Thursday, March 28, 2024
spot_img
HomeBangalore Ruralಪ್ರಾಥಮಿಕ ಆರೋಗ್ಯ ವ್ಯವಸ್ಥೆಯ ಬಲವರ್ಧನೆಗೆ ಜಿಲ್ಲೆಯಲ್ಲಿ ಆರು "ನಮ್ಮ ಕ್ಲಿನಿಕ್" ಗಳ ಉದ್ಘಾಟನೆ

ಪ್ರಾಥಮಿಕ ಆರೋಗ್ಯ ವ್ಯವಸ್ಥೆಯ ಬಲವರ್ಧನೆಗೆ ಜಿಲ್ಲೆಯಲ್ಲಿ ಆರು “ನಮ್ಮ ಕ್ಲಿನಿಕ್” ಗಳ ಉದ್ಘಾಟನೆ

ಪಾಲಾರ್ ಪತ್ರಿಕೆ | Palar Pathrike

ಬೆಂಗಳೂರು ಗ್ರಾ : ಪ್ರಾಥಮಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಆರಂಭಿಕ ಹಂತದಲ್ಲೇ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಭವಿಷ್ಯದ ಗಂಭೀರ ಸಮಸ್ಯೆಗಳನ್ನು ತಡೆಗಟ್ಟುವ ಧ್ಯೇಯದೊಂದಿಗೆ ಸರ್ಕಾರ ಇಂದಿನಿAದ ‘ನಮ್ಮ ಕ್ಲಿನಿಕ್’ ಗಳನ್ನು ಪ್ರಾರಂಭಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು 6 ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ದೊರೆಯಿತು.
ದೊಡ್ಡಬಳ್ಳಾಪುರ ತಾಲೂಕಿನ ರೋಜಿಪುರದಲ್ಲಿ ಶಾಸಕ ಡಿ.ವೆಂಕಟರಮಣಯ್ಯ ಹಾಗೂ ಜಿಲ್ಲಾಧಿಕಾರಿ ಆರ್.ಲತಾ “ನಮ್ಮ ಕ್ಲಿನಿಕ್” ಉದ್ಘಾಟಿಸಿದರು. ವಿದ್ಯಾನಗರ ಹಾಗೂ ಬಾಶೆಟ್ಟಿಹಳ್ಳಿಯಲ್ಲಿಯೂ ಶಾಸಕರು ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ನೀಡಿದರು.
ದೇವನಹಳ್ಳಿಯ ಮರಳವಾಡಿ ಹಾಗೂ ಅಂಬೇಡ್ಕರ್ ಕಾಲನಿಯಲ್ಲಿ ಸ್ಥಾಪಿಸಿರುವ ಕೇಂದ್ರಗಳನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ಉದ್ಘಾಟಿಸಿದರು. ನೆಲಮಂಗಲದಲ್ಲಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರು ನಮ್ಮ ಕ್ಲಿನಿಕ್‌ಗೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜೇಂದ್ರ ಮತ್ತಿತರರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ನೀಡಬೇಕು ಎಂಬ ಸದುದ್ದೇಶದಿಂದ ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಜನರನ್ನು ಗುರಿಯಾಗಿಸಿಕೊಂಡು ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ. ಒಂದೇ ದಿನ ರಾಜ್ಯಾದ್ಯಂತ 114 ಕ್ಲಿನಿಕ್‌ಗಳು ಉದ್ಘಾಟನೆಗೊಂಡಿವೆ. ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ತಲಾ ಒಂದರAತೆ ಇನ್ನೂ ಮೂರು ಕ್ಲಿನಿಕ್‌ಗಳು ಪ್ರಾರಂಭವಾಗಲಿವೆ.
ಒAದೇ ಸೂರಿನಡಿ 12 ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಿರುವ ನಮ್ಮ ಕ್ಲಿನಿಕ್‌ಗಳು ಇಡೀ ದೇಶದಲ್ಲೇ ವಿನೂತನ ಯೋಜನೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments