ಪಾಲಾರ್ ಪಾತ್ರಿಕೆ | Palar Pathrike ದೇವನಹಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವ ಬಗ್ಗೆ ಚುನಾವಣೋತ್ತರ ಸಮೀಕ್ಷೆಗಳು ಸ್ಪಷ್ಟಪಡಿಸಿದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಪಟ್ಟಣದ ಮರಿಶಾಮಪ್ಪ ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ದೇವÀನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ಕಾರ್ಯಕರ್ತರು ಮುಖಂಡರು ಉತ್ಸಾಹದಿಂದ ಪ್ರಾಮಾಣಿಕವಾಗಿ ಶ್ರದ್ದೆಯಿಂದ ಚುನಾವಣೆ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ದೇವನಹಳ್ಳಿಯಲ್ಲಿ ಶಾಸಕರು ಇಲ್ಲದಿರುವುದರಿಂದ ಎಲ್ಲರೂ ಒಗ್ಗಟ್ಟಿನಿಂದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದ್ದಾರೆ. ದೇವನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಗೆಲ್ಲಲಿದ್ದಾರೆ. ಬಿಜೆಪಿ ಸರ್ಕಾರದ ವೈಪಲ್ಯಗಳಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲವಾಗಿಲ್ಲ. ಎಂದು ಹೇಳಿದರು. ರಾಜ್ಯದ ಜನ ಬದಲಾವಣೆ ಬಯಸಿದ್ದು ಜನರ ಭಾವನೆ ಮತದಾನದಲ್ಲಿ ತೋರಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಇಡೀ ರಾಜ್ಯವನ್ನು ಪ್ರವಾಸ ಮಾಡಿದ್ದೇನೆ. ಬೀದರ್ ನಿಂದ ಹಿಡಿದು ಚಾಮರಾಜನಗರ ಸೇರಿದಂತೆ ಎಲ್ಲೆಡೆ ಪ್ರವಾಸ ಮಾಡಿದಾಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವುದು ಖಾತ್ರಿಯಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡ್ ಮಾಡಿರುವುದರಿಂದ ಅನೇಕ ಜನಪರ ಯೋಜನೆಗಳು ಇರುವುದರಿಂದ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕಾಗಿ ಕಾಂಗ್ರೆಸ್ಸಿಗೆ ಹೆಚ್ಚು ಸ್ಥಾನಗಳು ಬರಲು ಸಾಧ್ಯವಾಗಿದೆ. ಮುಖ್ಯಮಂತ್ರಿ ಆಯ್ಕೆಯು ಶಾಸಕರುಗಳು ಮಾಡುತ್ತಾರೆ. ಹೈಕಮಾಂಡ್ ಸಿಎಲ್.ಪಿ ಸಭೆ ಕರೆದು ಮತ್ತು ಅಭಿಪ್ರಾಯ ಪಡೆದು ತೀರ್ಮಾನ ಪಡೆಯಲಿದ್ದಾರೆ. ಎಂದು ಹೇಳಿದರು. ಈ ವೇಳೆಯಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್, ಜಿಪಂ ಮಾಜಿ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಸದಸ್ಯರಾದ ಲಕ್ಷಿö್ಮÃನಾರಾಯಣ್, ಕೆ.ಸಿ.ಮಂಜುನಾಥ್, ಮುಖಂಡರಾದ ಬಿದಲೂರು ಮುನಿರಾಜು, ರಾಯಸಂದ್ರ ಮಂಜುನಾಥ್, ಚನ್ನಕೇಶವ , ಕೃಷ್ಣಮೂರ್ತಿ, ಕಾಂತರಾಜು,, ಮೂರ್ತಿ, ಮತ್ತಿತರರು ಇದ್ದರು.