Wednesday, April 24, 2024
spot_img
HomeChikballapurವಿಪ್ ಉಲ್ಲಂಘನೆ ಪ್ರಕರಣಕ್ಕೆ ಹೈಕೋರ್ಟ್ ತಿರುವು 4 ವಾರಗಳಲ್ಲಿ ಇತ್ಯರ್ಥಕ್ಕೆ ಡಿಸಿಗೆ ಸೂಚನೆ

ವಿಪ್ ಉಲ್ಲಂಘನೆ ಪ್ರಕರಣಕ್ಕೆ ಹೈಕೋರ್ಟ್ ತಿರುವು 4 ವಾರಗಳಲ್ಲಿ ಇತ್ಯರ್ಥಕ್ಕೆ ಡಿಸಿಗೆ ಸೂಚನೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ಸದಸ್ಯರ ವಿರುದ್ಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣವನ್ನು ನಾಲ್ಕು ವಾರದೊಳಗೆ ಇತ್ಯರ್ಥಪಡಿಸ ಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.

ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ರಾಜಕೀಯ ಇತಿಹಾಸದಲ್ಲೇ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಿ ಸೂಚಕರಾಗಿದ್ದವರೇ ಕೋನೆ ಕ್ಷಣದಲ್ಲಿ ಉಲ್ಟಾ ಹೊಡೆದಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿದ್ದ ಅಂಬಿಕಾ ಅವರಿಗೆ ಸೂಚಕರಾಗಿದ್ದ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ನಗರಸಭೆಯ ಹಿರಿಯ ಸದಸ್ಯ ೧೭ನೇ ವಾರ್ಡ್ ಸದಸ್ಯ ಎಸ್‌ಎಂ ರಫೀಕ್ ೨೧ನೇ ವಾರ್ಡ್ ಸದಸ್ಯರು ಅಪ್ಜಲ್ ವಾರ್ಡ್ ನಂ.೨೮ರ ಸದಸ್ಯ ಎನ್ ಎಸ್ ಚಂದ್ರಶೇಖರ್, ವಾರ್ಡ್ ೩೦ರ ಸದಸ್ಯೆ ಪಿ ಎಚ್ ಮೀನಾಕ್ಷಿ, ವಾರ್ಡ್ ನಂಬರ್ ೨ ರ ಸದಸ್ಯೆ ರತ್ನಮ್ಮ, ವಾರ್ಡ್ ೩ ರ ಸದಸ್ಯೆ ಶಕೀಲಾ ಭಾನು ಸೇರಿದಂತೆ ಒಟ್ಟು ಏಳು ಜನ ನಗರಸಭೆ ಸದಸ್ಯರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದ ವಿಪ್ ಅನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರೂ ಸಹ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಪರ ಮತ ಚಲಾಯಿಸಿ ಸಂಚಲನ ಉಂಟು ಮಾಡಿದ್ದರು.

ಕೊನೆಕ್ಷಣದಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟು ಕಮಲದ ಕೈಹಿಡಿದಿದ್ದರು. ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷದ ಸದಸ್ಯರ ಮತಗಳನ್ನು ಪಡೆದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು ಇದು ವ್ಯಾಪಕ ಟೀಕೆಗೆ ಸಹ ಗುರಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕಾಂಗ್ರೆಸ್ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ನ್ಯಾಯಾಲಯ ದಲ್ಲಿ ಪ್ರಕರಣ ದಾಖಲಿಸಿದ್ದರು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ತ್ವರಿತವಾಗಿ ಪ್ರಕರಣ ಇತ್ಯರ್ಥ ಪಡಿಸಲು ಅನಗತ್ಯ ವಿಳಂಬ ಮಾಡುತ್ತಾ ಸಾಗಿದ್ದು ವಿಪ್ ಉಲ್ಲಂಘನೆ ಮಾಡಿದವರನ್ನು ರಕ್ಷಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು . ಜಿಲ್ಲಾಧಿಕಾರಿಗೆ ನ್ಯಾಯಾಲಯದ ವಿಳಂಬ ಧೋರಣೆ ಪ್ರಶ್ನಿಸಿ ರಾಜ್ಯ ಉಚ್ಚ ನ್ಯಾಯಾಲಯ ದಲ್ಲಿ ಪ್ರಕರಣ ದಾಖಲಿಸಿದ್ದು ವಿಚಾರಣೆ ನಡೆಸಿದ ಹೈಕೋರ್ಟ್ ನಾಲ್ಕು ವಾರಗಳಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ಆದೇಶ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ದಾಖಲೆ ಆಗಿದ್ದ ಎಲ್ಲಾ ಪ್ರಕರಣಗಳು ಇತ್ಯರ್ಥವಾಗಿದ್ದು ವಿಪ್ ಉಲ್ಲಂಘನೆ ಮಾಡಿದವರನ್ನು ಅನರ್ಹಗೊಳಿಸ ಲಾಗಿದೆ. ಶಿವಮೊಗ್ಗ ಅರಸೀಕೆರೆ ಚಾಮರಾಜ ನಗರಗಳಲ್ಲಿ ಪ್ರಕರಣಗಳು ಇತ್ಯರ್ಥಗೊಂಡಿದ್ದು ಅದನ್ನು ಪ್ರಶ್ನಿಸಿ ಅನರ್ಹಗೊಂಡ ಸದಸ್ಯರು ಸಲ್ಲಿಸಿದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಒಟ್ಟಾರೆ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದ ಚಿಕ್ಕಬಳ್ಳಾಪುರ ಸದಸ್ಯರ ಭವಿಷ್ಯ ನಾಲ್ಕು ವಾರಗಳಲ್ಲಿ ನಿರ್ಣಯವಾಗಲಿದೆ.

ಈ ನಡುವೆ ಈ ಪಕ್ಷಾಂತರ ನಿಷೇಧ ಕಾಯ್ದೆಯ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿರುವ ಸದಸ್ಯರು ಮರಳಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಪ್ರಕರಣದ ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments