Thursday, February 2, 2023
spot_img
HomeChamarajanagarಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕ ನಿರ್ವಹಣೆಗೆ ಮತದಾರರ ಪಟ್ಟಿ ವೀಕ್ಷಕರಾದ ಬಿ.ಬಿ. ಕಾವೇರಿ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕ ನಿರ್ವಹಣೆಗೆ ಮತದಾರರ ಪಟ್ಟಿ ವೀಕ್ಷಕರಾದ ಬಿ.ಬಿ. ಕಾವೇರಿ ಸೂಚನೆ

ಪಾಲಾರ್ ಪತ್ರಿಕೆ | Palare Patrike

ಚಾಮರಾಜನಗರ:- ಜಿಲ್ಲಾ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಿನಾಂಕ ೧-೦೧-೨೦೨೩ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಇದೇ ನವೆಂಬರ್ ೯ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಹಕ್ಕು ಆಕ್ಷೇಪಣೆಗಳನ್ನು ಆಯಾ ತಾಲೂಕಿನ ಮತಗಟ್ಟೆಗಳಲ್ಲಿ ಹಾಗೂ ತಾಲೂಕು ಕಚೇರಿಯಲ್ಲಿ ಡಿಸೆಂಬರ್ ೮ ರವರೆಗೂ ಸ್ವೀಕರಿಸಲಾಗುತ್ತಿದೆ. ಈ ಕಾರ್ಯವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಬಿ.ಬಿ. ಕಾವೇರಿ ಅವರು ತಿಳಿಸಿದರು.

ಹಕ್ಕು ಆಕ್ಷೇಪಣೆಗಳಿಗೆ ಸಂಬAಧಿಸಿದAತೆ ಅತ್ಯಂತ ಜಾಗರೂಕತೆಯಿಂದ ದಾಖಲೆಗಳನ್ನು ಸ್ವೀಕರಿಸಿ ಪರಿಶೀಲಿಸಬೇಕು. ಎಲ್ಲಿಯೂ ಯಾವುದೇ ಲೋಪಕ್ಕೆ ಅವಕಾಶವಾಗದ ಹಾಗೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅರ್ಹ ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು ಎಂದರು.

೧೮ರಿಂದ ೧೯ ವರ್ಷ ವಯಸ್ಸಿನವರು, ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಸಂಬAಧ ಹೆಚ್ಚು ಕೇಂದ್ರೀಕರಿಸಬೇಕು. ನೊಂದಣಿಗೆ ವಿಶೇಷ ಗಮನ ಹರಿಸಬೇಕು. ಈ ಬಗ್ಗೆ ಹೆಚ್ಚು ಪ್ರಚುರ ಪಡಿಸಬೇಕು. ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ವಹಿಸಬೇಕಿರುವ ಕ್ರಮಗಳ ಬಗ್ಗೆ ನಿಯಮ ಅನುಸಾರ ಎಲ್ಲವನ್ನೂ ಪಾಲನೆ ಮಾಡಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ಅತ್ಯಂತ ಮಹತ್ತರ ಜವಾಬ್ದಾರಿಯಾಗಿದೆ. ಈ ಕಾರ್ಯಕ್ಕೆ ಇತರೆ ಇಲಾಖೆಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಸಾಂವಿಧಾನಿಕ ಹೊಣೆಗಾರಿಕೆಯನ್ನು ಅಧಿಕಾರಿಗಳು ಎಚ್ಚರಿಕೆಯಿಂದ ನಿರ್ವಹಿಸಬೇಕು. ಮತದಾರ ಮಟ್ಟದ ಅಧಿಕಾರಿಗಳು ಸಹ ಪರಿಷ್ಕರಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಿ ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಪೂರಕವಾಗಿ ಕ್ರಮ ವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಅವರು ನಿರ್ದೇಶನ ನೀಡಿದರು.

ಇದೇ ವೇಳೆ ಮತಗಟ್ಟೆಯ ಮಟ್ಟದ ಅಧಿಕಾರಿ (ಬಿಎಲ್‌ಒ) ಗಳೊಂದಿಗೆ ಸಂವಾದ ನಡೆಸಿದ ಬಿ.ಬಿ. ಕಾವೇರಿ ಅವರು ಕಾರ್ಯನಿರ್ವಹಣೆ ಸಂಬAಧ ವಿವರ ಪಡೆದುಕೊಂಡರು. ರಾಷ್ಟಿçÃಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪೋಸ್ಟರ್ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಬಿ.ಬಿ. ಕಾವೇರಿ ಅವರು ಅಭಿನಂದಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಜಿಲ್ಲೆಯಲ್ಲಿ ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದ ಕುರಿತು ವಿವರ ಒದಗಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮತದಾರರ ಜಾಗೃತಿ ಸಂಬAಧ ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಉಪವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರಾದ ಬಸವರಾಜು, ರವಿಶಂಕರ್, ಮಂಜುಳಾ, ಆನಂದಯ್ಯ, ಗ್ರೇಡ್-೨ ತಹಶೀಲ್ದಾರ್ ಶಿವರಾಜು, ಚುನಾವಣಾ ತಹಶೀಲ್ದಾರ್ ಜಯಪ್ರಕಾಶ್, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments