Monday, March 4, 2024
spot_img
HomeChamarajanagarರೈತರ, ಜನಸಾಮಾನ್ಯರ ಸಮಸ್ಯೆ ಆಶೋತ್ತರಗಳಿಗೆ ಸ್ಪಂದಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ರೈತರ, ಜನಸಾಮಾನ್ಯರ ಸಮಸ್ಯೆ ಆಶೋತ್ತರಗಳಿಗೆ ಸ್ಪಂದಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಚಾಮರಾಜನಗರ :- ಜಿಲ್ಲೆಯ ರೈತರು ಹಾಗೂ ಜನ ಸಾಮಾನ್ಯರ ಸಮಸ್ಯೆ ಆಶೋತ್ತರಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ನಿರ್ಲಕ್ಷö್ಯ ಧೋರಣೆ ತೋರಿದರೆ ಸಹಿಸುವುದಿಲ್ಲ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ರೈತರಿಗೆ ಸಂಬAಧಿಸಿದ ವಿಷಯಗಳು ಹಾಗೂ ಕೆರೆಗಳಿಗೆ ನೀರು ತುಂಬಿಸುವ ಸಂಬAಧ ರೈತ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರು, ಜನಸಾಮಾನ್ಯರ ಹಿತ ಕಾಯುವುದಕ್ಕಾಗಿ ನಾವೆಲ್ಲಾ ಇದ್ದೇವೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು. ಅವರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಬೇಕು. ರೈತರ ಅನುಕೂಲಕ್ಕಾಗಿ ಇರುವ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಲೋಪವಾದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಕರ ನಿರಾಕರಣೆ ಸಂಬAಧ ವಿದ್ಯುತ್ ಬಾಕಿ ಮನ್ನಾ ಮಾಡುವ ಸಂಬAಧ ಸಚಿವ ಸಂಪುಟದ ಮುಂದೆ ತರುವ ನಿಟ್ಟಿನಲ್ಲಿ ಸೋಮವಾರ ಇಲ್ಲವೇ ಮಂಗಳವಾರವೇ ಅಧಿಕಾರಿಗಳು ಬೆಂಗಳೂರಿಗೆ ಬಂದು ಅಗತ್ಯ ಪ್ರಕ್ರಿಯೆ ವಹಿಸಬೇಕು ಎಂದು ಸಚಿವರು ಸೂಚಿಸಿದರು.

ರೈತ ಮುಖಂಡರು ಮಾತನಾಡಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಪರಿಶೀಲನೆಗೆ ಚೆಕ್‌ಪೋಸ್ಟ್ಗಳನ್ನು ತೆರೆಯಬೇಕು. ಬ್ಯಾಂಕ್‌ಗಳಲ್ಲಿ ರೈತರಿಗೆ ಸಾಲ ನೀಡುತ್ತಿಲ್ಲ. ಈ ಬಗ್ಗೆ ನಿರ್ದೇಶನ ನೀಡಬೇಕು. ಹಾವು ಕಚ್ಚಿದರೆ ನೀಡಲಾಗುವ ಪರಿಹಾರ ಹೆಚ್ಚಳವಾಗಬೇಕು. ಪರಿಹಾರ ಪಡೆಯಲು ಹಾಲಿ ಇರುವ ನಿಯಮಗಳನ್ನು ಸಡಲಿಕೆ ಮಾಡಬೇಕು. ಪ್ರತಿ ಟನ್ ಕಬ್ಬಿಗೆ ಹೆಚ್ಚಿನ ಬೆಲೆ ನಿಗದಿ ಮಾಡಬೇಕು. ರಾಗಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನಬೆಟ್ಟ ಪೋಡುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಹೊರ ಜಿಲ್ಲೆಗಳ ಕಬ್ಬನ್ನು ಇಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಅರೆಯಬಾರದು. ಕಬ್ಬಿಗೆ ಎಫ್.ಆರ್.ಪಿ 500 ರೂ. ಕೊಡಿಸಬೇಕು. ಆನೆ ಮಡುವಿನ ಕೆರೆಗೆ ನೀರು ಹರಿಸಬೇಕು. ಎಪಿಎಂಸಿಗಳಲ್ಲಿ ಪಡೆಯುತ್ತಿರುವ ಕಮಿಷನ್ ನಿಲ್ಲಬೇಕು ಎಂಬುದು ಸೇರಿದಂತೆ ಹಲವಾರು ವಿಷಯಗಳನ್ನು ಸಭೆಯಲ್ಲಿ ವಿವರವಾಗಿ ಪ್ರಸ್ತಾಪಿಸಿದರು.

ಎಲ್ಲಾ ಅಹವಾಲು, ಸಮಸ್ಯೆಗಳನ್ನು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಮಾತನಾಡಿ ಇಲಾಖೆಗಳು ರೈತರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಕಮಿಷನ್ ಪಡೆಯಬಾರದು. ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಬೇಕು. ವಾರಕ್ಕೆ ಒಂದು ದಿನ ರೈತರ ಸಭೆ ಕರೆದು ಅವರ ಸಮಸ್ಯೆಗಳನ್ನು ಪರಿಹರಿಸಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಹಾಡಿ ಪೋಡುಗಳ ಜನರಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳಬೇಕು. ವಿದ್ಯುತ್ ಸಂಪರ್ಕ ಕಡಿತ ಮಾಡಬಾರದು ಎಂದರು.

ಜಿಲ್ಲೆಯ ಪ್ರಕೃತಿ ಸಂಪತ್ತು ಲೂಟಿಯಾಗುವುದನ್ನು ತಡೆಯಬೇಕು. ಅಕ್ರಮ ಗಣಿಗಾರಿಕೆಗೆ ಅವಕಾಶವಾಗಬಾರದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಬೇಕು. ನಿರ್ದಾಕ್ಷಿಣ್ಯವಾಗಿ ಅಕ್ರಮವಾಗಿ ಗಣಿಗಾರಿಕೆ ಮಾಡುವವರ ವಿರುದ್ದ ಕ್ರಮ ಜರುಗಿಸಿ ಎಂದು ಸಚಿವರು ತಿಳಿಸಿದರು.

ಆನೆಮಡುವಿನ ಕೆರೆಗೆ ಸಮರ್ಪಕವಾಗಿ ಯಾವುದೇ ತೊಂದರೆಯಾಗದAತೆ ನೀರು ಹರಿಸಲಾಗುತ್ತದೆ. ಕಬ್ಬು ಬೆಳೆಗಾರರ ಸಮಸ್ಯೆ ತಮಗೆ ಅರಿವಿದೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಗಮನಕ್ಕೆ ತರಲಾಗುವುದು. ರೈತರಿಗೆ ಸಾಗುವಳಿ ಪತ್ರ, ದುರಸ್ತಿ, ಪೋಡು ಇನ್ನಿತರ ಕಂದಾಯ ಇಲಾಖೆಯಿಂದ ಆಗಬೇಕಿರುವ ಕೆಲಸಗಳಿಗೆ ತ್ವರಿತವಾಗಿ ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್. ಮಹೇಶ್, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕುಲಕರ್ಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ, ಹಿರಿಯ ಅರಣ್ಯ ಅಧಿಕಾರಿಗಳಾದ ಡಾ. ಸಂತೋಷ್ ಕುಮಾರ್, ರಮೇಶ್ ಕುಮಾರ್, ದೀಪಾ, ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಮಹೇಶ್ ಪ್ರಭು, ಡಾ. ಗುರುಪ್ರಸಾದ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಹೆಗ್ಗವಾಡಿಪುರ ಮಹೇಶ್‌ಕುಮಾರ್, ಕಡಬೂರು ಮಂಜುನಾಥ್, ಶಾಂತಮಲ್ಲಪ್ಪ, ಶೈಲೇಂದ್ರ, ಮಹದೇವಪ್ಪ, ಸೇರಿದಂತೆ ಇತರೆ ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಗೂ ಮೊದಲು ಸಚಿವರು ಕೆರೆಗಳಿಗೆ ನೀರು ತುಂಬಿಸುವ ಸಂಬAಧ ತಮ್ಮಡಹಳ್ಳಿ ಕೆರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments