Friday, March 31, 2023
spot_img
HomeChamarajanagarಪ್ರತಿಯೊಬ್ಬರಿಗೂ ಮತದಾನದ ಅರಿವು ಅಗತ್ಯ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ

ಪ್ರತಿಯೊಬ್ಬರಿಗೂ ಮತದಾನದ ಅರಿವು ಅಗತ್ಯ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯಿತ್ರಿ

ಚಾಮರಾಜನಗರ:- ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸ್ವೀಪ್ ಕಾರ್ಯಕ್ರಮಗಳ ಮುಖಾಂತರ ಪ್ರತಿಯೊಬ್ಬರಿಗೂ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.

ನಗರದ ಸಂತಪೌಲರ ಪ್ರೌಢಶಾಲೆಯಲ್ಲಿಂದು ಜಿಲ್ಲಾ ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮತದಾರರ ಸಾಕ್ಷರತಾ ಸಂಘ ಇವರ ಸಹಯೋಗದೊಂದಿಗೆ ರಾಷ್ಟಿçÃಯ ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳಾದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತವು ಪ್ರಜಾಪ್ರಭುತ್ವ ರಾಷ್ಟçವಾಗಿದ್ದು, ಮತದಾನದ ಮೂಲಕ ಅರ್ಹ ನಾಯಕರನ್ನು ಆಯ್ಕೆ ಮಾಡಬೇಕಾಗಿರುವ ನಿಟ್ಟಿನಲ್ಲಿ ಅನೇಕ ವರ್ಷಗಳಿಂದ ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಪಾರದರ್ಶಕತೆ ಇರಬೇಕೆಂಬ ಉದ್ದೇಶದಿಂದ ಒಂದೊAದು ಮತವೂ ಪ್ರಾಮುಖ್ಯತೆ ಪಡೆದಿದೆ. ಮತದಾನದ ಹಕ್ಕನ್ನು ಚಲಾಯಿಸುವ ಬಗ್ಗೆ ಅರಿವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜಕನಿಕರಿಗೆ ಮೂಡಿಸಬೇಕಾಗಿದೆ. ಮತದಾನದ ಮೂಲಕ ಸೂಕ್ತ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮದಾಗಿರುತ್ತದೆ ಎಂದು ತಿಳಿಸಿದರು.

ಪ್ರತಿ ವರ್ಷದಂತೆ ರಾಷ್ಟಿçÃಯ ಮತದಾರರ ದಿನಾಚರಣೆಯನ್ನು ಜನವರಿ ೨೫ರಂದು ಆಚರಿಸಲಾಗುತ್ತಿದ್ದು, ೧೮ ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕಾಗಿರುವುದರಿಂದ ಈಗಾಗಲೇ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊAಡಿರುವ ವಿದ್ಯಾರ್ಥಿಗಳು ಚುನಾವಣಾ ಆಯೋಗದಿಂದ ಹೊರಡಿಸಲಾಗಿರುವ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ತಿದ್ದುಪಡಿ, ಬದಲಾವಣೆಗಳಿದ್ದಲ್ಲಿ ಪರಿಶೀಲಿಸಿ ವೈಯಕ್ತಿಕ ಮಾಹಿತಿಗಳನ್ನು ಪರಿಷ್ಕರಣೆ ಮಾಡಿಕೊಳ್ಳುವಂತೆ ತಿಳಿಸಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಯನ್ನು ತಿಳಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಅತ್ಯಂತ ಮಹತ್ವದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಬೇಕು ಎಂದರು.

ವಿದ್ಯಾರ್ಥಿಗಳು ಮನೆಯಲ್ಲಿರುವ ೧೮ ವರ್ಷ ತುಂಬಿದ ಕುಟುಂಬದ ಇತರೆ ಸದಸ್ಯರುಗಳು ಹಾಗೂ ಸಾರ್ವಜನಿಕರನ್ನು ಸಹ ಮತದಾನಕ್ಕೆ ನೋಂದಣಿ ಮಾಡಿಸಲು ಮತ್ತು ಮತದಾನದಲ್ಲಿ ಪಾಲ್ಗೊಳ್ಳಲು ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.

ತಾಲ್ಲೂಕು ಮಟ್ಟದ ವಿವಿಧ ಶಾಲೆಗಳಿಂದ ಆಯ್ಕೆಯಾಗಿರುವ ಒಟ್ಟು ೫೫ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಉಪ ಸಮನ್ವಾಯಾಧಿಕಾರಿ ಲಕ್ಷಿö್ಮಪತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಮತದಾನದ ಮೂಲಕ ರಾಷ್ಟç ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. : ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ

ಚಾಮರಾಜನಗರ, ನವೆಂಬರ್ ೧೯ (ಕರ್ನಾಟಕ ವಾರ್ತೆ):- ಮತದಾನದ ಕಾರ್ಯದಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತ ಚಲಾವಣೆಯ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಷ್ಟçವನ್ನು ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆ, ಚುನಾವಣಾ ಸಾಕ್ಷರತಾ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿವರ್ಷ ಜನವರಿ ೨೫ರಂದು ರಾಷ್ಟಿçÃಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದ್ದು, ೧೮ ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಮತದಾನದಲ್ಲಿ ಭಾಗವಹಿಸುವಂತೆ ಹಾಗೂ ಮತದಾನದ ಪ್ರಾಮುಖ್ಯತೆ ಮತ್ತು ಮತದಾನದ ಸಾಕ್ಷರತೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಒಟ್ಟು ೩೦೯ ಮತದಾರರ ಸಂಘಗಳನ್ನು ರಚಿಸಲಾಗಿದ್ದು, ಈ ಮೂಲಕ ಮತದಾನದ ಶಿಕ್ಷಣ, ಅರಿವು ಮತ್ತು ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಚಟುವಟಿಕೆಗಳ ಮೂಲಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.

ಮುAಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅರಿವು ಹಾಗೂ ಮಹತ್ವವನ್ನು ತಿಳಿಯಬೇಕಾಗಿದೆ. ೧೮ ವರ್ಷ ತುಂಬಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು. ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊAಡಿರುವ ವಿದ್ಯಾರ್ಥಿಗಳು ಚುನಾವಣಾ ಆಯೋಗ ಹೊರಡಿಸಿರುವÀ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ತಿದ್ದುಪಡಿ, ಇತರೆ ಬದಲಾವಣೆಗಳಿದ್ದಲ್ಲಿ ಖಾತರಿಪಡಿಸಿಕೊಳ್ಳುವಂತೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments