ್ಲಿ ಡಾ.ಬಿ.ಆರ್‌ಅಂಬೇಡ್ಕರ್ ಅವರ ಕೊಡುಗೆ ಅತ್ಯಂತ ಮಹತ್ವದಾಗಿದ್ದು, ಭಾರತದಲ್ಲಿ ದೀನ ದಲಿತರು ಎದುರಿಸುತ್ತಿರುವ ಮೇಲು, ಕೀಳು ಸೇರಿದಂತೆ ಹಲವು ಸಾಮಾಜಿಕ ಬೇದಭಾವಗಳ ವಿರುದ್ಧ ತಮ್ಮ ಜೀವನದುದ್ದಕ್ಕೂ ಹೋರಾಡಿದರು. ಸರ್ವ ಸಮಾನತೆಯ ತತ್ವದ ವಿಶಿಷ್ಠವಾದ ಸಂವಿಧಾನವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದವರು ಬಾಬಾಸಾಹೇಬರು.ಸಾಹೇಬರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಪ್ರಗತಿ ಸಾಧಿಸಬೇಕೆಂದು ತಿಳಿಸಿದರು.ಝೈನ್ ಎಂಟರ್ ಪ್ರೈಜಸ್ ಮಾಲೀಕ ಹಾಗೂ ಯುವ ಮುಖಂಡರಾದ  ಷಬ್ಬೀರ್ ಮಾತನಾಡಿ,ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ನೆಲೆಗಟ್ಟಿನಲ್ಲಿ ಜೀವನ ರೂಪಿಸಿಕೊಂಡಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಜಗತ್ತು ಕಂಡ ಶ್ರೇಷ್ಠ ವಿಜ್ಞಾನಿ ಅವರ ಆದರ್ಶ, ವ್ಯಕ್ತಿತ್ವ ಮತ್ತು ಜ್ಞಾನವನ್ನು ಇಡೀ ಜಗತ್ತು ಸ್ಮರಿಸಿ ಗೌರವಿಸುತ್ತಿದೆ. ದೇಶದ ರೂಪಾಯಿ ಸಮಸ್ಯೆ, ಆರ್ಥಿಕ ಬಿಕ್ಕಟ್ಟು ಮತ್ತು ಸಾಮಾಜಿಕ ಸಮಸ್ಯೆಗಳನ್ನು ವೈಜ್ಞಾನಿಕ ಚಿಂತನೆಗಳ ಮೂಲಕ ಸರಳೀಕರಿಸಿ ಸುಧಾರಣೆ ನೀಡಿದ ಮೇಧಾವಿ ಎನಿಸಿಕೊಂಡಿದ್ದಾರೆ. ಅವರ ಮಾನವೀಯತೆ, ಸಮಾನತೆ ಮತ್ತು ಬಾತೃತ್ವದ ಮೌಲ್ಯಗಳು ಎಂದೆಂದಿಗೂ ಪ್ರಸ್ತುತ ಶಿಕ್ಷಣದಿಂದ ಮಾತ್ರ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯ ಎಂದು ಮನಗಂಡು ಶಿಕ್ಷಣದ ಮೂಲಕ  ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿದವರು ಮತ್ತು ಸಮಾಜದ ಎಲ್ಲ್ಲಾ ಜನರಿಗೆ ಸಮಾನತೆಯನ್ನು ಖಾತ್ರಿಪಡಿಸಿಕೊಳ್ಳಲು ಜಾತಿ ಅಡೆತಡೆಗಳನ್ನು ಕೆಡವಲು ಶ್ರಮಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments