ಪಾಲಾರ್ ಪತ್ರಿಕೆ | Palar Pathrike
ದೇವನಹಳ್ಳಿ: ಕಳೆದ ಒಂದು ವರ್ಷದಿಂದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ರೈತರು ಹಗಲು ರಾತ್ರಿ ಎನ್ನದೆ ತಮ್ಮ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೆಐಎಡಿಬಿಗೆ ಬಿಟ್ಟುಕೊಡುವುದಿಲ್ಲವೆಂದು ಒತ್ತಾಯಿಸಿ ಹೋರಾಟಗಳನ್ನು ಮಾಡುತ್ತಾ ಇದೀಗ ಬೃಹತ್ ರೈತ ಸಮಾವೇಶವನ್ನು ನಡೆಸುವುದರ ಮೂಲಕ ಸರಕಾರಕ್ಕೆ ಚಾಟಿ ಬೀಸಲಾಗಿದೆ.
ದೇವನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ನಡೆದ ಬೃಹತ್ ರೈತ ಸಮಾವೇಶದಲ್ಲಿ ಸ್ಪಟಿಕ ಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿಗಳಿಂದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ನಂತರ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಹಾಗೂ ರೈತ ಮುಖಂಡರು ಭಾಗಿಯಾಗುವುದರ ಮೂಲಕ ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿದರು. ಈ ವೇಳೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ದೇವನಹಳ್ಳಿ ತಾಲೂಕಿಗೆ ಪಂಚರತ್ನ ಸಮಾವೇಶಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದAತಹ ಸಂದರ್ಭದಲ್ಲಿ ಚನ್ನರಾಯಪಟ್ಟಣಕ್ಕೂ ಭೇಟಿ ನೀಡಿ, ರೈತರ ಪರವಾಗಿ ಸ್ಪಷ್ಟವಾಗಿ ಬಹಿರಂಗವಾಗಿ ಭರವಸೆಯನ್ನು ಕೊಟ್ಟಿದ್ದಾರೆ. ಚನ್ನರಾಯಪಟ್ಟಣದ ಕೆಲ ರೈತರು ಮತ್ತು ಅವರ ತಂಡ ದೊಡ್ಡಬಳ್ಳಾಪುರದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಚನ್ನರಾಯಪಟ್ಟಣ ಹೋಬಳಿಯ ರೈತರಿಗಾಗುತ್ತಿರುವ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದರು. ಆ ಸಂದರ್ಭದಲ್ಲಿ ಮಾಜಿ ಸಿಎಂ ಆಗಿದ್ದರೂ ಸಹ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದರು. ಮುಂದಿನ ದಿನಗಳಲ್ಲಿ ಕುಮಾರಣ್ಣ ಸರಕಾರ ಬಂದರೆ, ರೈತರ ಭೂಸ್ವಾಧೀನಕ್ಕೆ ಡಿನೊಟೀಫಿಕೇಷನ್ ಮಾಡಲಾಗತ್ತದೆ. ಅದಕ್ಕೆ ನಾನೇ ಮುಂದೆ ನಿಂತು ಕೆಲಸ ಮಾಡಿಸುತ್ತೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಶಿವರಾಜ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಟಿ.ಗಂಗಾಧರ, ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ, ಪ್ರಾಂತ ರೈತ ಸಂಘದ ಚಂದ್ರ ತೇಜಸ್ವಿ, ರೈತ ಮುಖಂಡರಾದ ಸಿದ್ಧಾರ್ಥ, ಎಂ.ವೆAಕಟೇಶ್, ಜಿಜಿ.ನಾರಾಯಣಸ್ವಾಮಿ, ಗಾರೇ ರವಿಕುಮಾರ್, ಕಾರಹಳ್ಳಿ ಶ್ರೀನಿವಾಸ್, ಮಾರೇಗೌಡ, ತಿಮ್ಮರಾಯಪ್ಪ, ನಂಜಪ್ಪ, ವೆಂಕಟೇಶ್, ರವಿಕಲಾ, ಪುಷ್ಪ, ಶಾರದಗೋಪಾಲ್, ಗೋಪಾಲ್ ಕಪಾಡೆ, ರೈತರು ಇತರರು ಇದ್ದರು.
ಚಿತ್ರ: 1 ಡಿಹೆಚ್‌ಎಲ್ ಪಿ2
ದೇವನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿಯಲ್ಲಿ ಹಮ್ಮಿಕೊಂಡಿದ್ದ ರೈತ ಸಮಾವೇಶದಲ್ಲಿ ರೈತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿರುವುದು.