Friday, April 26, 2024
spot_img
HomeChikballapurBagepalliಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಪಾಲಾರ್ ಪತ್ರಿಕೆ | Palar Pathrike

ಬಾಗೇಪಲ್ಲಿ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಗ್ರಾಮದ ಕೋದಂಡರಾಮಸ್ವಾಮಿ ದೇವಾಲಯದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ತಾಲ್ಲೂಕಿನ ಯೋಜನಾಧಿಕಾರಿಗಳಾದ ಗಿರೀಶ್ ರವರು ಮಾತನಾಡಿ, ಆರೋಗ್ಯವೇ ಮಹಾಭಾಗ್ಯ ಆರೋಗ್ಯ ಹೊಂದಿದ್ದರೆ ಸಕಲ ಭಾಗ್ಯವು ಹೊಂದಿದಂತೆ 30ರ ವಯಸ್ಸಿನ ನಂತರ ಎಲ್ಲರೂ ಸಹ ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಒಳಿತು ಎಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಪೊಲೀಸ್ ಇಲಾಖೆಯ ರಮೇಶ್  ರವರು ಮಾತನಾಡಿ, ಆರೋಗ್ಯದ ಜೊತೆಗೆ ಕಾನೂನಿನ ಬಗ್ಗೆಯೂ ಸಹ ಮಹಿಳೆಯರಿಗೆ ಜಾಗೃತಿ ಮೂಡಿಸಿದರು. ಪೊಲೀಸ್ ಇಲಾಖೆಯಿಂದ  ಮಹಿಳೆಯರ ರಕ್ಷಣೆಗೆ ಇರುವ ಹಲವು ಮಾಹಿತಿಗಳ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಗ್ರಾಮ ಅಭಿವೃದ್ಧಿ ಯೋಜನೆಯ ಎಲ್ಲಾ ಕಾರ್ಯಕ್ರಮಗಳು ಶ್ಲಾಘನೀಯ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ಆರೋಗ್ಯ ತಪಾಸಣಾ ಶಿಬಿರದಲ್ಲಿ ಸುಮಾರು 180 ಜನ ಶಿಬಿರದಲ್ಲಿ ಪಾಲ್ಗೊಂಡರು.
ಕಣ್ಣಿನ ತಪಾಸಣೆ ಹಿಮೋಗ್ಲೋಬಿನ್ ಪರೀಕ್ಷೆ ಬಿಪಿ ಶುಗರ್ ತಪಾಸಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಮೇಶ್, ತಾಲ್ಲೂಕು ಯೋಜನಾಧಿಕಾರಿಗಳಾದ ಗಿರೀಶ್ ಹೊಸಕೋಟೆ ಐ ಪಾಲಿಕೆರ್ ಗಾಯತ್ರಿ ವಸಂತ್ ಬಸವರಾಜ್ ಗೆಜ್ಜೆ ಆಗಮಿಸಿದ್ದರು. ತಾಲ್ಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕೆ.ಆರ್ ಮಂಜುಳಾ ವಲಯ ಮೇಲ್ವಿಚಾರಕರಾದ ಆನಂದ್ ಒಕ್ಕೂಟದ ಅಧ್ಯಕ್ಷರಾದ ಪರ್ವತಮ್ಮ ಹಾಗೂ ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments