Saturday, April 13, 2024
spot_img
HomeChamarajanagarಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಬೇಸಿಗೆ ವೇಳೆ ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಈಗಿನಿಂದಲೇ ಸಮರ್ಪಕ ನಿರ್ವಹಣೆಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಶೀಲನಾ ಸಭೆಯ ಅಧ್ಯಕ್ಷೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರಿಗೆ ಸಂಬAಧಿಸಿದAತೆ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಈಗಲೇ ಗುರುತಿಸಬೇಕು. ಕಳೆದ ಬೇಸಿಗೆ ಸಮಯದಲ್ಲಿ ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಬವಣೆ ತಲೆದೋರಿದೆಯೋ ಅಂತಹ ಗ್ರಾಮಗಳ ಕಡೆ ವಿಶೇಷ ಗಮನ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಕಂಡುಕೊಳ್ಳಬೇಕಿರುವ ಪರಿಹಾರ ಕ್ರಮಗಳ ಬಗ್ಗೆ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ನಗರ ಪಟ್ಟಣ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಕೊರತೆ ಕಾಡಬಾರದು. ನೀರು ಪೂರೈಕೆಗೆ ಇರುವ ಮೂಲಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ನೀರು ಸಂಗ್ರಹಣೆ, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾವಹಿಸಬೇಕು ಎಂದರು.

ಗ್ರಾಮಾಂತರ ಭಾಗಗಳಲ್ಲಿ ಬೇಸಿಗೆ ಸಂದರ್ಭ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಾರದು. ಮೇವು ಪೂರೈಕೆಗಾಗಿ ದಾಸ್ತಾನು ನಿರ್ವಹಣೆಯು ಇರಬೇಕು. ಮೇವು ಲಭ್ಯತೆಯನ್ನು ಗುರುತಿಸಿ ಅಗತ್ಯ ಸಂದರ್ಭದಲ್ಲಿ ಸರಬರಾಜು ಮಾಡುವ ಸಂಬAಧ ಕ್ರಮಗಳಿಗೆ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಮುಂದಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗೆ ಆಗಿರುವ ಮಳೆ, ಬೆಳೆ, ಕೃಷಿ ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ಸಂಬAಧಿಸಿದ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ರೈತರು ಬೆಳೆಗಾರರಿಗೆ ನೆರವಾಗಬೇಕು. ಬೇಸಿಗೆ ವೇಳೆ ಕೆರೆಗಳ ನಿರ್ವಹಣೆಯ ಕಾರ್ಯವೂ ಉತ್ತಮವಾಗಿರಬೇಕು. ಜಿಲ್ಲೆಯಲ್ಲಿ ಅರಣ್ಯ ಪ್ರದೇಶವು ಹೆಚ್ಚಿದ್ದು ಬೇಸಿಗೆ ವೇಳೆ ಕಾಣಿಸಿಕೊಳ್ಳಬಹುದಾದ ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ ಸಜ್ಜಾಗಿರಬೇಕು. ಅರಣ್ಯ ಇಲಾಖೆಗೆ ಕಂದಾಯ, ಪೊಲೀಸ್ ಸೇರಿದಂತೆ ಇತರೆ ಇಲಾಖೆಗಳು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದರು.

ಬೇಸಿಗೆ ಕಾಲದಲ್ಲಿ ಹರಡಬಹುದಾದ ಸಾಂಕ್ರಮಿಕ ರೋಗಗಳ ತಡೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿದ ಜಿಲ್ಲಾಧಿಕಾರಿಯವರು ಬೇಸಿಗೆ ಸಂದರ್ಭ ಜನರ ಆರೋಗ್ಯ ಸಂಬAಧಿ ಚಟುವಟಿಕೆಗಳ ಬಗ್ಗೆ ಹೆಚ್ಚು ಸಕ್ರಿಯರಾಗಬೇಕು. ಶುದ್ದ ಕುಡಿಯುವ ನೀರು ಪೂರೈಕೆಯಾಗಬೇಕು. ನೀರಿನ ಸರಬರಾಜು ಸ್ಥಳಗಳಲ್ಲಿ ಶುದ್ದೀಕರಣ ಕಾರ್ಯಕ್ಕೆ ವಿಶೇಷ ಗಮನ ನೀಡಬೇಕು. ನೀರಿನ ಮಾದರಿಗಳ ಪರೀಕ್ಷೆ ನಡೆಸಿ ವರದಿ ಪಡೆದುಕೊಳ್ಳಬೇಕು ಎಂದರು.

ಕೋವಿಡ್ ನಿಯಂತ್ರಣ ಹಾಗೂ ಲಸಿಕಾಕರಣದ ವಿವರ ಪಡೆದ ಜಿಲ್ಲಾಧಿಕಾರಿಯವರು ಎರಡನೇ ಡೋಸ್ ಲಸಿಕೆ ನೀಡುವ ಕಾರ್ಯದಲ್ಲಿ ಇನ್ನೂ ಕೆಲವು ಭಾಗಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಗತಿ ಸಾಧಿಸಬೇಕಿದೆ. ಯಾವ ಪ್ರದೇಶದಲ್ಲಿ ಎರಡನೇ ಡೋಸ್ ನೀಡುವುದು ಬಾಕಿ ಇದೆಯೋ ಅಂತಹ ಕಡೆ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಲಸಿಕಾಕರಣದಲ್ಲಿ ಪ್ರಗತಿಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಆಯಾ ತಾಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೇಸಿಗೆ ಸಂದರ್ಭದಲ್ಲಿ ನಿರ್ವಹಿಸಬೇಕಿರುವ ಕುಡಿಯುವ ನೀರು, ಮೇವು, ಕೆರೆಗಳ ನಿರ್ವಹಣೆ, ಸಾಂಕ್ರಮಿಕ ರೋಗಗಳ ಹರಡುವಿಕೆ ತಡೆಯುವುದು ಸೇರಿದಂತೆ ಇತರೆ ಪ್ರಮುಖ ವಿಷಯಗಳ ಕುರಿತು ಸಭೆ ನಡೆಸಬೇಕು. ಯಾವುದೇ ಸಮಸ್ಯೆಗಳು ತೊಂದರೆ ಬಾರದಂತೆ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರರಾದ ಚಿದಾನಂದ ಗುರುಸ್ವಾ,ಮಿ, ಆನಂದಪ್ಪ ನಾಯಕ್, ರವಿಶಂಕರ್, ಮಂಜುಳಾ, ನಾಗರಾಜು, ಯಳಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳಾದ ಡಿ.ಆರ್. ಮಹೇಶ್, ಪ್ರೇಮ್‌ಕುಮಾರ್, ಶ್ರೀಕಂಠರಾಜೇಅರಸ್, ಧರಣೇಶ್, ಜಂಟಿ ಕೃಷಿ ನಿರ್ದೇಶಕರಾದ ಹೆಚ್.ಟಿ. ಚಂದ್ರಕಲಾ, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ಸುರೇಶ್, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಶಿವಪ್ರಸಾದ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ನವೀನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments