ಪಾಲಾರ್ ಪತ್ರಿಕೆ | Palar Pathrike
ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಬಾಹುಟವನ್ನು ಹಾರಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಭಾವಿ ಮುಖಂಡರಾದ ಚೇತನ್‌ಗೌಡ ಮತ್ತು ಹಿರಿಗೇನಹಳ್ಳಿ ಶ್ರೀನಿವಾಸ್ ಸೇರಿದಂತೆ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಹಾಲಿ ಪಕ್ಷಗಳನ್ನು ತೊರೆದು ಬಿಜೆಪಿ ತತ್ವ ಸಿದ್ದಾಂತಗಳನ್ನು ಮೆಚ್ಚಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಸಮ್ಮುಕದಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಪಕ್ಷದ ಶಾಲು ಮತ್ತು ಕಮಲದ ಬಾವುಟವನ್ನು ಹಿಡಿಯುವುದರ ಮೂಲಕ ಸೇರ್ಪಡೆಗೊಂಡರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಕೀಯ ಬಿರುಸಿನ ತಂತ್ರಗಾರಿಕೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಲು ಶ್ರಮಿಸುತ್ತಿದ್ದು, ಕ್ಷೇತ್ರದಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯು ತ್ರಿಕೋನ ಸ್ಪರ್ದೆ ಏರ್ಪಡುವುದು ಬಹುತೇಕ ಖಚಿತಗೊಂಡಿದ್ದು, ಕ್ಷೇತ್ರದಲ್ಲಿ ಯಾವ ಪಕ್ಷದ ಬಾಹುಟ ಹಾರಲಿದೆ ಎಂಬುವುದು ಚುನಾವಣೆಯ ನಂತರ ಕಾದು ನೋಡಬೇಕಿದೆ.
ಪ್ರಸ್ತುತ ರಾಜಕೀಯ ವಿದ್ಯಮಾನದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಪಕ್ಷ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಜೆಡಿಎಸ್ ಪಕ್ಷದಿಂದ ಹಾಲಿ ಶಾಸಕರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಲಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯ ಅಭ್ಯರ್ಥಿಗಳ ಹೆಸರು ಘೋಷಣೆಯಾಗದಿರುವುದು ಜನಸಾಮಾನ್ಯರಲ್ಲಿ ಮತ್ತು ಕಾರ್ಯಕರ್ತರಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ರಾಷ್ಟಿçÃಯ ಪಕ್ಷಗಳಲ್ಲಾಗುವ ಬಣಗಳಿಂದಾಗಿ ಗೊಂದಲ ಸೃಷ್ಠಿಯಾಗಿ ಮುಂದಿನ ದಿನಗಳಲ್ಲಿ ಪ್ರಭಾವಿ ನಾಯಕರುಗಳೇ ಬಿಜೆಪಿಯತ್ತ ಮುಖಮಾಡುವ ನಿರೀಕ್ಷೆಗಳು ಕ್ಷೇತ್ರದಲ್ಲಿ ಹೆಚ್ಚು ಕಂಡುಬರುವ ಸೂಚನೆಗಳು ಎದ್ದುಕಾಣುತ್ತಿದೆ.
ಸೇರ್ಪಡೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ಚಂದ್ರಣ್ಣ, ಪಿಳ್ಳಮುನಿಶಾಮಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಸುಂದರೇಶ್, ಜಿಲ್ಲಾ ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಎಚ್.ಎಂ.ರವಿಕುಮಾರ್, ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ್, ಬಯಪ್ಪ ಮಾಜಿ ಅಧ್ಯಕ್ಷ ಎಸ್.ಎಲ್.ಎನ್.ಅಶ್ವತ್ಥ್ ನಾರಾಯಣ್, ಇತರರು ಇದ್ದರು.
ಬಾಕ್ಸ್
ಬಿಜೆಪಿ ಸೇರ್ಪಡೆಗೊಂಡವರು
ಮoಡಿಬೆಲೆ ಕೇಶವ್(ರೈತ), ಎಪಿಎಂಸಿ ಮಾಜಿ ಉಪಾಧ್ಯಕ್ಷ ಸುಧಾಕರ್, ಬುಳ್ಳಹಳ್ಳಿ ರಾಜಪ್ಪ, ಹ್ಯಾಡಾಳ ದೇವರಾಜ್, ವೆಂಕಟೇಶ್ (ಅಪ್ಪ) ಹಾಗೂ ಬೆಂಬಲಿಗರು ಸೇರ್ಪಡೆಗೊಂಡರು.