Wednesday, May 1, 2024
spot_img
HomeChamarajanagarವಿಧಾನಸಭಾ ಚುನಾವಣೆ ಹಿನ್ನೆಲೆ : ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಭೆ

ವಿಧಾನಸಭಾ ಚುನಾವಣೆ ಹಿನ್ನೆಲೆ : ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಭೆ

     ಪಾಲಾರ್ ಪತ್ರಿಕೆ | Palar Pathrike

ಚಾಮರಾಜನಗರ : ಮುಂಬರಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣಾ ವೇಳೆ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಮಾಡುವ ಸಂಬಂಧ ಚಾಮರಾಜನಗರ ಜಿಲ್ಲೆಯ ಗಡಿ ಭಾಗಗಳಲ್ಲಿ ಹೊಂದಿಕೊಂಡಿರುವ ಹೊರ ರಾಜ್ಯ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ವಚ್ರ್ಯುವಲ್ ಮೂಲಕ ಸಭೆ ನಡೆಸಿದರು.
   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾಮರಾಜನಗರ ಜಿಲ್ಲೆಯ ಅಧಿಕಾರಿಗಳು ಹಾಗೂ ಗಡಿ ವ್ಯಾಪ್ತಿಯಲ್ಲಿ ಬರುವ ಅಂತರರಾಜ್ಯ ಜಿಲ್ಲೆಗಳ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಚ್ರ್ಯುವಲ್ ಮೂಲಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಬರಲಿರುವ ವಿಧಾನಸಭಾ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕ ಹಾಗೂ ಶಾತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಲು ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಕೈ ಜೋಡಿಸುವಂತೆ ತಿಳಿಸಿದರು. 
  ಚಾಮರಾಜನಗರ ಜಿಲ್ಲೆಯು ತಮಿಳುನಾಡು ಹಾಗೂ ಕೇರಳ ರಾಜ್ಯಗಳೊಂದಿಗೆ ಗಡಿ ಪ್ರದೇಶಗಳನ್ನು ಹೊಂದಿದೆ. ಗಡಿ ಭಾಗದಲ್ಲಿ 11 ಚೆಕ್‍ಪೋಸ್ಟ್‍ಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗಡಿ ಭಾಗಗಳ ಚೆಕ್‍ಪೋಸ್ಟ್‍ಗಳಲ್ಲಿ ರಾಜ್ಯಕ್ಕೆ ಬರುವ ಹಾಗೂ ಇಲ್ಲಿಂದ ಹೊರ ಹೋಗುವ ವಾಹನಗಳ ಮೇಲೆ ನಿಗಾ ಇಡಬೇಕಾಗುತ್ತದೆ. ಇದಕ್ಕಾಗಿ ಗಡಿ ಭಾಗದ ರಾಜ್ಯಗಳ ಗಡಿ ಜಿಲ್ಲೆಗಳಿಂದಲೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು. 
  ಚೆಕ್‍ಪೋಸ್ಟ್‍ಗಳಲ್ಲಿ 24*7 ಅವಧಿಯಲ್ಲಿಯೂ ಕಾರ್ಯ ನಿರ್ವಹಿಸಬೇಕಾಗುತ್ತದೆ. ಜಿಲ್ಲೆಯಿಂದ ನಿಯೋಜಿಸಲಾದ ನೋಡಲ್ ಅಧಿಕಾರಿಗಳೊಂದಿಗೆ ಹೊರ ಜಿಲ್ಲೆಗಳ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ಕೈಗೊಳ್ಳಬೇಕಾಗುತ್ತದೆ. ನೇಮಕ ಮಾಡಲಾಗುವ ಹೊರ ಜಿಲ್ಲೆಗಳ ಅಧಿಕಾರಿಗಳ ಮಾಹಿತಿಯನ್ನು ಜಿಲ್ಲಾಡಳಿತ ಪೊಲೀಸ್, ಅಬಕಾರಿ ಇಲಾಖೆಗಳ ಕಚೇರಿಗೆ ಸಲ್ಲಿಸಬೇಕು ಎಂದರು. 
   ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು, ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ. ಮತದಾನದ ಹಿಂದಿನ 72 ಗಂಟೆಗಳ ಅವಧಿಯಲ್ಲಿ ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯ ನಿರತ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಸಂಬಂಧ ಎಲ್ಲಾ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು. 
  ಉಪವಿಭಾಗಾಧಿಕಾರಿ ಗೀತಾ ಹುಡೇದ, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಅಬಕಾರಿ ಉಪ ಆಯುಕ್ತರಾದ ನಾಗಶಯನ, ತಹಶೀಲ್ದಾರರಾದ ರವಿಶಂಕರ್, ಮಂಜುಳಾ, ತಮಿಳುನಾಡು ರಾಜ್ಯದ ನೀಲಗಿರಿ, ಸತ್ಯಮಂಗಲಂ, ಕೃಷ್ಣಗಿರಿ, ಈರೋಡ್, ಧರ್ಮಪುರಿ, ಕೇರಳ ರಾಜ್ಯದ ವೈನಾಡು ಜಿಲ್ಲೆಯ ಪೊಲೀಸ್, ಅಬಕಾರಿ, ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

ಇಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ 
       ಚಾಮರಾಜನಗರ. ಫೆಬ್ರವರಿ 17 – ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಫೆಬ್ರವರಿ 18 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
      ಅಂದು ಬೆಳಿಗ್ಗೆ 11 ಗಂಟೆಗೆ ಮಲೈ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ, ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿರುವ ಮಹಾಶಿವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ. 
ಫೆ. 21ರಂದು ನಗರದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ 
       ಚಾಮರಾಜನಗರ, ಫೆಬ್ರವರಿ 17- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 21ರಂದು ಬೆಳಿಗ್ಗೆ 11 ಗಂಟೆಗೆ ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.        ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎನ್. ಮಹೇಶ್, ಆರ್. ನರೇಂದ್ರ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಉಪಾಧ್ಯಕ್ಷರಾದ ಪಿ. ಸುಧಾ, ಸದಸ್ಯರಾದ ಹೆಚ್.ಎಸ್. ಮಮತ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 
     ದಾವಣಗೆರೆ ಉಪನ್ಯಾಸಕರಾದ ಪಿ.ಬಿ. ವೆಂಕಟಚಲಪತಿ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ. 


ಫೆ. 21ರಿಂದ 23ರವರೆಗೆ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಸಾರ್ವಜನಿಕರಿಂದ

ದೂರು ಸ್ವೀಕಾರ         ಚಾಮರಾಜನಗರ, ಫೆಬ್ರವರಿ 17:- ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಫೆಬ್ರವರಿ 21 ರಿಂದ 23 ರವರೆಗೆ ಭೇಟಿ ನೀಡಿ ಆಯಾ ತಾಲೂಕುಗಳ ಪ್ರವಾಸಿಮಂದಿರದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. 
     ಫೆಬ್ರವರಿ 21ರಂದು ಯಳಂದೂರಿನ ಪ್ರವಾಸಿಮಂದಿರ, 22ರಂದು ಹನೂರು ಹಾಗೂ 23ರಂದು ಚಾಮರಾಜನಗರ ಪ್ರವಾಸಿಮಂದಿರದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಲಿದ್ದಾರೆ.        ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಲಿದ್ದು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣಕ್ಕೆ ಒತ್ತಾಯ, ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 ಮತ್ತು 2ರಲ್ಲಿ ಭರ್ತಿ ಮಾಡಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಕೆ.ಟಿ. ಮ್ಯಾಥ್ಯೂಸ್ ಥಾಮಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಫೆ. 20ರಂದು ಉತ್ತುವಳ್ಳಿ ಗ್ರಾಮದಲ್ಲಿ ವಿದ್ಯುತ್ ಅದಾಲತ್       ಚಾಮರಾಜನಗರ, ಫೆಬ್ರವರಿ 17 ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ವಿದ್ಯುತ್ ಅದಾಲತನ್ನು ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 20ರಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಿದೆ. 
      ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಹಕರು ಹಾಜರಾಗಿ ವಿದ್ಯುತ್ ಸಂಬಂಧಿತ ಕುಂದುಕೊರತೆ ಹಾಗೂ ಸಮಸ್ಯೆಗಳಿದ್ದಲ್ಲಿ ತಿಳಿಸಿ ಪರಿಹರಿಸಿಕೊಳ್ಳುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 
ಫೆ. 20ರಂದು ಕಾಳಿಕಾಂಭ ಕಾಲೋನಿಯಲ್ಲಿ ವಿದ್ಯುತ್ ಅದಾಲತ್ 


      ಚಾಮರಾಜನಗರ :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಉಪವಿಭಾಗದ ಕಾಗಲವಾಡಿ ವ್ಯಾಪ್ತಿಯ ಕಾಳಿಕಾಂಭ ಕಾಲೋನಿಯಲ್ಲಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ವಿದ್ಯುತ್ ಅದಾಲತನ್ನು ಫೆಬ್ರವರಿ 20ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. 
    ಸಂತೇಮರಹಳ್ಳಿಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಹಕರು ಹಾಜರಾಗಿ ಸಮಸ್ಯೆಗಳಿದ್ದಲ್ಲಿ ತಿಳಿಸುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 
ಫೆ. 22ರಂದು ಕೊಳ್ಳೇಗಾಲದಲ್ಲಿ ಉದ್ಯೋಗ ಮೇಳ  ಚಾಮರಾಜನಗರ, ಫೆಬ್ರವರಿ 17:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಫೆಬ್ರವರಿ 22ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕೊಳ್ಳೇಗಾಲದ ಶಿಕ್ಷಕರ ಭವನ (ಗುರು ಭವನ)ದಲ್ಲಿ ಹಮ್ಮಿಕೊಳ್ಳಲಾಗಿದೆ.  
ನಂಜನಗೂಡು, ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಮಾರುಕಟ್ಟೆ ಸೇವೆಗಳು, ಹಣಕಾಸು, ಇನ್ಸೂರೆನ್ಸ್, ಎಂಜಿನಿಯರಿಂಗ್ ಕ್ಷೇತ್ರಗಳು, ಕೈಗಾರಿಕಾ, ಬ್ಯಾಂಕಿಂಗ್ ಮತ್ತು ಆಸ್ಪತ್ರೆ ಸೇವೆಗಳು ಹಾಗೂ ಇತರೆ ಎಲ್ಲಾ ರೀತಿಯ ಸೇವೆಗಳ ಸುಮಾರು 25ಕ್ಕೂ ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. 
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೊಮಾ, ನಸಿರ್ಂಗ್ (ಎಎನ್‍ಎಂ ಮತ್ತು ಜಿಎನ್‍ಎಂ), ಜಿ.ಡಿ.ಎ ಮತ್ತು ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ 18 ರಿಂದ 35 ವರ್ಷ ವಯೋಮಿತಿಯೊಳಗಿನ ಪುರುಷ ಮತ್ತು ಮಹಿಳಾ ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 
ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳನ್ನೊಳಗೊಂಡ ಕನಿಷ್ಠ 10 ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಮೊದಲು ನೊಂದಣಿ ಕೌಂಟರ್‍ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಬೇಕು. ಜೊತೆಗೆ hಣಣಠಿs://sಞiಟಟಛಿoಟಿಟಿeಛಿಣ.ಞಚಿushಚಿಟಞಚಿಡಿ.ಛಿom/ಛಿಚಿಟಿಜiಜಚಿಣeಡಿeg  ಲಿಂಕ್ ಮೂಲಕವು ಸಹ ನೊಂದಾಯಿಸಿಕೊಳ್ಳಬೇಕು. 
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಥವಾ ದೂ.ಸಂ 08226-295080, ಮೊ.ಸಂ 9900677922, 7892190137, ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಫೆ. 20ರಂದು ವಿವಿಧ ಉದ್ಯೋಗಗಳಿಗೆ ನೇರ ಸಂದರ್ಶನ
        ಚಾಮರಾಜನಗರ, ಫೆಬ್ರವರಿ 17:- ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ತಾಲೂಕಿನ ಬದನಗುಪ್ಪೆ ಮತ್ತು ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ಕಲರ್‍ಟೋನ್ ಟೆಕ್ಸ್‍ಟೈಲ್ ಪ್ರೈ.ಲಿ. ಇವರ ಸಹಯೋಗದೊಂದಿಗೆ ನಿರುದ್ಯೋಗ ಯುವಕ ಯುವತಿಯರಿಗೆ ಫೆಬ್ರವರಿ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಉದ್ಯೋಗ ನೇಮಕಾತಿಗಾಗಿ ನೇರ ಸಂದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 
      18 ರಿಂದ 25ರ ವಯೋಮಿತಿಯಲ್ಲಿರುವ ಮಹಿಳಾ ಹಾಗೂ ಪುರುಷ ಯಾವುದೇ ಪದವಿಧರರು, ಬಿ,ಎಸ್ಸಿ ಹಾಗೂ ಎಂ.ಎಸ್ಸಿ ಸ್ನಾತಕೋತ್ತರ ಪದವಿಧರರು ಭಾಗವಹಿಸಬಹುದು. ಅಲ್ಲದೇ ಐಟಿಐ (ಫಿಟ್ಟರ್) ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. 
      ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ-ವಿವರ, ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಎರಡು ಭಾವಚಿತ್ರದೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.       ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಿಲ್ಲಾ ಉದ್ಯೋಗಾಧಿಕಾರಿಗಳು ಅಥವಾ ಮೊ.ಸಂ 8884865299, ದೂ.ಸಂ 08226-224430 ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಘನ ತ್ಯಾಜ್ಯ ನಿರ್ವಹಣೆ ಕುರಿತ ವಾಹನ ತರಬೇತಿ ಪಡೆದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣಪತ್ರ ವಿತರಣೆ           ಚಾಮರಾಜನಗರ, ಫೆಬ್ರವರಿ 17:- ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಎನ್‍ಆರ್‍ಎಲ್‍ಎಂ ಜಿಲ್ಲಾ  ಘಟಕ ಹಾಗೂ ಸ್ವಚ್ಛ ಭಾರತ್ ಮಿಷನ್ ಸಹಯೋಗದೊಂದಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ವಾಹನ ತರಬೇತಿ ಪಡೆದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಇಂದು ನಗರದಲ್ಲಿ ನಡೆಯಿತು.
      ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಸ್ವ-ಸಹಾಯ ಸಂಘದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಗ್ರಾಮ ಪಂಚಾಯಿತಿಯಲ್ಲಿನ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಸ್ವ ಸಹಾಯ ಸಂಘದ ಮಹಿಳೆಯರ ತಂಡ ಯಶಸ್ವಿಯಾಗಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಲು ಕಾರ್ಯನಿರ್ವವಹಿಸಬೇಕು. ಇತರೆ ಸದಸ್ಯರು ವಾಹನ ತರಬೇತಿಗೆ ಬರುವಂತೆ ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ತೊಡಗಿಸಲು ಪ್ರೇರಣೆಯಾಗಿ ಎಂದು ಶುಭ ಹಾರೈಸಿದರು.
ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿ ಆಟೋ ಖರೀದಿ ಮಾಡಲಾಗಿದ್ದು, ವಾಹನಗಳ  ನಿರ್ವಹಣೆಗಾಗಿ ಸ್ವ-ಸಹಾಯ ಸಂಘದ ಸದಸ್ಯರಿಗೆ ತರಬೇತಿ ನೀಡಿ ವಾಹನ ಚಾಲನಾ ಪರವಾನಗಿ (ಡಿ.ಎಲ್) ಗಳನ್ನು ನೀಡಲಾಗುತ್ತಿದೆ. ಪ್ರಥಮ ಬಾರಿಗೆ ಹನೂರು ತಾಲೂಕಿನ 25 ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ 25 ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರನ್ನು ಆಯ್ಕೆ ಮಾಡಿ ಕೆಎಸ್‍ಆರ್‍ಟಿಸಿ ವಾಹನ ತರಬೇತಿ ಸಂಸ್ಥೆಯ ಮೂಲಕ ತರಬೇತಿ ನೀಡಲಾಗಿದೆ.
ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
       ಚಾಮರಾಜನಗರ, ಫೆಬ್ರವರಿ 17 – ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ನಡೆಯುತ್ತಿರುವ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ, ಗುಂಡ್ಲುಪೇಟೆ ತಾಲೂಕಿನ ಚಿಕ್ಕತುಪ್ಪೂರು, ಕೊಳ್ಳೇಗಾಲ ತಾಲೂಕಿನ ಮುಡಿಗುಂಡಂ ಹಾಗೂ ಯಳಂದೂರು ತಾಲೂಕಿನ ಮೆಲ್ಲಹಳ್ಳಿಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಯ ಮೂಲಕ 2023-24ನೇ ಸಾಲಿನ ದಾಖಲಾತಿಗಾಗಿ ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಶಾಲೆಗಳ ವಿದ್ಯಾಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
   ಪ್ರತಿ ಆದರ್ಶ ವಿದ್ಯಾಲಯಕ್ಕೆ 2023-24ನೇ ಸಾಲಿನಲ್ಲಿ 6ನೇ ತರಗತಿಗೆ 120 ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿಯನ್ನು ವೆಬ್‍ಸೈಟ್ ತಿತಿತಿ.ssಚಿಞಚಿಡಿಟಿಚಿಣಚಿಞಚಿ.gov.iಟಿ   ಮತ್ತು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ  ನಲ್ಲಿ ಮಾರ್ಚ್ 4ರವರೆಗೆ ಸಲ್ಲಿಸಬೇಕು. 
      ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಜಿಲ್ಲಾ ಯೋಜನಾ ಕಚೇರಿ ಮತ್ತು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಿ.ಆರ್.ಸಿ ಕೇಂದ್ರಗಳು ಹಾಗೂ ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಯರನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಫೆ. 20ರಂದು ಆಲತ್ತೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ : ಇತರೆ ತಾಲೂಕುಗಳ ಗ್ರಾಮಗಳಲ್ಲಿ ತಹಶೀಲ್ದಾರ್ ವಾಸ್ತವ್ಯ
       ಚಾಮರಾಜನಗರ, ಫೆಬ್ರವರಿ 17 – ಸಾರ್ವಜನಿಕರ ಅಹವಾಲು ಆಲಿಸಿ ಸರ್ಕಾರದ ವಿವಿಧ ಸವಲತ್ತುಗಳು ಮತ್ತು ಯೋಜನೆಗಳ ಅನುμÁ್ಠನ ಕುರಿತು ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮ ಸಂಬಂಧ ಫೆಬ್ರವರಿ 20ರಂದು ಗುಂಡ್ಲುಪೇಟೆ ತಾಲೂಕಿನ ಕಸಬಾ ಹೋಬಳಿಯ ಆಲತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಂದ ಅಹವಾಲುಗಳ ಸ್ವೀಕಾರ ಮಾಡಲಿದ್ದಾರೆ. ಜಿಲ್ಲೆಯ ಆಯಾ ತಾಲೂಕಿನ ತಹಶೀಲ್ದಾರರು ಆಯಾ ತಾಲೂಕಿನ ಗ್ರಾಮ ಒಂದರಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಹೋಬಳಿಯ ಗಂಗವಾಡಿ ಗ್ರಾಮ, ಯಳಂದೂರು ತಾಲೂಕಿನ ಕಸಬಾ ಹೋಬಳಿಯ ಯರಿಯೂರು ಗ್ರಾಮ, ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಜೀರಿಗೆ ಗದ್ದೆ ಗ್ರಾಮ ಹಾಗೂ ಕೊಳ್ಳೇಗಾಲ ತಾಲೂಕಿನ ಪಾಳ್ಯ ಹೋಬಳಿಯ ಮಧುವನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರರು ವಾಸ್ತವ್ಯ ಮಾಡಲಿದ್ದಾರೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments