Saturday, April 27, 2024
spot_img
HomeChikballapurತಂಬಾಕು ಉತ್ಪನ್ನಗಳ ಸೇವನೆ ನಿಯಂತ್ರಣ ಕುರಿತ ಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ

ತಂಬಾಕು ಉತ್ಪನ್ನಗಳ ಸೇವನೆ ನಿಯಂತ್ರಣ ಕುರಿತ ಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ

ಚಿಕ್ಕಬಳ್ಳಾಪುರ: ರಾಷ್ಟ್ರೀಯ ತಂಬಾಕು  ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ  ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ -2003 ಕಾಯ್ದೆಯ ಬಗ್ಗೆ ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯಾಂದ್ಯತ 10 ದಿನಗಳ ಕಾಲ ಧ್ವನಿ ವರ್ಧಕದ  ಮೂಲಕ  ಹಾಗೂ ಚಿತ್ರಸಹಿತವಾಗಿ ಪ್ರಚಾರ ಮಾಡಿ  ಜಾಗೃತಿ  ಮೂಡಿಸುವ  ಸಂಚಾರಿ ವಾಹನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್ ಕಬಾಡೆ ರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು , ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಚನ್ನಕೇಶವ ರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್ , ಎನ್.ಟಿ.ಸಿ.ಪಿ ಕಾರ್ಯಕ್ರಮದ ಸಮಾಲೋಚಕರು ರಾಘವೇಂದ್ರರೆಡ್ಡಿ ಹಾಗೂ ಸಮಾಜ ಕಾರ್ಯಕರ್ತರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments