Saturday, April 20, 2024
spot_img
HomeChamarajanagarಜಿಲ್ಲೆಗೆ ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ...

ಜಿಲ್ಲೆಗೆ ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಸೂಚನೆ

ಚಾಮರಾಜನಗರ:- ಮುಖ್ಯಮಂತ್ರಿಯವರು ಜಿಲ್ಲೆಗೆ ಡಿಸೆಂಬರ್ ಮೊದಲ ವಾರದಲ್ಲಿ ಆಗಮಿಸಿ ನೆರವೇರಿಸಲಿರುವ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಅಚ್ಚುಕಟ್ಟಾಗಿ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ಮುಖ್ಯಮಂತ್ರಿಯವರ ಜಿಲ್ಲೆಯ ಭೇಟಿ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಯವರು ಜಿಲ್ಲೆಗೆ ಡಿಸೆಂಬರ್ 2 ಇಲ್ಲವೇ 4 ರಿಂದ 5ರೊಳಗೆ ಒಂದು ದಿನ ಭೇಟಿ ನೀಡಲಿದ್ದಾರೆ. ಚಾಮರಾಜನಗರ ಪಟ್ಟಣ ಹಾಗೂ ಹನೂರಿನಲ್ಲಿ ಕಾರ್ಯಕ್ರಮ ಏರ್ಪಾಡಾಗಿದ್ದು, ಬಳಿಕ ಮುಖ್ಯಮಂತ್ರಿಯವರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ಮಲೆ ಮಹದೇಶ್ವರ ಅಭಿವೃದ್ದಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ದತಾ ಕ್ರಮಗಳನ್ನು ವಹಿಸುವಂತೆ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಒಂದು ಸಾವಿರ ಕೋಟಿ ರೂ. ಗಳ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಯವರು ನೆರವೇರಿಸುವರು. ವಿವಿಧ ಇಲಾಖೆಗಳ ವ್ಯಾಪ್ತಿಯ ಫಲಾನುಭವಿಗಳಿಗೆÀ ಸವಲತ್ತುಗಳನ್ನು ವಿತರಿಸುವರು. ಈ ಬಹುದೊಡ್ಡ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಯೋಜನಾ ಬದ್ದವಾಗಿ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಪ್ರತಿ ಇಲಾಖೆಗಳು ತಮ್ಮ ವ್ಯಾಪ್ತಿಯ ಅಭಿವೃದ್ದಿ ಕಾರ್ಯಗಳ ಕುರಿತು ಸಂಪೂರ್ಣ ಮಾಹಿತಿ ಒದಗಿಸಬೇಕು. ಫಲಾನುಭವಿಗಳ ಆಧಾರಿತ ಕಾರ್ಯಕ್ರಮಗಳಿಗೆ ಅನುಗುಣವಾಗಿ ಕಾರ್ಯಕ್ರಮದಲ್ಲಿ ಸೌಲಭ್ಯಗಳನ್ನು ವಿತರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಕೊಳ್ಳೇಗಾಲದಿಂದ ಹನೂರುವರೆಗೆ ಕೆಶಿಪ್ ಯೋಜನೆಯಡಿ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು., ಕಾಮಗಾರಿ ವೇಗ ನೀಡಿ ಎಲ್ಲಿಯೂ ಅಡಚಣೆಯಾಗದಂತೆ ರಸ್ತೆ ಕಾಮಗಾರಿ ನಿರ್ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಜಿಲ್ಲೆಯ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು 1400 ಕೋಟಿ ರೂ. ವೆಚ್ಚದಲ್ಲಿ ವಿಸೃತ ಯೋಜನಾ ವರದಿ ಸಿದ್ದವಾಗಿದೆ. ಎರಡು ಹಂತಗಳಲ್ಲಿ ಯೋಜನೆ ಕೈಗೊಳ್ಳುವÀ ಸಂಬAಧ ಅಗತ್ಯ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಿರುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಮುಂದಾಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಶಾಸಕರಾದ ಎನ್. ಮಹೇಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಹಿರಿಯ ಅರಣ್ಯ ಅಧಿಕಾರಿಗಳಾದ ಡಾ. ಸಂತೋಷ್ ಕುಮಾರ್, ದೀಪಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನ. 21ರಂದು ಎಸ್.ಸಿ, ಎಸ್.ಟಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ

ಚಾಮರಾಜನಗರ, ನವೆಂಬರ್ 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ಕಾರ್ಯಕ್ರಮವನ್ನು ನವೆಂಬರ್ 21ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕಿನ ಸಂತೇಮರಹಳ್ಳಿಯ ಅರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ.

ಶಾಸಕರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಪಿ. ಶಂಕರಪ್ಪ, ಉಪಾಧ್ಯಕ್ಷರಾದ ಜ್ಯೋತಿ, ಕರ್ನಾಟಕ ಜಾನಪದ ಅಕಾಡಮಿ ಮಾಜಿ ಸದಸ್ಯರಾದ ಸಿ.ಎಂ. ನರಸಿಂಹಮೂರ್ತಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್ಸ್ಗೆ ಸಹಾಯಧನ

ಚಾಮರಾಜನಗರ, ನವೆಂಬರ್ 18 (ಕರ್ನಾಟಕ ವಾರ್ತೆ):- ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ರಾಷ್ಟಿçÃಯ ಕೃಷಿ ವಿಕಾಸ ಯೋಜನೆ (ಆರ್‌ಕೆವಿವೈ) ಯಡಿ ಪ್ಲಾಸ್ಟಿಕ್ ಕ್ರೇಟ್ಸ್ಗೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಯಡಿ ತೋಟಗಾರಿಕೆ ಬೆಳೆಗಳ ಫಸಲಿನಲ್ಲಿ ಹಣ್ಣು, ತರಕಾರಿ ಬೆಳೆ ಕೊಯ್ಲೂತ್ತರ ನಷ್ಟವನ್ನು ತಡೆಗಟ್ಟಲು ಹಾಗೂ ಸಮರ್ಪಕ ಕೊಯ್ಲೂತ್ತರ ನಿರ್ವಹಣೆಗೆ ಸಂಬAಧಿಸಿದ ಚಟುವಟಿಕೆಗಳಿಗೆ ಪ್ಲಾಸ್ಟಿಕ್ ಕ್ರೇಟ್ಸ್ ಬಳಕೆ ಪ್ರಮುಖ ಪಾತ್ರವಹಿಸುತ್ತದೆ. ಇಲಾಖೆ ಅನುಮೋದಿತ ಕಂಪನಿ, ಸಂಸ್ಥೆಗಳಿAದ ಮಾತ್ರ ಖರೀದಿಸುವ ಪ್ಲಾಸ್ಟಿಕ್ ಕ್ರೇಟ್ಸ್ಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ (ಆರ್‌ಕೆವಿವೈ ಯೋಜನೆಯಡಿ- ಶೇ. 25, ಹೊಂದಾಣಿಕೆ ವೆಚ್ಚ ಸಿಎಚ್‌ಡಿ ಯೋಜನೆಯಡಿ- ಶೇ.25) ರಂತೆ ಎರಡು ಕಂತುಗಳಲ್ಲಿ ಒಟ್ಟು 7500 ರೂ. ಗಳನ್ನು ಪ್ರತಿ ಹೆಕ್ಟೇರ್ ಗೆ (ಗರಿಷ್ಟ ಎರಡು ಹೆಕ್ಟೇರ್ ಮೀರದಂತೆ) ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಸೌಲಭ್ಯಕ್ಕಾಗಿ ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಗಣಕಿಕೃತ ಬೆಳೆ ದೃಡೀಕರಣ, ತೋಟಗಾರಿಕೆ ಬೆಳೆಯಿರುವ ತಾಕಿನ ಪೋಟೊ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಅನುಮೋದಿತ ಕಂಪನಿ, ಸಂಸ್ಥೆ ವಿವರವನ್ನು ಪಡೆದು ಪ್ಲಾಸ್ಟಿಕ್ ಕ್ರೇಟ್ಸ್ಗಳನ್ನು ಖರೀದಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವAತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಣಿಜ್ಯ ಹಣ್ಣಿನ ಬೆಳೆಗಳ ನಿರ್ವಹಣೆಗೆ ತೋಟಗಾರಿಕೆ ಇಲಾಖೆಯಿಂದ ಸಲಹೆ

ಚಾಮರಾಜನಗರ, ನವೆಂಬರ್ 18 (ಕರ್ನಾಟಕ ವಾರ್ತೆ):- ರಾಷ್ಟಿçÃಯ ಕೃಷಿ ವಿಕಾಸ ಯೋಜನೆ (ಆರ್‌ಕೆವಿವೈ) ಯಡಿ 2022-23ನೇ ಸಾಲಿನಲ್ಲಿ ಜಿಲ್ಲೆಯ ವಾಣಿಜ್ಯ ಹಣ್ಣಿನ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಸಪೋಟ, ದಾಳಿಂಬೆ, ನಿಂಬೆ, ಗೋಡಂಬಿ ಇತ್ಯಾದಿ ಬೆಳೆಗಳ ಮೇಲಾವರಣ ನಿರ್ವಹಣೆಗೆ ತೋಟಗಾರಿಕೆ ಇಲಾಖೆ ಸಲಹೆ ಮಾಡಿದೆ.
ಮಾವು, ಸೀತಾಫಲ, ಸೀಬೆ, ಸಪೋಟ, ದಾಳಿಂಬೆ, ನಿಂಬೆ, ಗೋಡಂಬಿ ಇತ್ಯಾದಿ ಬೆಳೆಗಳನ್ನು ಅಧಿಕ ಸಾಂದ್ರತೆ ನಾಟಿ ಪದ್ದತಿಯಲ್ಲಿ ಬೆಳೆಯಾಲಾಗುತ್ತಿದ್ದು, ಸದರಿ ಪದ್ದತಿಯಲ್ಲಿ ಗಿಡಗಳ ಅಂತರ ಅತಿ ಕಡಿಮೆ ಇರುವುದರಿಂದ ಗಿಡಗಳ ಮೇಲಾವರಣ ನಿರ್ವಹಣೆ ಅತ್ಯಾವಶ್ಯಕವಾಗಿರುತ್ತದೆ. ಇದರಿಂದ ಗುಣಮಟ್ಟದ ಹಣ್ಣುಗಳನ್ನು ಪಡೆಯುವುದಲ್ಲದೆ ತೋಟದ ನಿರ್ವಹಣೆ ಸುಲಭವಾಗಿರುತ್ತದೆ.

ಮೇಲಾವರಣ ನಿರ್ವಹಣೆಗಳಾದ ಕೀಟರೋಗ ಬಾದಿತ, ನೆಲಕ್ಕೆ ತಾಗುವ ಅನಗತ್ಯ ರೆಂಬೆ, ಕೊಂಬೆಗಳನ್ನು ಕತ್ತರಿಸಬೇಕು, ಸೂರ್ಯನ ಕಿರಣ ಎಲ್ಲಾ ಭಾಗಗಳಿಗೂ ಬೀಳುವಂತೆ ಮಾಡಬೇಕು, ಗಿಡ ಬೆಳೆಯಲು ಆಕಾರ ಕೊಡುವುದು ಪುನಶ್ಚೇತನ ಕೈಗೊಳ್ಳಲು ಇತ್ಯಾದಿ ಚಟುವಟಿಕೆಯನ್ನು ಕೈಗೊಳ್ಳಲು ಸದರಿ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ಶೇ. 25 ರಂತೆ 10000 ರೂ. ಗಳನ್ನು ಪ್ರತಿ ಹೆಕ್ಟೇರ್ ಗೆ (ಗರಿಷ್ಟ 2 ಹೆಕ್ಟೇರ್ ಗೆ ಮೀರದಂತೆ) ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅಧಿಕ ಸಾಂದ್ರತೆ ಪದ್ದತಿಯಲ್ಲಿ ಹಣ್ಣಿನ ಬೆಳೆ ನಾಟಿಮಾಡಿರುವ ಆಸಕ್ತ ರೈತರು ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ತಾಕಿನಲ್ಲಿ ಹಣ್ಣಿನ ಬೆಳೆಯೊಂದಿಗೆ ಛಾಯಚಿತ್ರ, ಗಣಕೀಕೃತ ಬೆಳೆ ದೃಡೀಕರಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಮಾಹಿತಿ ಪಡೆದು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments