Saturday, April 27, 2024
spot_img
HomeChamarajanagarಗೃಹಲಕ್ಸ್ಮಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಿ.ಟಿ ಸೂಚನೆ

ಗೃಹಲಕ್ಸ್ಮಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಿ.ಟಿ ಸೂಚನೆ

ಪಾಲಾರ್ ಪತ್ರಿಕೆ | Palar Pathrike

ಚಾಮರಾಜನಗರ: ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಎಲ್ಲ ಅಗತ್ಯ ಸಿದ್ದತೆಗಳನ್ನು ಸಮರ್ಪಕವಾಗಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಿ.ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ0ದು ಗೃಹಲಕ್ಷಿö್ಮ ಯೋಜನೆ ಜಾರಿ ಅನುಷ್ಠಾನ ಸಂಬAಧ ಗೂಗಲ್ ಮೀಟ್ ಮೂಲಕ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 19ರಂದು ರಾಜ್ಯ ಮಟ್ಟದಲ್ಲಿ ಚಾಲನೆ ದೊರೆಯಲಿದೆ. ಜಿಲ್ಲೆಯಲ್ಲೂ ವ್ಯಾಪಕವಾಗಿ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ, ಮಂಜೂರಾತಿ ಪತ್ರ ನೀಡುವ ಕಾರ್ಯವನ್ನು ಸುಸೂತ್ರವಾಗಿ ನಿರ್ವಹಿಸಲು ಪೂರಕ ಸಿದ್ದತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಯಜಮಾನಿ ಮಹಿಳೆ ಯೋಜನೆಯ ಫಲಾನುಭವಿಯಾಗಲಿದ್ದಾರೆ. ನೋಂದಣಿಗಾಗಿ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅವಕಾಶವಿರುವ ಹಿನ್ನೆಲೆಯಲ್ಲಿ ಈ ಕೇಂದ್ರಗಳಲ್ಲಿ ನೋಂದಣಿ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆ ಬಾರದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ನೋಂದಣಿಯಾಗುವ ಪ್ರತಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕವಾಗಬೇಕು. ಡೇಟಾ ಎಂಟ್ರಿ ಆಪರೇಟರ್ ಗಳಿಗೆ ನೋಂದಣಿ ಸಂಬAಧ ತುರ್ತಾಗಿ ತರಬೇತಿ ನೀಡಬೇಕು. ಅಗತ್ಯ ಸಿಬ್ಬಂದಿಗೆ ಎಲ್ಲ ಮಾರ್ಗದರ್ಶನ ಮಾಡಬೇಕು. ನೋಂದಣಿ ಪ್ರಕ್ರಿಯೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇರಬೇಕು ಎಂದರು.

ನೋಂದಣಿ ಕೇಂದ್ರಗಳು, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಗ್ರಾಮ ಪಂಚಾಯತ್ ಕಚೇರಿ ವ್ಯಾಪ್ತಿಯಲ್ಲಿ ಗೃಹಲಕ್ಷಿö್ಮ ಯೋಜನೆ ಕುರಿತು ವ್ಯಾಪಕ ಪ್ರಚಾರ ಮೂಡಿಸುವ ಫಲಕಗಳನ್ನು ಅಳವಡಿಸಬೇಕು. ಫಲಾನುಭವಿಗಳು ನೋಂದಣಿಗೆ ಯಾವುದೇ ಹಣ ನೀಡುವಂತಿಲ್ಲ. ಮಧ್ಯವರ್ತಿಗಳು ಇದರ ದುರುಪಯೋಗಪಡಿಸಿಕೊಳ್ಳದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.

ಅರ್ಹರೆಲ್ಲರಿಗೂ ಯೋಜನೆ ಪ್ರಯೋಜನ ತಲುಪಬೇಕು. ಈ ನಿಟ್ಟಿನಲ್ಲಿ ಯಾವುದೇ ತೊಂದರೆಯಾಗದAತೆ ಫಲಾನುಭವಿಗಳಿಗೆ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು. ಗೃಹಲಕ್ಷಿö್ಮ ಯೋಜನೆ ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ತುರ್ತಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಿ.ಟಿ ಅವರು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷಿö್ಮ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments