Friday, April 19, 2024
spot_img
HomeChamarajanagarಕ್ರೀಡಾ ಚಟುವಟಿಕೆಗಳಿಂದ ಮನೋಲ್ಲಾಸ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಕ್ರೀಡಾ ಚಟುವಟಿಕೆಗಳಿಂದ ಮನೋಲ್ಲಾಸ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಪಾಲಾರ್ ಪತ್ರಿಕೆ | Palar Patrike

ಚಾಮರಾಜನಗರ:- ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮನೋಲ್ಲಾಸ ಹೆಚ್ಚುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.

ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿAದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿವಿಧ ಇಲಾಖೆಗಳು, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿಶೇಷಚೇತನರ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಜ್ಯೋತಿ ಬೆಳಗಿಸಿ ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಮನೋಭಾವನೆ ಮೆರೆಯಬೇಕು. ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ಮನಸ್ಸಿನ ಉಲ್ಲಾಸವನ್ನು ಹೆಚ್ಚಿಸುವಲ್ಲಿ ನೆರವಾಗಲಿದೆ ಎಂದು ಹೆಚ್ಚಿವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರು ಅಭಿಪ್ರಾಯಪಟ್ಟರು. ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷಿö್ಮÃ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ, ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ದೀಪಾ, ಗುಂಡ್ಲುಪೇಟೆಯ ಅಧಿಕಾರಿ ತಿಬ್ಬಯ್ಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೋವಿಂದ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಮೇಶ್, ಗೌರವಾಧ್ಯಕ್ಷರಾದ ಕೃಷ್ಣಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ವಿಶ್ವ ವಿಕಲಚೇತನರ ದಿನಾಚರಣೆಯ ಜಾಗೃತಿ ಜಾಥಾಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷಿö್ಮÃ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments